ತುಮಕೂರು: ಜಿಲ್ಲೆಯ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಖಾಲಿ ಇರುವ 28 ತುರ್ತು ಚಿಕಿತ್ಸಾ ವೈದ್ಯರ ಹುದ್ದೆಗಳನ್ನು ಒಂದು ವರ್ಷದ ಅವಧಿಗೆ ಭರ್ತಿ ಮಾಡಲು ಜನವರಿ 23ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ನೇರ ಸಂದರ್ಶನವನ್ನು ಏರ್ಪಡಿಸಲಾಗಿದೆ.
ಎಂ.ಬಿ.ಬಿ.ಎಸ್. ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ಷರತ್ತು ಮತ್ತು ನಿಬಂಧನೆಗೊಳಪಟ್ಟು ಭರ್ತಿ ಮಾಡಲಾಗುವುದು.
ಆಯ್ಕೆಯಾದವರಿಗೆ ಮಾಸಿಕ 60,000ರೂ.ರಂತೆ ಸಂಚಿತ ವೇತನವನ್ನು ನೀಡಲಾಗುವುದು. ಆಸಕ್ತರು ಅಗತ್ಯ ಮೂಲ ದಾಖಲಾತಿಗಳೊಂದಿಗೆ ನಿಗದಿತ ದಿನಾಂಕದಂದು ನಡೆಯುವ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮೊ.ಸಂ.9449843064ನ್ನು ಸಂಪರ್ಕಿಸಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಚಂದ್ರಶೇಖರ್ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx