ತುಮಕೂರು: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯು ರಾಜಾಮನೆ ಇನ್ನೋವೇಷನ್ ಸಂಸ್ಥೆಯ ಸಹಭಾಗಿತ್ವದಲ್ಲಿ ನಿರುದ್ಯೋಗಿಗಳಿಗೆ ಉದ್ಯೋಗ ನೀಡುವ ಸಲುವಾಗಿ ಅಕ್ಟೋಬರ್ 29ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನವನ್ನು ಏರ್ಪಡಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ತಮ್ಮ ಸ್ವವಿವರಗಳೊಂದಿಗೆ ಹಾಜರಾಗಬಹುದಾಗಿದೆ.
ಎಸ್.ಎಸ್.ಎಲ್.ಸಿ, ಪಿ.ಯು.ಸಿ., ಐ.ಟಿ.ಐ ಹಾಗೂ ಡಿಪ್ಲೊಮಾ(ಯಾವುದೇ ಟ್ರೇಡ್)ಪಾಸಾದ ಅಭ್ಯರ್ಥಿಗಳು ಈ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0816–2278488, ಮೊ.ಸಂ. 9071021143, 9513136642ನ್ನು ಸಂಪರ್ಕಿಸಬೇಕೆಂದು ಜಿಲ್ಲಾ ಉದ್ಯೋಗ ವಿನಿಮಯಾಧಿಕಾರಿ ಕಿಶೋರ್ ಕುಮಾರ್ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296