ತುಮಕೂರು: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಏಮ್’ ಸ್ಕ್ವೇರ್ ಕಾರ್ಪೊರೇಷನ್ ಹಾಗೂ ಅಗಸ್ತ್ಯ ಫೌಂಡೇಶನ್ ವತಿಯಿಂದ ಮಾರ್ಚ್ 7ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನಿರುದ್ಯೋಗಿಗಳಿಗಾಗಿ ನೇರ ಸಂದರ್ಶನ ಏರ್ಪಡಿಸಲಾಗಿದೆ.
ಎಸ್.ಎಸ್.ಎಲ್.ಸಿ, ಬಿ.ಎಸ್ಸಿ ಬಿ.ಎಡ್, ಎಂ.ಎಸ್ಸಿ ಬಿ.ಎಡ್, ಬಿ.ಎ ಬಿ.ಎಡ್ ಹಾಗೂ ಎಂ.ಕಾಂ ತೆರ್ಗಡೆಯಾದ ಅಭ್ಯರ್ಥಿಗಳು ತಮ್ಮ ಬಯೋಡೇಟಾದೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0816-2278488, ಮೊ.ಸಂ. 9071021143/ 9513136642ನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4