nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಲಿತ ವಿಷಯ ಅಂತರ್ಗತ ಮಾಡಿಕೊಳ್ಳದಿದ್ದರೆ ಅದು ವ್ಯರ್ಥ: ಡಾ.ಸಿದ್ಧರಾಜು

    May 1, 2026

    ಪಟ್ಟಣ ಪಂಚಾಯತಿಯಿಂದ ಪುರಸಭೆಗೆ ಮೇಲ್ದರ್ಜೆ: ನಾಮಫಲಕ ಅನಾವರಣ, ಸೋಲಾರ್ ಪ್ಲಾಂಟ್ ಉದ್ಘಾಟನೆ

    May 1, 2026

    ಸರ್ಕಾರಿ ಎಂಪ್ರೆಸ್ ಮಹಿಳಾ ಕಾಲೇಜು: ಉರ್ದು ಭಾಷೆ ಬೋಧಕರ ನೇಮಕಾತಿಗೆ ಮನವಿ

    May 1, 2026
    Facebook Twitter Instagram
    ಟ್ರೆಂಡಿಂಗ್
    • ಕಲಿತ ವಿಷಯ ಅಂತರ್ಗತ ಮಾಡಿಕೊಳ್ಳದಿದ್ದರೆ ಅದು ವ್ಯರ್ಥ: ಡಾ.ಸಿದ್ಧರಾಜು
    • ಪಟ್ಟಣ ಪಂಚಾಯತಿಯಿಂದ ಪುರಸಭೆಗೆ ಮೇಲ್ದರ್ಜೆ: ನಾಮಫಲಕ ಅನಾವರಣ, ಸೋಲಾರ್ ಪ್ಲಾಂಟ್ ಉದ್ಘಾಟನೆ
    • ಸರ್ಕಾರಿ ಎಂಪ್ರೆಸ್ ಮಹಿಳಾ ಕಾಲೇಜು: ಉರ್ದು ಭಾಷೆ ಬೋಧಕರ ನೇಮಕಾತಿಗೆ ಮನವಿ
    • ಮಳೆಹಾನಿ ಪ್ರದೇಶಗಳಿಗೆ ಜಿಲ್ಲಾಡಳಿತ ಭೇಟಿ: ತಕ್ಷಣ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ
    • ಶಿಕ್ಷಕಿ ಡಿ.ಆರ್.ಶಿಲ್ಪಶ್ರೀ ಅವರಿಗೆ ವೀರ ರಾಣಿ ಬೆಳವಾಡಿ ಮಲ್ಲಮ್ಮ ಪ್ರಶಸ್ತಿ: ನಿಸ್ವಾರ್ಥ ಸೇವೆಗೆ ವಿಜಯ ಸೇನೆಯಿಂದ ಗೌರವ
    • ಅಸಮರ್ಪಕ ವಿದ್ಯುತ್ ಸರಬರಾಜು: ರೈತರಿಂದ ಕುಣಿಗಲ್ ಬೆಸ್ಕಾಂ ಕಚೇರಿ ಎದುರು ಪ್ರತಿಭಟನೆ
    • ತುಮಕೂರು: ಮೇ 1ರಂದು ಜಿಲ್ಲಾ ಮಟ್ಟದ ಬುದ್ಧ ಜಯಂತಿ ಆಚರಣೆ
    • ಮುಂಗಾರು ಹಂಗಾಮಿನ ಋತುಮಾನ ಪರಿಶೀಲಿಸಿ, ಮುನ್ನೆಚ್ಚರಿಕೆ ಕ್ರಮವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಳೆಹಾನಿ ಪ್ರದೇಶಗಳಿಗೆ ಜಿಲ್ಲಾಡಳಿತ ಭೇಟಿ: ತಕ್ಷಣ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ
    ತುಮಕೂರು May 1, 2026

    ಮಳೆಹಾನಿ ಪ್ರದೇಶಗಳಿಗೆ ಜಿಲ್ಲಾಡಳಿತ ಭೇಟಿ: ತಕ್ಷಣ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

    By adminMay 1, 2026No Comments2 Mins Read

    ತುಮಕೂರು: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಚಿಕ್ಕನಾಯಕನಹಳ್ಳಿ ತಾಲೂಕು ವ್ಯಾಪ್ತಿಯಲ್ಲಿ ಇತ್ತೀಚಿನ ಭಾರಿ ಮಳೆ ಹಾಗೂ ಬಿರುಗಾಳಿಯಿಂದ ಹಾನಿಗೊಳಗಾದ ವಿವಿಧ ಪ್ರದೇಶಗಳಿಗೆ ಗುರುವಾರ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಪ್ರಕೃತಿ ವಿಕೋಪದಿಂದ ಮಾನವ ಜೀವಹಾನಿ, ಬೆಳೆ ನಷ್ಟ ಹಾಗೂ ಮೂಲಸೌಕರ್ಯ ಹಾನಿಯ ಕುರಿತು ಸಮಗ್ರ ಮಾಹಿತಿ ಪಡೆದು ಸಂಬಂಧಪಟ್ಟ ಅಧಿಕಾರಿಗಳಿಗೆ ತಕ್ಷಣದ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

    ಚಿಕ್ಕನಾಯಕನಹಳ್ಳಿ ಪಟ್ಟಣದ ನಿವಾಸಿ ಪುಟ್ಟಯ್ಯ (70 ವರ್ಷ) ಅವರು ಏಪ್ರಿಲ್ 28ರಂದು ಸಂಜೆ ತೋಟದಿಂದ ಮನೆಗೆ ತೆರಳುವ ವೇಳೆ ಆಕಸ್ಮಿಕ ಗಾಳಿ-ಮಳೆಯ ಪರಿಣಾಮ ಮರದ ಕೊಂಬೆ ತಲೆಯ ಮೇಲೆ ಬಿದ್ದು ಮೃತಪಟ್ಟ ಘಟನೆ ಹಿನ್ನೆಲೆ, ಜಿಲ್ಲಾಧಿಕಾರಿಗಳು ಮೃತರ ನಿವಾಸಕ್ಕೆ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಂತಾಪ ಸೂಚಿಸಿ ಸಾಂತ್ವನ ಹೇಳಿದರು.


    Provided by
    Provided by

    ಈ ವೇಳೆ ತಹಶೀಲ್ದಾರ್, ಮುಖ್ಯಾಧಿಕಾರಿ ಹಾಗೂ ಗ್ರಾಮ ಆಡಳಿತಾಧಿಕಾರಿಗಳಿಗೆ ಮೃತರ ಕುಟುಂಬಕ್ಕೆ ತಕ್ಷಣ ಮರಣ ಪ್ರಮಾಣ ಪತ್ರ ವಿತರಿಸುವುದು, ಹಕ್ಕುಪತ್ರ ಸಂಬಂಧಿತ ಪ್ರಕ್ರಿಯೆಯನ್ನು ಶೀಘ್ರ ಪೂರ್ಣಗೊಳಿಸುವುದು ಹಾಗೂ ಅರ್ಹ ಪಿಂಚಣಿ ಸೇರಿದಂತೆ ಸರ್ಕಾರದ ಸೌಲಭ್ಯಗಳನ್ನು ವಿಳಂಬವಿಲ್ಲದೆ ಮಂಜೂರು ಮಾಡುವಂತೆ ನಿರ್ದೇಶನ ನೀಡಿದರು.

    ಸರ್ಕಾರದಿಂದ ಲಭ್ಯವಿರುವ ಪರಿಹಾರ ಧನ ಮತ್ತು ಅಗತ್ಯ ನೆರವುಗಳನ್ನು ಶೀಘ್ರ ಕುಟುಂಬಕ್ಕೆ ತಲುಪಿಸಲು ಕ್ರಮವಹಿಸುವಂತೆ ಸೂಚಿಸಿದರು.

    ತಿಪಟೂರು ತಾಲ್ಲೂಕಿನ ಹಟ್ಟ ಗ್ರಾಮದ ಸರ್ವೆ ನಂ. 97 ಪ್ರದೇಶಕ್ಕೆ ಭೇಟಿ ನೀಡಿ ಭಾರಿ ಮಳೆಯಿಂದ ಉಂಟಾದ ಬೆಳೆ ಹಾಗೂ ಭೂ ಹಾನಿಯನ್ನು ಪರಿಶೀಲಿಸಿದ ಅವರು, ರೈತರಿಗೆ ಸಂಭವಿಸಿದ ನಷ್ಟ, ಭೂಮಿಯ ಸ್ಥಿತಿ ಹಾಗೂ ಬೆಳೆ ಹಾನಿಯ ಕುರಿತು ಅಧಿಕಾರಿಗಳಿಂದ ವಿವರವಾದ ಮಾಹಿತಿ ಪಡೆದು, ಸರ್ಕಾರದ ನಿಯಮಾನುಸಾರ ಭೂ ಆಧಾರಿತ ಮೌಲ್ಯಮಾಪನದಲ್ಲಿ ಶೇ. 33 ಕ್ಕಿಂತ ಹೆಚ್ಚು ಹಾನಿಗೊಳಗಾದ ರೈತರಿಗೆ ಪ್ರತಿ ಎಕರೆಗೆ 22,000 ರೂ. ಪರಿಹಾರ ಮಂಜೂರು ಮಾಡುವುದಾಗಿ ತಿಳಿಸಿದರು.

    ಅರ್ಹ ರೈತರ ಸಂಪೂರ್ಣ ವಿವರಗಳನ್ನು ತ್ವರಿತವಾಗಿ ಸಂಗ್ರಹಿಸಿ ಪರಿಹಾರ ವಿತರಣೆಯಲ್ಲಿ ಯಾವುದೇ ವಿಳಂಬವಾಗದಂತೆ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

    ಅದೇ ರೀತಿ, ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಶೆಟ್ಟಿಕೆರೆ ಹೋಬಳಿ ವ್ಯಾಪ್ತಿಯ ಹಾಲುಗೊಣ ಗ್ರಾಮಕ್ಕೆ ಭೇಟಿ ನೀಡಿ ಗಾಳಿ–ಮಳೆಯಿಂದ ತೆಂಗು, ಬಾಳೆ ಹಾಗೂ ಅಡಿಕೆ ಬೆಳೆಗಳಿಗೆ ಉಂಟಾದ ಹಾನಿಯನ್ನು ಪರಿಶೀಲಿಸಿದರು. ಅನೇಕ ಮರಗಳು ಉರುಳಿ ಬೆಳೆ ನಷ್ಟವಾಗಿರುವುದು ಹಾಗೂ ಬೆಸ್ಕಾಂ ವಿದ್ಯುತ್ ಲೈನ್‌ಗಳ ಮೇಲೆ ಮರಗಳು ಮತ್ತು ಕೊಂಬೆಗಳು ಬಿದ್ದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿರುವುದನ್ನು ಗಮನಿಸಿದ ಜಿಲ್ಲಾಧಿಕಾರಿಗಳು, ಗ್ರಾಮ ಆಡಳಿತಾಧಿಕಾರಿಗಳಿಗೆ ಬೆಳೆ ಹಾನಿಯ ಸಮಗ್ರ ದಾಖಲೆ ಸಿದ್ಧಪಡಿಸುವುದು, ಪ್ರತಿ ರೈತನ ನಷ್ಟವನ್ನು ನಿಖರವಾಗಿ ದಾಖಲಿಸುವುದು ಹಾಗೂ ತ್ವರಿತ ವರದಿ ಸಲ್ಲಿಸುವಂತೆ ಸೂಚಿಸಿದರಲ್ಲದೆ, ಜೊತೆಗೆ ಉರುಳಿದ ಮರಗಳು ಮತ್ತು ಕೊಂಬೆಗಳನ್ನು ತಕ್ಷಣ ತೆರವುಗೊಳಿಸಿ ಬೆಸ್ಕಾಂ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ ವಿದ್ಯುತ್ ಸರಬರಾಜನ್ನು ಶೀಘ್ರ ಪುನಃ ಸ್ಥಾಪಿಸುವಂತೆ ನಿರ್ದೇಶನ ನೀಡಿದರು.

    ಅರ್ಹ ರೈತರಿಗೆ ಸರ್ಕಾರದ ಮಾರ್ಗಸೂಚಿಗಳಂತೆ ಪರಿಹಾರ ಸೌಲಭ್ಯಗಳನ್ನು ತ್ವರಿತವಾಗಿ ಒದಗಿಸಲು, ಹಾನಿ ಮೌಲ್ಯಮಾಪನ ಕಾರ್ಯಗಳನ್ನು ಆದ್ಯತೆಯಿಂದ ಪೂರ್ಣಗೊಳಿಸಲು ಹಾಗೂ ಎಲ್ಲಾ ವರದಿಗಳನ್ನು ಶೀಘ್ರ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

    ಪರಿಶೀಲನಾ ಸಂದರ್ಭದಲ್ಲಿ ತಿಪಟೂರು ಹಾಗೂ ಚಿಕ್ಕನಾಯಕನಹಳ್ಳಿ ತಹಶೀಲ್ದಾರ್, ಚಿಕ್ಕನಾಯಕನಹಳ್ಳಿ ಮುಖ್ಯಾಧಿಕಾರಿ, ಜಿಲ್ಲಾ ತೋಟಗಾರಿಕೆ ಉಪ ನಿರ್ದೇಶಕಿ ಶಾರದಮ್ಮ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಕಲಿತ ವಿಷಯ ಅಂತರ್ಗತ ಮಾಡಿಕೊಳ್ಳದಿದ್ದರೆ ಅದು ವ್ಯರ್ಥ: ಡಾ.ಸಿದ್ಧರಾಜು

    May 1, 2026

    ಸರ್ಕಾರಿ ಎಂಪ್ರೆಸ್ ಮಹಿಳಾ ಕಾಲೇಜು: ಉರ್ದು ಭಾಷೆ ಬೋಧಕರ ನೇಮಕಾತಿಗೆ ಮನವಿ

    May 1, 2026

    ಶಿಕ್ಷಕಿ ಡಿ.ಆರ್.ಶಿಲ್ಪಶ್ರೀ ಅವರಿಗೆ ವೀರ ರಾಣಿ ಬೆಳವಾಡಿ ಮಲ್ಲಮ್ಮ ಪ್ರಶಸ್ತಿ: ನಿಸ್ವಾರ್ಥ ಸೇವೆಗೆ ವಿಜಯ ಸೇನೆಯಿಂದ ಗೌರವ

    April 30, 2026

    Leave A Reply Cancel Reply

    Our Picks

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಕಲಿತ ವಿಷಯ ಅಂತರ್ಗತ ಮಾಡಿಕೊಳ್ಳದಿದ್ದರೆ ಅದು ವ್ಯರ್ಥ: ಡಾ.ಸಿದ್ಧರಾಜು

    May 1, 2026

    ತುಮಕೂರು: ವಿದ್ಯಾರ್ಥಿಗಳ ಏಕಾಗ್ರತೆಯಿಂದ ತಪಸ್ಸಿಗಾಗಿ ತಾವು ಮಾಡುವ ಕೆಲಸದಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಳ್ಳಬೇಕು. ಇದರಿಂದ ಯಶಸ್ವಿಯಾಗಲು ಸಾಧ್ಯ. ತಮ್ಮನ್ನು ಇತರರೊಂದಿಗೆ…

    ಪಟ್ಟಣ ಪಂಚಾಯತಿಯಿಂದ ಪುರಸಭೆಗೆ ಮೇಲ್ದರ್ಜೆ: ನಾಮಫಲಕ ಅನಾವರಣ, ಸೋಲಾರ್ ಪ್ಲಾಂಟ್ ಉದ್ಘಾಟನೆ

    May 1, 2026

    ಸರ್ಕಾರಿ ಎಂಪ್ರೆಸ್ ಮಹಿಳಾ ಕಾಲೇಜು: ಉರ್ದು ಭಾಷೆ ಬೋಧಕರ ನೇಮಕಾತಿಗೆ ಮನವಿ

    May 1, 2026

    ಮಳೆಹಾನಿ ಪ್ರದೇಶಗಳಿಗೆ ಜಿಲ್ಲಾಡಳಿತ ಭೇಟಿ: ತಕ್ಷಣ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

    May 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.