nammatumakuru

    Subscribe to Updates

    Get the latest creative news from FooBar about art, design and business.

    What's Hot

    ಒಂದು ಪ್ಲೇಟ್ ಟೊಮೆಟೊ ಮೊಟ್ಟೆ ಬುರ್ಜಿಗೆ ₹7,300! | ರೆಸ್ಟೋರೆಂಟ್ ವಿರುದ್ಧ ನೆಟ್ಟಿಗರ ಆಕ್ರೋಶ

    July 21, 2026

    ಕೀಟನಾಶಕ ಸಿಂಪಡಿಸಿದ ಜಮೀನಿನಲ್ಲಿ ಜಾನುವಾರು ಮೇಯಿಸದಂತೆ ಕೃಷಿ ಇಲಾಖೆ ಎಚ್ಚರಿಕೆ

    July 21, 2026

    ವೃತ್ತಿ ಧರ್ಮ ಪಾಲಿಸುವವರು ನಿಜವಾದ ಪತ್ರಕರ್ತರು: ಟಿ.ಬಿ.ಜಯಚಂದ್ರ

    July 21, 2026
    Facebook Twitter Instagram
    ಟ್ರೆಂಡಿಂಗ್
    • ಒಂದು ಪ್ಲೇಟ್ ಟೊಮೆಟೊ ಮೊಟ್ಟೆ ಬುರ್ಜಿಗೆ ₹7,300! | ರೆಸ್ಟೋರೆಂಟ್ ವಿರುದ್ಧ ನೆಟ್ಟಿಗರ ಆಕ್ರೋಶ
    • ಕೀಟನಾಶಕ ಸಿಂಪಡಿಸಿದ ಜಮೀನಿನಲ್ಲಿ ಜಾನುವಾರು ಮೇಯಿಸದಂತೆ ಕೃಷಿ ಇಲಾಖೆ ಎಚ್ಚರಿಕೆ
    • ವೃತ್ತಿ ಧರ್ಮ ಪಾಲಿಸುವವರು ನಿಜವಾದ ಪತ್ರಕರ್ತರು: ಟಿ.ಬಿ.ಜಯಚಂದ್ರ
    • ಶಿಕ್ಷಣವೇ ಸಮಾಜ ಪರಿವರ್ತನೆಯ ಪ್ರಬಲ ಅಸ್ತ್ರ: ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್.ರಾಜು
    • ಸರಗೂರು: ತಾಲೂಕು ಮಾನವ ಹಕ್ಕುಗಳ ಮಿಷನ್ ಅಧ್ಯಕ್ಷರಾಗಿ ಪಿ. ಚಿನ್ನಣ್ಣ ಹಳೆಯೂರು ಸರ್ವಾನುಮತದಿಂದ ಆಯ್ಕೆ
    • ವಿಕಲಚೇತನರು ದ್ವಿಚಕ್ರ ವಾಹನ ಪಡೆದರೆ ಚಾಲನಾ ಪರವಾನಗಿ ಕಡ್ಡಾಯ: ಶಾಸಕ ಅನಿಲ್ ಚಿಕ್ಕಮಾದು
    • ಅರ್ಹ ಫಲಾನುಭವಿಗಳಿಗೆ ಸಾಗುವಾಳಿ ಪತ್ರ ತಲುಪಿಸುವುದು ಸರ್ಕಾರದ ಬದ್ಧತೆ: ಶಾಸಕ ಅನಿಲ್ ಚಿಕ್ಕಮಾದು
    • ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನ್ಯಾಯಾಲಯದಲ್ಲಿ ಬಾಕಿಯಿದ್ದ 1,04,948 ಪ್ರಕರಣಗಳ ವಿಲೇವಾರಿ: ನ್ಯಾ.ಜಯಂತ್ ಕುಮಾರ್
    ತುಮಕೂರು February 6, 2025

    ನ್ಯಾಯಾಲಯದಲ್ಲಿ ಬಾಕಿಯಿದ್ದ 1,04,948 ಪ್ರಕರಣಗಳ ವಿಲೇವಾರಿ: ನ್ಯಾ.ಜಯಂತ್ ಕುಮಾರ್

    By adminFebruary 6, 2025No Comments2 Mins Read

    ತುಮಕೂರು:  ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿಯಿದ್ದ ಪ್ರಕರಣಗಳ ಪೈಕಿ 9,942 ಪ್ರಕರಣ ಹಾಗೂ 95,006 ವ್ಯಾಜ್ಯಪೂರ್ವ ಪ್ರಕರಣಗಳು ಸೇರಿದಂತೆ 1,04,948 ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಿ.ಜಯಂತ್ ಕುಮಾರ್ ಹೇಳಿದರು.

    ರಾಷ್ಟ್ರೀಯ ಜನತಾ ನ್ಯಾಯಾಲಯ ಕಾರ್ಯಕ್ರಮ ಕುರಿತು ನಗರದ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಗುರುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾಹಿತಿ ಹಂಚಿಕೊಂಡು ಮಾತನಾಡಿದ ಅವರು, ಸಮಾಜದ ದುರ್ಬಲ ವರ್ಗಗಳಿಗೆ ಉಚಿತ ಮತ್ತು ಸಕ್ಷಮ ಕಾನೂನು ಸೇವೆಗಳನ್ನು ಒದಗಿಸುವ ಸಲುವಾಗಿ ಮಾರ್ಚ್ 8ರಂದು ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಜನತಾ ನ್ಯಾಯಾಲಯ(ಲೋಕ್ ಅದಾಲತ್)ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಜನರು ಈ ಅದಾಲತ್ತಿನ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು.

    ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ನಡೆಸಲಾಗುವ ಲೋಕ್ ಆದಾಲತ್ ಅಥವಾ ಜನತಾ ನ್ಯಾಯಾಲಯದಲ್ಲಿ ಜನರು ತಮ್ಮ ಪ್ರಕರಣಗಳನ್ನು ಕಡಿಮೆ ವೆಚ್ಚದಲ್ಲಿ ಶೀಘ್ರವಾಗಿ ಇತ್ಯರ್ಥ ಪಡಿಸಿಕೊಳ್ಳಬಹುದಾಗಿದೆ. ಜನ ಸಾಮಾನ್ಯರಿಗೆ ರಾಜಿ ಸಂಧಾನದ ಮೂಲಕ ವ್ಯಾಜ್ಯಗಳನ್ನು ಇತ್ಯರ್ಥಪಡಿಸಲು ಈ ಜನತಾ ನ್ಯಾಯಾಲಯವನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದರು.

    ಜನತಾ ನ್ಯಾಯಾಲಯದಲ್ಲಿ ಚೆಕ್ ಅಮಾನ್ಯ, ಬ್ಯಾಂಕ್ ವಸೂಲಾತಿ, ಕಾರ್ಮಿಕ ವಿವಾದ, ವಿದ್ಯುತ್ ಹಾಗೂ ನೀರಿನ ಶುಲ್ಕ ಪ್ರಕರಣ ಸೇರಿದಂತೆ ವ್ಯಾಜ್ಯಪೂರ್ವ ಪ್ರಕರಣಗಳು ಹಾಗೂ ರಾಜಿಯಾಗಬಲ್ಲ ಅಪರಾಧಿಕ ಪ್ರಕರಣ, ಬ್ಯಾಂಕ್ ವಸೂಲಾತಿ,  ಕಾರ್ಮಿಕ ವಿವಾದ, ಭೂಸ್ವಾಧೀನ, ಸಾಲ ವಸೂಲಾತಿ ನ್ಯಾಯಾಧೀಕರಣ, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣ ಸೇರಿದಂತೆ ನ್ಯಾಯಾಲಯದಲ್ಲಿ ಬಾಕಿಯಿರುವ ಪ್ರಕರಣಗಳನ್ನು ಶೀಘ್ರವಾಗಿ ಇತ್ಯರ್ಥಪಡಿಸಲಾಗುವುದು ಎಂದು ತಿಳಿಸಿದರು.

    ಜನತಾ ನ್ಯಾಯಾಲಯಗಳಲ್ಲಿ ಕಕ್ಷಿದಾರರು ನೇರವಾಗಿ ಅಥವಾ ವಕೀಲರ ಮೂಲಕ ಭಾಗವಹಿಸಬಹುದು. ನ್ಯಾಯಾಲಯದಲ್ಲಿ ದಾಖಲಾಗದೆ ಇರುವ(ವ್ಯಾಜ್ಯಪೂರ್ವ) ಪ್ರಕರಣಗಳನ್ನೂ ಸಹ ರಾಜಿ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಉಭಯ ಪಕ್ಷಕಾರರು ರಾಜಿ ಮಾಡಿಕೊಳ್ಳಲು ಮಾರ್ಗದರ್ಶನ ನೀಡಲಾಗುವುದು. ಸಂಧಾನಕಾರರು ಸೂಚಿಸುವ ಪರಿಹಾರ ಕಕ್ಷಿದಾರರಿಗೆ ಒಪ್ಪಿಗೆಯಾದಲ್ಲಿ ಮಾತ್ರ ರಾಜಿ ಮಾಡಿಕೊಳ್ಳಬಹುದಾಗಿದೆ. ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಜನತಾ ನ್ಯಾಯಾಲಯವು ವಿಶೇಷ ಅವಕಾಶವಾಗಿದೆ ಎಂದರು.

    ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸ ಮಾತನಾಡಿ, ಲೋಕ್ ಅದಾಲತ್‍ ನಲ್ಲಿ ಆಗುವ ತೀರ್ಮಾನವೇ ಅಂತಿಮ. ಪ್ರಕರಣ ಇತ್ಯರ್ಥವಾದ ಬಳಿಕ ಮೇಲ್ಮನವಿಗೆ ಅವಕಾಶ ಇರುವುದಿಲ್ಲ. ಸಾರ್ವಜನಿಕರು ತಮ್ಮ ವ್ಯಾಜ್ಯಪೂರ್ವ ಹಾಗೂ ನ್ಯಾಯಾಲಯದಲ್ಲಿ ಬಾಕಿಯಿರುವ ಪ್ರಕರಣಗಳನ್ನು ಮಾರ್ಚ್ 8ರಂದು ನಡೆಯಲಿರುವ ರಾಷ್ಟ್ರೀಯ ಲೋಕ್ ಅದಾಲತ್‍ ನಲ್ಲಿ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದರು.

    ಪ್ರಸ್ತುತ ಕಾರ್ಯ ನಿರ್ವಹಿಸುತ್ತಿರುವ ಜಿಲ್ಲಾ ನ್ಯಾಯಾಲಯ ಸಂಕೀರ್ಣಕ್ಕೆ ಕಕ್ಷಿದಾರರು, ವಕೀಲರು, ಎದುರು ಪಕ್ಷಕಾರರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುತ್ತಿರುವುದರಿಂದ ಪಾರ್ಕಿಂಗ್ ಸಮಸ್ಯೆ ಎದುರಾಗಿದೆ. ಜಿಲ್ಲಾ ನ್ಯಾಯಾಲಯದ ಹೊಸ ಕಟ್ಟಡ ನಿರ್ಮಾಣಕ್ಕೆ ಸುಮಾರು 25 ಎಕರೆ ಜಾಗದ ಅವಶ್ಯಕತೆಯಿದ್ದು, ಜಾಗ ಮಂಜೂರು ಮಾಡುವ ಬಗ್ಗೆ ಸರ್ಕಾರ ಗಮನಹರಿಸಬೇಕು ಎಂದು ಮನವಿ ಮಾಡಿದರು.

    ಲೋಕ್ ಅದಾಲತ್‍ನಲ್ಲಿ ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲಿಚ್ಛಿಸುವವರು ಹೆಚ್ಚಿನ ಮಾಹಿತಿಗಾಗಿ  ಇ–ಮೇಲ್ ವಿಳಾಸ: dlsatumkur1@gmail.com  ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯವರ ಕಛೇರಿ ದೂರವಾಣಿ ಸಂಖ್ಯೆ:0816-2255133 ಮತ್ತು ಮೊ.ಸಂ.9141193959ಯನ್ನು  ಸಂಪರ್ಕಿಸಬಹುದು ಎಂದು ಅವರು ತಿಳಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4


    Provided by
    Provided by
    admin
    • Website

    Related Posts

    ವೃತ್ತಿ ಧರ್ಮ ಪಾಲಿಸುವವರು ನಿಜವಾದ ಪತ್ರಕರ್ತರು: ಟಿ.ಬಿ.ಜಯಚಂದ್ರ

    July 21, 2026

    ತುಮಕೂರು: ಬಂಟ್ವಾಳದಲ್ಲಿ ನಡೆದ ಯುವತಿಯ ಭೀಕರ ಹತ್ಯೆಗೆ ಮಹಿಳಾ ಸಾಂಸ್ಕೃತಿಕ ಸಂಘಟನೆ ಖಂಡನೆ

    July 20, 2026

    ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    July 19, 2026

    Comments are closed.

    Our Picks

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Food

    ಒಂದು ಪ್ಲೇಟ್ ಟೊಮೆಟೊ ಮೊಟ್ಟೆ ಬುರ್ಜಿಗೆ ₹7,300! | ರೆಸ್ಟೋರೆಂಟ್ ವಿರುದ್ಧ ನೆಟ್ಟಿಗರ ಆಕ್ರೋಶ

    July 21, 2026

    ಟೊಮೆಟೊ ಮತ್ತು ಮೊಟ್ಟೆಯ ಸ್ಕ್ರ್ಯಾಂಬಲ್ (Tomato Scrambled Eggs) ಎನ್ನುವುದು ಚೀನಾದ ಮನೆಗಳಲ್ಲಿ ಅತ್ಯಂತ ಸುಲಭವಾಗಿ ಮತ್ತು ಅಗ್ಗವಾಗಿ ಮಾಡುವ…

    ಕೀಟನಾಶಕ ಸಿಂಪಡಿಸಿದ ಜಮೀನಿನಲ್ಲಿ ಜಾನುವಾರು ಮೇಯಿಸದಂತೆ ಕೃಷಿ ಇಲಾಖೆ ಎಚ್ಚರಿಕೆ

    July 21, 2026

    ವೃತ್ತಿ ಧರ್ಮ ಪಾಲಿಸುವವರು ನಿಜವಾದ ಪತ್ರಕರ್ತರು: ಟಿ.ಬಿ.ಜಯಚಂದ್ರ

    July 21, 2026

    ಶಿಕ್ಷಣವೇ ಸಮಾಜ ಪರಿವರ್ತನೆಯ ಪ್ರಬಲ ಅಸ್ತ್ರ: ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್.ರಾಜು

    July 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.