ಕೊರಟಗೆರೆ: ರಸ್ತೆ ಸುರಕ್ಷತಾ ನಿಯಮಗಳನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಿ ಕಾನೂನು ಪಾಲನೆ ಮಾಡಬೇಕೆಂದು ಎಂದು ಪೊಲೀಸ್ ಇಲಾಖೆಯ ಪಿಎಸ್ ಐ ತೀರ್ಥೇಶ್ ತಿಳಿಸಿದರು.
ಪಟ್ಟಣದಲ್ಲಿ ತಾಲೂಕು ದಲಿತ ಸಂಘರ್ಷ ಸಮಿತಿ ಸಹಯೋಗದಲ್ಲಿ ಪೊಲೀಸ್ ಇಲಾಖೆ ವತಿಯಿಂದ 77ನೇ ಗಣರಾಜ್ಯೋತ್ಸವದ ಅಂಗವಾಗಿ ಆಯೋಜಿಸಿದ್ದ ರಸ್ತೆ ಸುರಕ್ಷತಾ ಅಭಿಯಾನದಲ್ಲಿ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ವಿತರಣೆ ಮಾಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.
ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಅಲ್ಲದೆ ಸಂಚಾರ ನಿಯಮಗಳನ್ನು ಅನುಸರಿಸಬೇಕು ಹಾಗೂ ಕಾರುಗಳಲ್ಲಿ ಸಂಚರಿಸುವವರು ಸೀಟ್ ಬೆಲ್ಟ್ ಧರಿಸುವುದು ಮತ್ತು ಚಾಲನಾ ಪರವಾನಗಿ, ಇನ್ಶೂರೆನ್ಸ್ ಸೇರಿದಂತೆ ದಾಖಲೆಗಳನ್ನು ಇಟ್ಟುಕೊಳ್ಳಬೇಕು. ರಸ್ತೆ ಸುರಕ್ಷತಾ ನಿಯಮಗಳ ಪಾಲನೆಯಿಂದ ಸಾವು, ನೋವುಗಳನ್ನು ತಪ್ಪಿಸಬಹುದು ಎಂದು ಹೇಳಿದರು.
ದಲಿತ ಸಂಘರ್ಷ ಸಮಿತಿ ತಾ.ಅಧ್ಯಕ್ಷ ನರಸಿಂಹಮೂರ್ತಿ ಮಾತನಾಡಿ, ಅಪಘಾತಗಳನ್ನು ತಡೆಯಲು ಹಲವು ಸುರಕ್ಷತಾ ಕ್ರಮಗಳನ್ನು ಎಲ್ಲರೂ ಅನುಸರಿಸಬೇಕು, ದ್ವಿಚಕ್ರ ವಾಹನ ಸವಾರರು ಮನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕಿದ್ದು, ಅಪಘಾತಗಳ ತಡೆಗೆ ಇಂತಹ ಅಭಿಯಾನಗಳು ಸಹಕಾರಿಯಾಗಲಿವೆ ಎಂದರು.
ಈ ವೇಳೆ ಪೋಲಿಸ್ ಇಲಾಖೆ ಸಿಬ್ಬಂದಿಗಳು, ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ವಾಹನ ಸವಾರರಿಗೆ ಹೆಲ್ಮೆಟ್ ವಿತರಣೆ..!
ರಸ್ತೆ ಸುರಕ್ಷತಾ ಅಭಿಯಾನದಲ್ಲಿ ಪೋಲಿಸ್ ಇಲಾಖೆ ವತಿಯಿಂದ ವಾಹನ ಸವಾರರಿಗೆ ರಸ್ತೆ ಸುರಕ್ಷತಾ ನಿಯಮಗಳ ಪಾಲನೆಯ ಬಗ್ಗೆ ಅರಿವು ಮೂಡಿಸಿ 100 ಮಂದಿ ದ್ವಿಚಕ್ರ ವಾಹನ ಸವಾರರರಿಗೆ ಹೆಲ್ಮೆಟ್ ವಿತರಿಸಿದ್ದು, ವಾಹನ ಸವಾರರು ನಿಯಮ ಪಾಲನೆಗೆ ಒಲವು ತೋರಿದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


