nammatumakuru

    Subscribe to Updates

    Get the latest creative news from FooBar about art, design and business.

    What's Hot

    ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್

    April 15, 2026

    ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ

    April 15, 2026

    ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್

    April 15, 2026
    Facebook Twitter Instagram
    ಟ್ರೆಂಡಿಂಗ್
    • ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್
    • ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ
    • ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್
    • ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್
    • ಕೃಷಿ ಪ್ರಾಯೋಗಿಕ ಪರೀಕ್ಷೆ: ರೈತರ ಮಕ್ಕಳಿಗೆ ತುಮಕೂರಿನಲ್ಲಿ ಏಪ್ರಿಲ್ 19ರಂದು ಉಚಿತ ತರಬೇತಿ ಕಾರ್ಯಾಗಾರ
    • ತುಮಕೂರು: ಅಂಬೇಡ್ಕರ್, ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಅಮಾನಿಕೆರೆಯಲ್ಲಿ ಕಣ್ಮನ ಸೆಳೆದ ಭವ್ಯ ‘ಬೋಟ್ ಪರೇಡ್’
    • ಪರಿಶಿಷ್ಟರಿಗೆ ಬುದ್ಧ ಬಸವ ಅಂಬೇಡ್ಕರ್ ನಿವೇಶನ ಹಂಚಿಕೆ: ಖಾಸಗಿ ಮಾದರಿಯಲ್ಲಿ ಬಡಾವಣೆ ನಿರ್ಮಾಣ ಯೋಜನೆ: ಸಚಿವ ಸತೀಶ್ ಜಾರಕಿಹೊಳಿ
    • ಬಳ್ಳಾರಿಯಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಅಂಬೇಡ್ಕರ್ ಗ್ರಂಥಾಲಯ ನಿರ್ಮಿಸಲು ನಿರ್ಧಾರ: ಶಾಸಕ ನಾರಾ ಭರತ್ ರೆಡ್ಡಿ ಹೇಳಿಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಂಗವೈಕಲ್ಯತೆ ಶಾಪವಲ್ಲ; ವಿಶೇಷ ಚೇತನರನ್ನು ಪ್ರೋತ್ಸಾಹಿಸುವ ಕೆಲಸ ಮಾಡೋಣ: ಸಂಡೂರು ಶಾಸಕಿ ಈ.ಅನ್ನಪೂರ್ಣ ಅಭಿಮತ
    ಜಿಲ್ಲಾ ಸುದ್ದಿ February 28, 2026

    ಅಂಗವೈಕಲ್ಯತೆ ಶಾಪವಲ್ಲ; ವಿಶೇಷ ಚೇತನರನ್ನು ಪ್ರೋತ್ಸಾಹಿಸುವ ಕೆಲಸ ಮಾಡೋಣ: ಸಂಡೂರು ಶಾಸಕಿ ಈ.ಅನ್ನಪೂರ್ಣ ಅಭಿಮತ

    By adminFebruary 28, 2026No Comments2 Mins Read
    e annapurna

    ಬಳ್ಳಾರಿ: ದೈಹಿಕ ಅಂಗವೈಕಲ್ಯಕ್ಕಿಂತ ಮಾನಸಿಕ ವೈಕಲ್ಯತೆ ದೊಡ್ಡದು. ವಿಶೇಷ ಚೇತನರನ್ನು ಕೀಳರಿಮೆಯಿಂದ ನೋಡದೆ, ಅವರಲ್ಲಿರುವ ವಿಶೇಷ ಸಾಮರ್ಥ್ಯವನ್ನು ಗುರುತಿಸಿ ಪ್ರೋತ್ಸಾಹಿಸಬೇಕು ಎಂದು ಸಂಡೂರು ಶಾಸಕರಾದ ಈ.ಅನ್ನಪೂರ್ಣ ಅವರು ಹೇಳಿದರು.

    ಜಿಲ್ಲಾಡಳಿತ, ಕಾರ್ಮಿಕ ಇಲಾಖೆ ಹಾಗೂ ಕಾರ್ಖಾನೆಗಳು, ಬಾಯ್ಲರುಗಳು, ಕೈಗಾರಿಕಾ ಸುರಕ್ಷತೆ ಮತ್ತು ಆರೋಗ್ಯ ಇಲಾಖೆ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯ ವಿವಿಧ ಕೈಗಾರಿಕೆಗಳ ಸಾಮಾಜಿಕ ಹೊಣೆಗಾರಿಕೆ ನಿಧಿ (ಸಿಎಸ್‌ಆರ್) ಅಡಿ ನಗರದ ಡಾ.ರಾಜ್ ಕುಮಾರ್ ರಸ್ತೆಯ ಮುನಿಸಿಪಲ್ ಕಾಲೇಜು ಆವರಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಬಳ್ಳಾರಿ ಜಿಲ್ಲೆಯ ವಿಶೇಷ ಚೇತನರಿಗೆ ಮೋಟಾರ್ ಚಾಲಿತ ತ್ರಿಚಕ್ರ ವಾಹನಗಳ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.


    Provided by
    Provided by

    ದೇವರು ಒಂದು ಅಂಗವನ್ನು ವಿಕಲತೆ ಮಾಡಿದಾಗ ಮತ್ತೊಂದು ವಿಶೇಷ ಸಾಮರ್ಥ್ಯವನ್ನು ನೀಡಿರುತ್ತಾನೆ, ಅದನ್ನು ಗುರುತಿಸಿ ಪ್ರೋತ್ಸಾಹಿಸುವುದು ನಮ್ಮೆಲ್ಲರ ಕರ್ತವ್ಯ. ಪೋಷಕರು ಮತ್ತು ಕುಟುಂಬದ ಸದಸ್ಯರು ವಿಶೇಷಚೇತನರನ್ನು ಮೂಲೆ ಗುಂಪು ಮಾಡದೆ ಅವರಲ್ಲಿ ಆತ್ಮವಿಶ್ವಾಸ ತುಂಬುವ ಕೆಲಸ ಮಾಡಬೇಕು. ಸರ್ಕಾರವು ಇವರ ಅಭಿವೃದ್ಧಿಗೆ ಸದಾ ಬೆಂಬಲ ನೀಡುತ್ತಿದೆ ಎಂದರು.

    ಜಿಲ್ಲೆಯ ವಿವಿಧ ಕೈಗಾರಿಕೆಗಳ ಮಾಲೀಕರು ಮತ್ತು ಸಿಬ್ಬಂದಿ ವರ್ಗ ತಮ್ಮ ಸಾಮಾಜಿಕ ಹೊಣೆಗಾರಿಕೆಯ ಅಡಿ ಇಂತಹ ಉಪಯುಕ್ತ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಶ್ಲಾಘನೀಯ. ಈ ಕಾರ್ಯಕ್ರಮವು ಕೇವಲ ಸಹಾಯಧನ ವಿತರಣೆಗೆ ಸೀಮಿತವಾಗದೆ, ವಿಶೇಷ ಚೇತನರ ಆತ್ಮವಿಶ್ವಾಸ ಹೆಚ್ಚಿಸುವ ಮತ್ತು ಸಮಾಜದ ಜವಾಬ್ದಾರಿಯನ್ನು ನೆನಪಿಸುವ ಕಾರ್ಯಕ್ರಮವಾಗಿದೆ ಎಂದರು.

    ಜಿಲ್ಲೆಯಲ್ಲಿ ದೃಷ್ಟಿಹೀನರಿಗಾಗಿ ಬ್ರೈಲ್ ಲಿಪಿ ಕಲಿಸುವ ಶಿಬಿರಗಳನ್ನು ಆಯೋಜಿಸುವ ಅಗತ್ಯವಿದೆ. ಶ್ರವಣ ದೋಷವುಳ್ಳವರಿಗೆ ಅಗತ್ಯ ಉಪಕರಣಗಳನ್ನು ಒದಗಿಸುವ ಕಾರ್ಯಗಳು ನಿರಂತರವಾಗಿ ನಡೆಯಬೇಕು. ಮಕ್ಕಳಿಗೆ ಆರಂಭಿಕ ಹಂತದಲ್ಲೇ ಬ್ರೈಲ್ ಲಿಪಿಯ ತರಬೇತಿ ನೀಡುವುದರಿಂದ ಅವರ ಭವಿಷ್ಯಕ್ಕೆ ಅನುಕೂಲವಾಗಲಿದೆ ಎಂದು ಅಭಿಪ್ರಾಯಪಟ್ಟರು.

    ಜಿಲ್ಲೆಯಲ್ಲಿ ಉದ್ಯೋಗ ಸೃಷ್ಟಿ ಮಾಡುವ ಮೂಲಕ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ-ಯುವತಿಯರ ಭವಿಷ್ಯ ಉಜ್ವಲವಾಗಲಿದೆ. ಜಿಲ್ಲೆಯನ್ನು ಹಸಿರುಕರಣ ಮಾಡುವಲ್ಲಿ ಹೆಚ್ಚು ಹೆಚ್ಚು ಗಿಡ ನೆಡಬೇಕಾಗಿದೆ. ತ್ರಿಚಕ್ರ ವಾಹನ ಬಳಸುವರು ರಸ್ತೆ ಸಂಚಾರ ನಿಯಮ ಪಾಲಿಸುವ ಮೂಲಕ ನಿಧಾನವಾಗಿ ಸಂಚರಿಸಬೇಕು ಎಂದು ಆಶಿಸಿದರು.

    ಮಹಾನಗರ ಪಾಲಿಕೆಯ ಮಹಾಪೌರರಾದ ಪಿ.ಗಾದೆಪ್ಪ ಅವರು ಮಾತನಾಡಿ, ಪಾಲಿಕೆ ವ್ಯಾಪ್ತಿಯಲ್ಲಿನ ವಿಶೇಷ ಚೇತನರು ಸರ್ಕಾರದಿಂದಿರುವ ಸೌಲಭ್ಯಗಳು ವಂಚಿತರಾಗಿದ್ದಲ್ಲಿ ಕಚೇರಿಗೆ ಭೇಟಿ ನೀಡಿದರೆ ಅಗತ್ಯ ನೆರವು ನೀಡಲಾಗುವುದು ಎಂದು ತಿಳಿಸಿದರು.

    ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಮಾತನಾಡಿ, ವಿಕಲಚೇತನರಿಗೆ ಸೌಲಭ್ಯಗಳನ್ನು ನೀಡುವಾಗ ಅಧಿಕಾರಿಗಳು ವಿಶೇಷ ಆದ್ಯತೆ ನೀಡಬೇಕು. ಧನಾತ್ಮಕ ಕಾಳಜಿಯ ಮೂಲಕ ಅವರಿಗೆ ಹೆಚ್ಚಿನ ಸೌಲತ್ತುಗಳನ್ನು ನೀಡಿದಾಗ ಮಾತ್ರ ಅವರು ಸಮಾಜದಲ್ಲಿ ಸಮಾನವಾಗಿ ಬದುಕಲು ಸಾಧ್ಯ ಎಂದು ಹೇಳಿದರು.

    ಕೈಗಾರಿಕಾ ಸಂಸ್ಥೆಗಳು ತಮ್ಮ ಸಾಮಾಜಿಕ ಹೊಣೆಗಾರಿಕೆ (ಸಿಎಸ್‌ಆರ್) ನಿಧಿಯನ್ನು ವಿಕಲಚೇತನರ ಸಬಲೀಕರಣಕ್ಕಾಗಿ ಮತ್ತು ಅವರಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಹೆಚ್ಚು ಬಳಸಬೇಕು ಎಂದು ತಿಳಿಸಿದರು.

    ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಅವರು ಮಾತನಾಡಿ, ಆತ್ಮವಿಶ್ವಾಸದ ಕೊರತೆಯೇ ಅತಿದೊಡ್ಡ ವಿಕಲಚೇತನವಾಗಿದೆ. ಆತ್ಮವಿಶ್ವಾಸವಿದ್ದರೆ ಎಂತಹ ಅಡೆತಡೆಗಳನ್ನೂ ಮೀರಿ ಗುರಿ ತಲುಪಬಹುದು. ವಿಕಲಚೇತನರಿಗೆ ಸಮಾಜದಲ್ಲಿ ಸಮಾನ ಅವಕಾಶ ಮತ್ತು ಸ್ವಾಭಿಮಾನದಿಂದ ಬದುಕಲು ಇಂತಹ ಸೌಲಭ್ಯಗಳು ದೊಡ್ಡ ಆಸರೆಯಾಗಲಿವೆ ಎಂದು ಅವರು ತಿಳಿಸಿದರು.

    ಕಾರ್ಯಕ್ರಮದಲ್ಲಿ ಸಾಮಾಜಿಕ ಹೊಣೆಗಾರಿಕೆ (ಸಿಎಸ್‌ಆರ್) ನಿಧಿ ಯೋಜನೆಯಡಿ ಸುಮಾರು 53 ವಿಕಲಚೇತನ ಫಲಾನುಭವಿಗಳಿಗೆ ತ್ರಿಚಕ್ರ ವಾಹನಗಳನ್ನು ವಿತರಿಸುವ ಗುರಿ ಹೊಂದಲಾಗಿದ್ದು, ಸಾಂಕೇತಿಕವಾಗಿ ಕೆಲವರಿಗೆ ಪ್ರಮಾಣಪತ್ರ ಹಾಗೂ ವಾಹನಗಳನ್ನು ಹಸ್ತಾಂತರಿಸಲಾಯಿತು.

    ಈ ಸಂದರ್ಭದಲ್ಲಿ ಸಂಡೂರು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ನೂರುದ್ದೀನ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನವೀನ್ ಕುಮಾರ್, ದಾವಣಗೆರೆಯ ಬಳ್ಳಾರಿ ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತ ಡಾ.ಅವಿನಾಶ ನಾಯ್ಕ, ಕಾರ್ಖಾನೆಗಳ ಹಿರಿಯ ಸಹಾಯಕ ನಿರ್ದೇಶಕ ವರುಣ. ಆರ್., ಬಳ್ಳಾರಿ ಉಪವಿಭಾಗದ ಕಾರ್ಮಿಕ ಅಧಿಕಾರಿ ಎಸ್.ಜಿ. ಖೈನೂರು, ಜಿಲ್ಲಾ ಬಾಲ ಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಎ.ಮೌನೇಶ್ ಸೇರಿದಂತೆ ವಿವಿಧ ಸಂಘ- ಸಂಸ್ಥೆಗಳ ಪದಾಧಿಕಾರಿಗಳು, ವಿಶೇಷ ಚೇತನರು, ಅವರ ಪಾಲಕರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್

    April 15, 2026

    ಪರಿಶಿಷ್ಟರಿಗೆ ಬುದ್ಧ ಬಸವ ಅಂಬೇಡ್ಕರ್ ನಿವೇಶನ ಹಂಚಿಕೆ: ಖಾಸಗಿ ಮಾದರಿಯಲ್ಲಿ ಬಡಾವಣೆ ನಿರ್ಮಾಣ ಯೋಜನೆ: ಸಚಿವ ಸತೀಶ್ ಜಾರಕಿಹೊಳಿ

    April 14, 2026

    ಬಳ್ಳಾರಿಯಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಅಂಬೇಡ್ಕರ್ ಗ್ರಂಥಾಲಯ ನಿರ್ಮಿಸಲು ನಿರ್ಧಾರ: ಶಾಸಕ ನಾರಾ ಭರತ್ ರೆಡ್ಡಿ ಹೇಳಿಕೆ

    April 14, 2026

    Leave A Reply Cancel Reply

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್

    April 15, 2026

    ಬೆಂಗಳೂರು: ರಾಜ್ಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಒಳ ಮೀಸಲಾತಿ ವಿಚಾರವಾಗಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ.…

    ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ

    April 15, 2026

    ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್

    April 15, 2026

    ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್

    April 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.