ಧಾರವಾಡ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಡಿಸೆಂಬರ್ 16 ರಂದು ಸಂಜೆ ಧಾರವಾಡಕ್ಕೆ ಆಗಮಿಸಲಿದ್ದು, ಕಾರ್ಮಿಕ ಇಲಾಖೆ ಆಯೋಜಿಸಿದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಅವರು ತಿಳಿಸಿದರು.
ಧಾರವಾಡದ ನೂತನ ಅತಿಥಿ ಗೃಹದಲ್ಲಿ ಈ ಕುರಿತು ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದ ಸಚಿವರು, ದಿನಾಂಕ: 16 ರಂದು ಸಂಜೆ ಕೆಸಿಡಿ ಮೈದಾನದಲ್ಲಿ ಕಾರ್ಮಿಕ ಇಲಾಖೆಯಿಂದ ಹಮ್ಮಿಕೊಳ್ಳಲಿರುವ ಬೃಹತ್ ಕಾರ್ಯಕ್ರಮದಲ್ಲಿ ಸಿಎಸ್ ಆರ್ ಅನುದಾನದಲ್ಲಿ ಅಂಗವಿಕಲರಿಗೆ 500 ಕ್ಕೂ ಹೆಚ್ಚು ತ್ರಿಚಕ್ರ ವಾಹನ ಹಾಗೂ ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್ ವಿತರಣೆ ಮಾಡುವರು. ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ಸಹ ಜರುಗಲಿವೆಯೆಂದು ಸಚಿವರು ತಿಳಿಸಿದರು.
ಈ ಕುರಿತು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕೆಂದು ಅವರು ತಿಳಿಸಿದರು. ಮುಖ್ಯ ವೇದಿಕೆ, ಆಸನದ ವ್ಯವಸ್ಥೆ, ಅತಿಥಿಗಳ ಕಾರ್ಯಕ್ರಮ, ಫಲಾನುಭವಿಗಳಿಗೆ ತ್ರಿಚಕ್ರ ವಾಹನ ವಿತರಣೆ ವ್ಯವಸ್ಥೆ, ಪೊಲೀಸ್ ಬಂದೋಬಸ್ತ್ ಕುರಿತಂತೆ ಕಾರ್ಯಕ್ರಮ ರೂಪುರೇಷೆಗಳ ಬಗ್ಗೆ ಇನ್ನೊಮ್ಮೆ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದೆಂದರು.


