ತುಮಕೂರು: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮೆಡ್ ಪ್ಲಸ್ ಹಾಗೂ ಸಿದ್ಧಿ ಅಸೋಸಿಯೇಟ್ಸ್ ಸಂಸ್ಥೆಯ ಸಹಭಾಗಿತ್ವದಲ್ಲಿ ಡಿಸೆಂಬರ್ 20ರ ಬೆಳಿಗ್ಗೆ 10 ಗಂಟೆಗೆ ಉದ್ಯೋಗಕ್ಕಾಗಿ ನೇರ ಸಂದರ್ಶನ ಏರ್ಪಡಿಸಲಾಗಿದೆ.
ಸಂದರ್ಶನವು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನಡೆಯಲಿದ್ದು, ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಬಿ.ಎ, ಬಿ.ಎಸ್ಸಿ, ಬಿ.ಕಾಂ, ಬಿ.ಬಿ.ಎ, ಬಿ.ಬಿ.ಎಂ, ಡಿ.ಫಾರ್ಮ, ಬಿ.ಫಾರ್ಮ, ಐ.ಟಿ.ಐ ಹಾಗೂ ಡಿಪ್ಲೊಮಾ ಪಾಸಾದ ಅಭ್ಯರ್ಥಿಗಳು ಮಾತ್ರ ಈ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಆಸಕ್ತ ಅಭ್ಯರ್ಥಿಗಳು ತಮ್ಮ ಬಯೋಡೇಟಾದೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0816-2278488, 9071021143, 9513136642ನ್ನು ಸಂಪರ್ಕಿಸಬಹುದಾಗಿದೆ ಎಂದು ಉದ್ಯೋಗಾಧಿಕಾರಿ ಕಿಶೋರ್ ಕುಮಾರ್ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx