ವಿವಾಹ ವಿಚ್ಛೇದನ ಸೇರಿದಂತೆ ವೈವಾಹಿಕ ಪ್ರಕರಣಗಳ ವಿಲೇವಾರಿಗೆ ವಿಳಂಬವಾಗದಂತೆ ಗರಿಷ್ಠ ಒಂದು ವರ್ಷದ ಮಿತಿಯಲ್ಲಿ ಇತ್ಯರ್ಥ ಪಡಿಸಲು ಹೈಕೋರ್ಟ್ ವಿಚಾರಣಾ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದೆ.
ತನ್ನ ವಿವಾಹ ವಿಚ್ಚೇದನ ಅರ್ಜಿಯನ್ನು ತ್ವರಿತವಾಗಿ ಇತ್ಯರ್ಥಪಡಿಸುವಂತೆ ಕೌಟುಂಬಿಕ ನ್ಯಾಯಾಲಯಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಎನ್ ರಾಜೀವ್ ಎಂಬುವರು ಸಲ್ಲಿಸಿದ ಅರ್ಜಿಯನ್ನು ಮಾನ್ಯ ಮಾಡಿರುವ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ನಿರ್ದೇಶನ ನೀಡಿದೆ.
ಮನುಷ್ಯ ಜೀವನದ ಅಲ್ಪಾವಧಿ ಗಮನದಲ್ಲಿಟ್ಟುಕೊಂಡು ವೈವಾಹಿಕ ಪ್ರಕರಣಗಳ ವಿಲೇವಾರಿಯನ್ನು ಯುದ್ಧೋಪಾದಿಯಲ್ಲಿ ಕೈಗೊಳ್ಳಬೇಕಿದೆ. ಈ ರೀತಿ ಕೌಟುಂಬಿಕ ಪ್ರಕರಣಗಳು ವಿಲೇವಾರಿಯಲ್ಲಿ ವಿಳಂಬವಾದಲ್ಲಿ ಎರಡೂ ಕುಟುಂಬಗಳ ಮೇಲೆ ಅತ್ಯಂತ ಕೆಟ್ಟ ಪರಿಣಾಮ ಬೀರುತ್ತದೆ ಎಂದು ಪೀಠ ತಿಳಿಸಿದೆ.
ಲೈಫ್ ಈಸ್ ಟೂ ಶಾರ್ಟ್ ಟು ಬಿ ಲಿಟ್ಸ್ (ಬದುಕು ತೀರಾ ಚಿಕ್ಕದು) ಎಂಬ ಆಂಗ್ಲ ಇತಿಹಾಸಕಾರರೊಬ್ಬರ ಹೇಳಿಕೆಯನ್ನು ಆದೇಶದಲ್ಲಿ ಉಲ್ಲೇಖಿಸಿರುವ ನ್ಯಾಯಮೂರ್ತಿಗಳು, ಮದುವೆಯ ವಿಸರ್ಜನೆ ಅಥವಾ ಅನೂರ್ಜಿತತೆ ಬಯಸುವ ವೈವಾಹಿಕ ಪ್ರಕರಣಗಳನ್ನು ತ್ವರಿತಗತಿಯಲ್ಲಿ ಗರಿಷ್ಠ ಒಂದು ವರ್ಷದ ಮಿತಿಯೊಳಗೆ ವಿಲೇವಾರಿಗೊಳಿಸುವ ಎಲ್ಲ ಪ್ರಯತ್ನಗಳನ್ನು ಕೌಟುಂಬಿಕ ಅಥವಾ ವಿಚಾರಣಾ ನ್ಯಾಯಾಲಯಗಳು ಮಾಡಬೇಕೆಂದು ಆದೇಶದಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


