ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ನಿಯಮಿತ ಹಾಗೂ ತುಮಕೂರು ಜಿಲ್ಲಾ ಬಂಜಾರ ಲಂಬಾಣಿ ಸೇವಾಲಾಲ್ ಸೇವಾ ಸಂಘದ ಸಹಯೋಗದಲ್ಲಿ ಡಿಸೆಂಬರ್ 13ರಂದು ಬೆಳಿಗ್ಗೆ 11 ಗಂಟೆಗೆ ನಗರದ ಸರಸ್ವತಿಪುರಂನಲ್ಲಿ ಅಜಿಲ್ಲಾ ಬಂಜಾರ ಭವನದ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ಹಾಗೂ ಸಂಸದ ವಿ. ಸೋಮಣ್ಣ ಅವರ ಘನ ಉಪಸ್ಥಿತಿಯಲ್ಲಿ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಜಿ. ಪರಮೇಶ್ವರ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು.
ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಹೆಚ್.ಸಿ. ಮಹದೇವಪ್ಪ, ಉಪಸಭಾಪತಿ ರುದ್ರಪ್ಪ ಮಾನಪ್ಪ ಲಮಾಣಿ ಅವರ ಗೌರವ ಉಪಸ್ಥಿತಿಯಲ್ಲಿ ನಗರ ಶಾಸಕ ಜಿ.ಬಿ. ಜ್ಯೋತಿಗಣೇಶ್ ಅಧ್ಯಕ್ಷತೆ ವಹಿಸುವರು. ಜಿಲ್ಲೆಯ ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸುವರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


