ತುಮಕೂರು: ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕರು ತಮ್ಮ ಮನೆ/ಅಂಗಡಿ/ನರ್ಸಿಂಗ್ ಹೋಂ/ಹೋಟೆಲ್/ಮಾಲ್ ಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯ ವಸ್ತುಗಳನ್ನು ಹಸಿ ಕಸ ಮತ್ತು ಒಣ ಕಸವನ್ನಾಗಿ ವಿಂಗಡಿಸಿ ಪಾಲಿಕೆ ಕಸದ ವಾಹನಕ್ಕೆ ನೀಡಬೇಕು. ಕಸವನ್ನು ವಾಹನಕ್ಕೆ ನೀಡದೆ ಎಲ್ಲೆಂದರಲ್ಲಿ ಬಿಡಾಡುವವರ ವಿರುದ್ಧ ದೂರು ದಾಖಲಿಸಿ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ ಸೂಚಿಸಿದ್ದಾರೆ.
ಈಗಾಗಲೇ ಪಾಲಿಕೆಯ ಎಲ್ಲಾ ವಾರ್ಡುಗಳಲ್ಲಿ ಸಿಸಿ ಕ್ಯಾಮರಾವನ್ನು ಅಳವಡಿಸಲಾಗಿದ್ದು, ಆರೋಗ್ಯ ನಿರೀಕ್ಷಕರು ಸಿಸಿ ಕ್ಯಾಮರಾವನ್ನು ಪರಿಶೀಲಿಸಿ ಸಾರ್ವಜನಿಕ ಸ್ಥಳಗಳಲ್ಲಿ ಕಸ ಹಾಕುವವರನ್ನು ಗುರುತಿಸಿ ದಂಡ ವಿಧಿಸಲಾಗಿದ್ದರೂ ಸಹ ಕೆಲವು ಸಾರ್ವಜನಿಕರು ರಾತ್ರಿ ವೇಳೆಯಲ್ಲಿ ಕಸವನ್ನು ರಸ್ತೆಗೆ ಸುರಿಯುವುದು ಹಾಗೂ ತಮ್ಮ ವಾಹನಗಳಲ್ಲಿ ಸಂಗ್ರಹಿಸಿಕೊಂಡು ತಂದು ಸಾರ್ವಜನಿಕ ಪ್ರದೇಶಗಳಲ್ಲಿ ಎಸೆಯುವುದು ಕಂಡು ಬಂದಿದೆ.
ಎಲ್ಲೆಂದರಲ್ಲಿ ಕಸ ಬಿಸಾಡುತ್ತಿರುವುದರಿಂದ ಪರಿಸರ ಮಾಲಿನ್ಯ ಉಂಟಾಗಿ ಸಾರ್ವಜನಿಕರು/ಹಿರಿಯ ನಾಗರಿಕರ ಆರೋಗ್ಯದ ಮೇಲೆ ಧಕ್ಕೆ ಉಂಟಾಗುತ್ತಿದ್ದು, ಪಾಲಿಕೆಯ ಅಂದವನ್ನು ಹಾಳು ಮಾಡುತ್ತಿದೆ. ಸಾರ್ವಜನಿಕರು ತಮ್ಮ ಮನೆಯಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಕಸದ ವಾಹನಕ್ಕೆ ನೀಡಿ ಆರೋಗ್ಯಕರ/ಸುಂದರ ನಗರವನ್ನು ಕಾಪಾಡುವಲ್ಲಿ ಸಹಕರಿಸಬೇಕೆಂದು ಅವರು ಮನವಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW