ಪಕ್ಷದ ಹೈಕಮಾಂಡ್ ನಡೆ ಕುರಿತು ಬಹಿರಂಗವಾಗಿಯೇ ಬೇಸರ ಹೊರಹಾಕಿದ್ದ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಅವರು ಬುಧವಾರ ವರಿಷ್ಠರ ಭೇಟಿಗಾಗಿ ದೆಹಲಿಗೆ ತೆರಳಲಿದ್ದಾರೆ.
ಪಕ್ಷದ ವಿದ್ಯಮಾನಗಳ ಕುರಿತಂತೆ ಚರ್ಚಿಸಲು ತಮ್ಮನ್ನು ಭೇಟಿ ಆಗುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಸದಾನಂದಗೌಡರಿಗೆ ದೂರವಾಣಿ ಕರೆ ಮಾಡಿ ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಅವರು ಬುಧವಾರ ದೆಹಲಿಗೆ ಹೋಗಿ ನಡ್ಡಾ ಅವರನ್ನು ಭೇಟಿ ಮಾಡಲಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.


