ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಧೀರಜ್ ಪ್ರಸಾದ್ ಸಾಹು ಮನೆಯಲ್ಲಿ ನೂರಾರು ಕೋಟಿ ರೂ.ಗೂ ಹೆಚ್ಚು ಅಕ್ರಮ ನಗದು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಬಿಜೆಪಿಯ ಎನ್. ರವಿಕುಮಾರ್ ಅವರು, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಯಾಕೆ ಸುಮ್ಮನಿದ್ದಾರೆ? ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆರವರು ಯಾಕಿನ್ನೂ ಪತ್ರಿಕಾಗೋಷ್ಠಿ ನಡೆಸಿಲ್ಲ ಎಂದು ಪ್ರಶ್ನಿಸಿದರು.
ನೈತಿಕತೆ ಇದ್ದರೆ, ಸಂವಿಧಾನದ ಬಗ್ಗೆ ಗೌರವವಿದ್ದರೆ ಕೂಡಲೇ ಮೂವರು ಸುದ್ದಿಗೋಷ್ಠಿ ಕರೆದು ತಮ್ಮ ನಿಲುವು ತಿಳಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಅಲ್ಲದೆ, ರಾಹುಲ್ ಗಾಂಧಿಯವರು ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದ್ದಾರೆ.


