ನವದೆಹಲಿ: ದೇಶಾದ್ಯಂತ ನಡೆದ ವಿವಿಧ ದಾಳಿಗಳಲ್ಲಿ ಇಡಿ ವಶಪಡಿಸಿಕೊಂಡಿರುವ ಸುಮಾರು 3000 ಕೋಟಿ ರೂ. ಅನ್ನು ವಿವಿಧ ಯೋಜನೆಗಳ ಮೂಲಕ ಬಡ ಜನರಿಗೆ ನೀಡುವುದಾಗಿ, ರಾಜ್ಯದ ಜನತೆಗೆ ತಿಳಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದ ಕೃಷ್ಣನಗರ ಬಿಜೆಪಿ ಅಭ್ಯರ್ಥಿ ರಾಜಮಾತಾ ಅಮೃತಾ ರಾಯ್ ಅವರಿಗೆ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಅಮೃತಾ ರಾಯ್ ಅವರಿಗೆ ಕರೆ ಮಾಡಿದ ಸಂದರ್ಭ ಈ ವಿಚಾರವನ್ನು ತಿಳಿಸಿದ್ದಾರೆ. ಅಮೃತಾ ರಾಯ್ ಅವರು ಲೋಕಸಭಾ ಚುನಾವಣೆಗೆ ಕೃಷ್ಣನಗರ ಕ್ಷೇತ್ರದಿಂದ ಟಿಎಂಸಿಯ ಮಹುವಾ ಮೊಯಿತ್ರಾ ವಿರುದ್ಧ ಸ್ಪರ್ಧಿಸುತ್ತಿದ್ದಾರೆ.
ಅಮೃತಾ ರಾಯ್ ಜೊತೆಗೆ ದೂರವಾಣಿ ಕರೆಯಲ್ಲಿ ಮಾತನಾಡಿದ ಮೋದಿ, ಕೇಂದ್ರದಲ್ಲಿ ಹೊಸ ಸರ್ಕಾರ ರಚನೆಯಾದ ನಂತರ ಇಡಿ ಭ್ರಷ್ಟರಿಂದ ವಶಪಡಿಸಿಕೊಂಡ ಹಣವನ್ನು ಬಡ ಜನರಿಗೆ ನೀಡಲು ಕಾನೂನು ರೂಪಿಸುವ ಬಗ್ಗೆ ಯೋಚಿಸುವುದಾಗಿ ಹೇಳಿದ್ದಾರೆ.
ಬಿಜೆಪಿ ಅಭ್ಯರ್ಥಿ ಬಗ್ಗೆ ಪ್ರತಿಪಕ್ಷಗಳು ಏನು ಹೇಳುತ್ತವೆ ಎಂಬುದರ ಬಗ್ಗೆ ನೀವು ಬೇಸರಿಸಿಕೊಳ್ಳದಿರಿ. ರಾಜಕೀಯವನ್ನು ಈಗ ಎರಡು ಭಾಗಗಳಾಗಿ ವಿಂಗಡಿಸಲಾಗಿದೆ. ಒಂದು ಬಿಜೆಪಿ ನೇತೃತ್ವದಲ್ಲಿ, ಇದು ದೇಶದಲ್ಲಿ ಭ್ರಷ್ಟಾಚಾರವನ್ನು ಬೇರುಸಹಿತ ಕಿತ್ತುಹಾಕಲು ಬದ್ಧವಾಗಿದೆ. ಇನ್ನೊಂದು ಭ್ರಷ್ಟರನ್ನು ಬೆಂಬಲಿಸುವ ಇಂಡಿಯಾ ಮೈತ್ರಿಕೂಟ ಮತ್ತು ಟಿಎಂಸಿ ಎಂದು ಮೋದಿ ಹೇಳಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


