ತುಮಕೂರು: ಜಿಲ್ಲಾ ಬಂಜಾರ (ಲಂಬಾಣಿ) ಸೇವಾಲಾಲ್ ಸೇವಾ ಸಂಘ (ರಿ) ಹಾಗೂ ತುಮಕೂರು ಶ್ರೀ ಸೇವಾಲಾಲ್ ಪತ್ತಿನ ಸಹಕಾರ ಸಂಘ (ರಿ)ಗಳ ನೂತನ ವರ್ಷದ ಕ್ಯಾಲೆಂಡರ್ ಅನ್ನು ನಗರದ ಶಾಸಕರಾದ ಜ್ಯೋತಿ ಗಣೇಶ್ ಅವರು ಬುಧವಾರ ಗಾಂಧಿನಗರದಲ್ಲಿರುವ ತಮ್ಮ ನಿವಾಸದಲ್ಲಿ ಬಿಡುಗಡೆಗೊಳಿಸಿದರು.
ಕ್ಯಾಲೆಂಡರ್ ಬಿಡುಗಡೆ ಸಂದರ್ಭದಲ್ಲಿ ಸಂಘದ ಚಟುವಟಿಕೆಗಳು ಹಾಗೂ ಸಮಾಜದ ಅಭಿವೃದ್ಧಿಗೆ ಕೈಗೊಳ್ಳಲಾಗಿರುವ ವಿವಿಧ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಲಾಯಿತು. ಸಮಾಜದ ಏಕತೆ ಹಾಗೂ ಪ್ರಗತಿಗೆ ಇಂತಹ ಸಂಘಟನೆಗಳ ಪಾತ್ರ ಮಹತ್ವದ್ದೆಂದು ಶಾಸಕರು ಈ ವೇಳೆ ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ಜಿಲ್ಲಾ ಬಂಜಾರ ಸಂಘದ ಅಧ್ಯಕ್ಷ ನಾರಾಯಣ್ ನಾಯ್ಕ ಡಿ., ಪ್ರಧಾನ ಕಾರ್ಯದರ್ಶಿ ಶಂಕರ್ ಬಿ. ಉಪಾಧ್ಯಕ್ಷರಾದ ಕುಬೇಂದ್ರ ನಾಯ್ಕ, ಸಂಘಟನಾ ಕಾರ್ಯದರ್ಶಿಗಳಾದ ಸ್ವಾಮಿ ಲಾಲ್, ಶ್ರೀ ಸೇವಾಲಾಲ್ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕುಬೇಂದ್ರ ನಾಯ್ಕ, ಉಪಾಧ್ಯಕ್ಷರಾದ ಶಂಕರ್ ಆರ್. ನಾಯ್ಕ, ಹಿರಿಯ ಮುಖಂಡ ದೇನಾ ನಾಯ್ಕ ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ ಜನಾಂಗದ ಮುಖಂಡರು ಹಾಜರಿದ್ದು, ಕಾರ್ಯಕ್ರಮಕ್ಕೆ ಶೋಭೆ ತಂದರು.
ವರದಿ : ನಂದೀಶ್ ನಾಯ್ಕ ಪಿ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


