ತುಮಕೂರು: ಜಿಲ್ಲೆಯ ಕೊರಟಗೆರೆ ಪಟ್ಟಣ ಪಂಚಾಯಿತಿ ವತಿಯಿಂದ ಅಮೃತ ನಗರೋತ್ಥಾನ ಯೋಜನೆಯಡಿ ಎಂ.ಬಿ.ಬಿ.ಎಸ್/ಬಿ.ಇ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಿಸಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳು ಭರ್ತಿ ಮಾಡಿದ ಅರ್ಜಿಯೊಂದಿಗೆ ವ್ಯಾಸಂಗ ಪ್ರಮಾಣ ಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಾಸಸ್ಥಳ, ಚುನಾವಣಾ ಗುರುತಿನ ಚೀಟಿ, ಪಡಿತರ ಚೀಟಿ, ಆಧಾರ್ ಕಾರ್ಡ್ ಹಾಗೂ ಪಾಸ್‌ಪೋರ್ಟ್ ಇತ್ತೀಚಿನ 2 ಭಾವಚಿತ್ರ, ಅಂಗವಿಕಲರಾದಲ್ಲಿ ದೃಢೀಕರಣ ಪತ್ರವನ್ನು ಲಗತ್ತಿಸಿ, ಪ್ರಕಟಣೆ ಪ್ರಕಟಗೊಂಡ 15 ದಿನದೊಳಗಾಗಿ ಸಲ್ಲಿಸಬಹುದಾಗಿದೆ ಎಂದು ಪಟ್ಟಣ ಪಂಚಾಯತಿಯ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q