ತುಮಕೂರು: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಟೀಮೆಕ್(TMEIC), ಸಿಗ್ನಲ್ ಸ್ವಿಚ್ ಡಿವೈಸಸ್ ಅಂಡ್ ಸಿಸ್ಟಮ್ ಹಾಗೂ ಅಗಸ್ತ್ಯ ಇಂಟರ್ ನ್ಯಾಷನಲ್ ಫೌಂಡೇಶನ್ ಸಂಸ್ಥೆಯ ಸಹಭಾಗಿತ್ವದಲ್ಲಿ ನಿರುದ್ಯೋಗಿಗಳಿಗೆ ಉದ್ಯೋಗ ನೀಡಲು ನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಅಕ್ಟೋಬರ್ 18ರಂದು ಬೆಳಿಗ್ಗೆ 10 ಗಂಟೆಗೆ ನೇರ ಸಂದರ್ಶನ ನಡೆಯಲಿದೆ.
ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಐ.ಟಿ.ಐ(Fitter, Electrician, Welder and painter), ಡಿಪ್ಲೊಮಾ(Electrical and Electronics, Electronics and communication and Mechanical) ಹಾಗೂ ಬಿ.ಎ., ಬಿ.ಎಸ್ಸಿ., ಎಂ.ಕಾಂ. & ಬಿ.ಎಡ್. ಪಾಸಾದ ಅಭ್ಯರ್ಥಿಗಳು ತಮ್ಮ ಬಯೋಡೇಟಾದೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0816-2278488, ಮೊ.ಸಂ. 9071021143 / 9513136642ನ್ನು ಸಂಪರ್ಕಿಸಬೇಕೆಂದು ಜಿಲ್ಲಾ ಉದ್ಯೋಗಾಧಿಕಾರಿ ಕಿಶೋರ್ ಕುಮಾರ್ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296