ವಿಶೇಷ ವರದಿ | ನಮ್ಮ ತುಮಕೂರು ಡಿಜಿಟಲ್ ಸುದ್ದಿ
ತುಮಕೂರು: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ “ಪ್ರಧಾನ ಮಂತ್ರಿ ವಿಕಸಿತ ಭಾರತ ಉದ್ಯೋಗ ಯೋಜನೆ” (PMVBRY) ಅಡಿಯಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಿಸುವ ಕಾರ್ಯಕ್ರಮವು ಜೂನ್ 19ರಂದು ಸಂಜೆ 4 ಗಂಟೆಗೆ ತುಮಕೂರಿನ ಎಸ್ ಐಟಿ ಕಾಲೇಜಿನ ಬಿರ್ಲಾ ಆಡಿಟೋರಿಯಂನಲ್ಲಿ ನಡೆಯಲಿದೆ.
“ಉದ್ಯೋಗವಾಗಲಿ ಅಥವಾ ಉದ್ಯಮವಾಗಲಿ — ಭಾರತ ಸರ್ಕಾರ ನಿಮ್ಮೊಂದಿಗೆ” ಎಂಬ ಧ್ಯೇಯವಾಕ್ಯದೊಂದಿಗೆ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ವತಿಯಿಂದ ಆಯೋಜಿಸಿರುವ ಈ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದಾದ್ಯಂತದ ಫಲಾನುಭವಿಗಳಿಗೆ ಯೋಜನೆಯ ಸೌಲಭ್ಯಗಳನ್ನು ವಿತರಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಹಾಗೂ ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವರಾದ ಡಾ.ಮನ್ಸುಖ್ ಮಾಂಡವಿಯಾ ಮತ್ತು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ಹಾಗೂ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಗೌರವಾನ್ವಿತ ಉಪಸ್ಥಿತಿ ವಹಿಸಲಿದ್ದಾರೆ.
ತುಮಕೂರಿನಲ್ಲಿ ನಡೆಯಲಿರುವ ಈ ಕಾರ್ಯಕ್ರಮವು ಜಿಲ್ಲೆಯ ಯುವಜನರು, ಉದ್ಯೋಗಾಕಾಂಕ್ಷಿಗಳು ಹಾಗೂ ಉದ್ಯಮ ಆರಂಭಿಸಲು ಬಯಸುವವರಿಗೆ ವಿಶೇಷ ಮಹತ್ವದ್ದಾಗಿದೆ. ಉದ್ಯೋಗ ಸೃಷ್ಟಿ ಮತ್ತು ಸ್ವಯಂ ಉದ್ಯಮಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಈ ಯೋಜನೆಯನ್ನು ಜಾರಿಗೆ ತಂದಿದೆ.
ಕಾರ್ಯಕ್ರಮಕ್ಕೆ ಆಗಮಿಸುವ ಗಣ್ಯರು ಮತ್ತು ಆಹ್ವಾನಿತರು ಮಧ್ಯಾಹ್ನ 3 ಗಂಟೆಯೊಳಗೆ ಸಭಾಂಗಣದಲ್ಲಿ ಆಸನಗಳನ್ನು ಅಲಂಕರಿಸುವಂತೆ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ಮನವಿ ಮಾಡಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


