nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು ದಸರಾ ಹೆಲಿರೈಡ್ ಗೆ ವಿಶ್ವವಿದ್ಯಾಲಯ ಕ್ಯಾಂಪಸ್ ನ ಜಾಗ ನೀಡಲು ಆಡಳಿತ ಮಂಡಳಿ ನಕಾರ: ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿ ನಿರ್ಧಾರ

    October 12, 2026

    ತುಮಕೂರು: ವಿದ್ಯಾರ್ಥಿ ಹಿತಾಸಕ್ತಿಗಿಂತ ವಾಣಿಜ್ಯ ಲಾಭ ಮುಖ್ಯವೇ?: ತುಮಕೂರು ವಿವಿಯಲ್ಲಿ ಹೆಲಿರೈಡ್‌ ಗೆ AIDSO ತೀವ್ರ ಆಕ್ಷೇಪ

    October 12, 2026

    ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ

    October 12, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು ದಸರಾ ಹೆಲಿರೈಡ್ ಗೆ ವಿಶ್ವವಿದ್ಯಾಲಯ ಕ್ಯಾಂಪಸ್ ನ ಜಾಗ ನೀಡಲು ಆಡಳಿತ ಮಂಡಳಿ ನಕಾರ: ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿ ನಿರ್ಧಾರ
    • ತುಮಕೂರು: ವಿದ್ಯಾರ್ಥಿ ಹಿತಾಸಕ್ತಿಗಿಂತ ವಾಣಿಜ್ಯ ಲಾಭ ಮುಖ್ಯವೇ?: ತುಮಕೂರು ವಿವಿಯಲ್ಲಿ ಹೆಲಿರೈಡ್‌ ಗೆ AIDSO ತೀವ್ರ ಆಕ್ಷೇಪ
    • ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ
    • ಹಾಸನ: ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಮೃತದೇಹ ತುಂಬಿ ನಾಲೆಗೆ ಎಸೆದಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್– ಆರೋಪಿ ಬಂಧನ
    • ತಿಪಟೂರು: ಬಿ.ಎಚ್. ರಸ್ತೆಯಲ್ಲಿ ಬೃಹತ್ ಮರ ಬಿದ್ದು ನಿವೃತ್ತ ಶಿಕ್ಷಕ ದುರಂತ ಸಾವು
    • ಅಪ್ರಾಪ್ತರ ಕೈಗೆ ವಾಹನ ನೀಡಿದರೆ ಪೋಷಕರಿಗೆ ₹25 ಸಾವಿರ ದಂಡ: ಭಾಲ್ಕಿ ಡಿವೈಎಸ್ಪಿ ಎಚ್ಚರಿಕೆ
    • ದೇಶದಲ್ಲಿ ಪ್ರಜಾಪ್ರಭುತ್ವವೋ ಅಥವಾ ತುರ್ತು ಪರಿಸ್ಥಿತಿಯೋ? ಪ್ರಧಾನಿ ಮೋದಿ ಉತ್ತರಿಸಬೇಕು: ಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ
    • ‘ಪ್ರೇಮದ ಊರಲಿ’ ಸಿನಿಮಾ ವೀಕ್ಷಣೆಗೆ ಹೋಗಿದ್ದ ಕುಟುಂಬಕ್ಕೆ ಶಾಕ್; ಮಂಚದ ಕೆಳಗೆ ಅವಿತಿದ್ದ ಕಳ್ಳ ರೆಡ್‌ ಹ್ಯಾಂಡ್‌ ಸಿಕ್ಕಿಬಿದ್ದ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 51 ಸಾವಿರ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ಪತ್ರ ವಿತರಣೆ: ಕೇಂದ್ರ ಸಚಿವ ವಿ.ಸೋಮಣ್ಣ
    ತುಮಕೂರು October 30, 2024

    51 ಸಾವಿರ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ಪತ್ರ ವಿತರಣೆ: ಕೇಂದ್ರ ಸಚಿವ ವಿ.ಸೋಮಣ್ಣ

    By adminOctober 30, 2024No Comments2 Mins Read
    v somanna

    ತುಮಕೂರು:  ದೇಶದಲ್ಲಿ ನಿರುದ್ಯೋಗ ಸಮಸ್ಯೆಯನ್ನು ನಿವಾರಣೆ ಮಾಡುವ ನಿಟ್ಟಿನಲ್ಲಿ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗುತ್ತಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವರ್ಚುಯಲ್ ಉಪಸ್ಥಿತಿಯಲ್ಲಿ ರೋಜ್‌ ಗಾರ್ ಮೇಳದ ಮೂಲಕ ದೇಶದಾದ್ಯಂತ ಸರ್ಕಾರಿ ಹುದ್ದೆಗಳಿಗೆ ನೇಮಕಗೊಂಡ 51ಸಾವಿರ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ಪತ್ರವನ್ನು ನೀಡಲಾಗಿದೆ ಎಂದು ಕೇಂದ್ರ ಸರಕಾರದ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು.

    ಮೈಸೂರಿನ ಮಾನಸ ಗಂಗೋತ್ರಿ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ವಿಜ್ಞಾನ ಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸರಕಾರಿ ಉದ್ಯೋಗಕ್ಕೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯದ 85 ಅಭ್ಯರ್ಥಿಗಳು ಹಾಗೂ ಇತರೆ ರಾಜ್ಯದ 86 ಅಭ್ಯರ್ಥಿಗಳು ಸೇರಿದಂತೆ ಒಟ್ಟು 171 ಫಲಾನುಭವಿಗಳಿಗೆ ರೋಜ್‌ಗಾರ್ ಮೇಳದಲ್ಲಿ ನೇಮಕಾತಿ ಆದೇಶ ಪತ್ರವನ್ನು ನೀಡಲಾಗಿದೆ ಎಂದರು.

    ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ರಾಷ್ಟ್ರದ ನಿರುದ್ಯೋಗ ಸಮಸ್ಯೆಯನ್ನು ನೀಗಿಸುವ ನಿಟ್ಟಿನಲ್ಲಿ 2022ರ ಅಕ್ಟೋಬರ್ ತಿಂಗಳಿನಲ್ಲಿ ರಾಷ್ಟ್ರೀಯ ರೋಜ್‌ಗಾರ್ ಮೇಳ(ಉದ್ಯೋಗ ಮೇಳ)ವನ್ನು ಪ್ರಾರಂಭಿಸಿ, 10ಲಕ್ಷ ಉದ್ಯೋಗ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಿದ್ದರು. ರಾಷ್ಟ್ರದ ನಿರುದ್ಯೋಗ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ ಮತ್ತೊಂದು ಹೆಜ್ಜೆಯೇ ಈ ರೋಜ್‌ ಗಾರ್ ಮೇಳ ಎಂದು ತಿಳಿಸಿದರು.

    ಸ್ವಾತಂತ್ರ‍್ಯ ಭಾರತದ 75ನೇ ವರ್ಷದ ಅಮೃತ ಕಾಲದಲ್ಲಿ 75000 ನೇಮಕಾತಿ ಆದೇಶ ಪತ್ರಗಳನ್ನು ಮೊದಲ ಹಂತದಲ್ಲಿ ಬಿಡುಗಡೆ ಮಾಡಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ಪತ್ರವನ್ನು ನೀಡುವ ಮೂಲಕ ನಿರುದ್ಯೋಗ ಸಮಸ್ಯೆಯನ್ನು ನಿವಾರಣೆ ಮಾಡಲಾಗುವುದು ಎಂದರು.

    ಭಾರತದಲ್ಲಿ ಉದ್ಯೋಗ ಸೃಷ್ಟಿಯ ಪ್ರಮುಖ ಇಲಾಖೆಗಳಲ್ಲಿ ಒಂದಾದ ರೈಲ್ವೆ ಇಲಾಖೆಯೂ ಸಹ ಪ್ರಧಾನ ಮಂತ್ರಿಗಳ ಆಶಯದಂತೆ “ಮಿಷನ್ ಮೋಡ್ ರೆಕ್ರೂಟ್‌ಮೆಂಟ್ ಡ್ರೆöÊವ್”ನಲ್ಲಿ 2014 ರಿಂದ 2024ರ ಅವಧಿಯಲ್ಲಿ 5.02 ಲಕ್ಷ ಯುವಕ/ಯುವತಿಯರಿಗೆ ಉದ್ಯೋಗವನ್ನು ಕಲ್ಪಸಲಾಗಿದೆ. ನೇಮಕಾತಿ ಪ್ರಕ್ರಿಯೆಯಲ್ಲಿ ರೈಲ್ವೆ ಇಲಾಖೆಯು ಅತ್ಯಂತ ಪಾರದರ್ಶಕ ವ್ಯವಸ್ಥೆಯನ್ನು ಅಳವಡಿಸಿದ್ದು, ಜನರ ಪ್ರಶಂಸೆಗೆ ಪಾತ್ರವಾಗಿದೆ ಎಂದು ತಿಳಿಸಿದರು.

    ಕಾರ್ಯಕ್ರಮದಲ್ಲಿ ಮೈಸೂರು ಸಂಸದ ಯದುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್, ಶಾಸಕ ಟಿ.ಎಸ್.ಶ್ರೀವತ್ಸ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ತುಮಕೂರು ದಸರಾ ಹೆಲಿರೈಡ್ ಗೆ ವಿಶ್ವವಿದ್ಯಾಲಯ ಕ್ಯಾಂಪಸ್ ನ ಜಾಗ ನೀಡಲು ಆಡಳಿತ ಮಂಡಳಿ ನಕಾರ: ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿ ನಿರ್ಧಾರ

    October 12, 2026

    ತುಮಕೂರು: ವಿದ್ಯಾರ್ಥಿ ಹಿತಾಸಕ್ತಿಗಿಂತ ವಾಣಿಜ್ಯ ಲಾಭ ಮುಖ್ಯವೇ?: ತುಮಕೂರು ವಿವಿಯಲ್ಲಿ ಹೆಲಿರೈಡ್‌ ಗೆ AIDSO ತೀವ್ರ ಆಕ್ಷೇಪ

    October 12, 2026

    ಸಿಎಂ ಹುದ್ದೆ ಖಾಲಿ ಇಲ್ಲ, ಸದ್ಯಕ್ಕೆ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್ ಸ್ಪಷ್ಟನೆ

    October 12, 2026

    Comments are closed.

    Our Picks

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು ದಸರಾ ಹೆಲಿರೈಡ್ ಗೆ ವಿಶ್ವವಿದ್ಯಾಲಯ ಕ್ಯಾಂಪಸ್ ನ ಜಾಗ ನೀಡಲು ಆಡಳಿತ ಮಂಡಳಿ ನಕಾರ: ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿ ನಿರ್ಧಾರ

    October 12, 2026

    ತುಮಕೂರು: ತುಮಕೂರು ದಸರಾ–2026 ಉತ್ಸವದ ಅಂಗವಾಗಿ ಜಿಲ್ಲಾಡಳಿತದಿಂದ ಆಯೋಜಿಸಲು ಉದ್ದೇಶಿಸಲಾಗಿದ್ದ ಹೆಲಿಕ್ಯಾಪ್ಟರ್ ರೈಡ್ ಗೆ (Helicopter Ride) ತುಮಕೂರು ವಿಶ್ವವಿದ್ಯಾನಿಲಯವು…

    ತುಮಕೂರು: ವಿದ್ಯಾರ್ಥಿ ಹಿತಾಸಕ್ತಿಗಿಂತ ವಾಣಿಜ್ಯ ಲಾಭ ಮುಖ್ಯವೇ?: ತುಮಕೂರು ವಿವಿಯಲ್ಲಿ ಹೆಲಿರೈಡ್‌ ಗೆ AIDSO ತೀವ್ರ ಆಕ್ಷೇಪ

    October 12, 2026

    ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ

    October 12, 2026

    ಹಾಸನ: ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಮೃತದೇಹ ತುಂಬಿ ನಾಲೆಗೆ ಎಸೆದಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್– ಆರೋಪಿ ಬಂಧನ

    October 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.