nammatumakuru

    Subscribe to Updates

    Get the latest creative news from FooBar about art, design and business.

    What's Hot

    ಧಾರ್ಮಿಕ ಪರಂಪರೆಗೆ ಆಧುನಿಕ ಸ್ಪರ್ಶ: ತುಮಕೂರು ದಸರಾ ಉತ್ಸವದಲ್ಲಿ ಹೊಸ ಆಕರ್ಷಣೆಗಳು ಇವು 

    October 15, 2026

    ಸೊಳ್ಳೆಗಳ ಕಾಟಕ್ಕೆ ಮನೆಮದ್ದು ಪರಿಹಾರ!

    October 15, 2026

    WhatsApp ಬಳಕೆದಾರರೇ ಎಚ್ಚರ! ಈ 2 ಸೆಟ್ಟಿಂಗ್‌ ಆನ್ ಮಾಡಿ, ಸೈಬರ್ ವಂಚನೆಯ ಅಪಾಯ ತಗ್ಗಿಸಿ

    October 14, 2026
    Facebook Twitter Instagram
    ಟ್ರೆಂಡಿಂಗ್
    • ಧಾರ್ಮಿಕ ಪರಂಪರೆಗೆ ಆಧುನಿಕ ಸ್ಪರ್ಶ: ತುಮಕೂರು ದಸರಾ ಉತ್ಸವದಲ್ಲಿ ಹೊಸ ಆಕರ್ಷಣೆಗಳು ಇವು 
    • ಸೊಳ್ಳೆಗಳ ಕಾಟಕ್ಕೆ ಮನೆಮದ್ದು ಪರಿಹಾರ!
    • WhatsApp ಬಳಕೆದಾರರೇ ಎಚ್ಚರ! ಈ 2 ಸೆಟ್ಟಿಂಗ್‌ ಆನ್ ಮಾಡಿ, ಸೈಬರ್ ವಂಚನೆಯ ಅಪಾಯ ತಗ್ಗಿಸಿ
    • ರೈತರ ಬೇಡಿಕೆ ಈಡೇರುವವರೆಗೆ ಸಕ್ಕರೆ ಮುಟ್ಟಲ್ಲ! ಫಕೀರ ದಿಂಗಾಲೇಶ್ವರ ಸ್ವಾಮೀಜಿ ಪ್ರತಿಜ್ಞೆ
    • ಜಗನ್ನಾಥನ ರಥದ ಚಕ್ರ ಮನೆಗೆ ತರಬೇಕಾ? ಖರೀದಿಸಲು ಎಷ್ಟು ಹಣ ಕೊಡಬೇಕು?
    • ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?
    • ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಹಿಂದೆ ಯಾರು? ಕೆ.ಎನ್.ರಾಜಣ್ಣ ಹೇಳಿದ್ದೇನು?
    • “ದಮ್ಮು, ತಾಕತ್ತು ಇದ್ದರೆ ಹೋರಾಟಕ್ಕೆ ಬನ್ನಿ”; ನಟ ಸುದೀಪ್‌ ಗೆ ಉಗ್ರಪ್ಪ ಸವಾಲು?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗ್ರಾಮೀಣ ಪತ್ರಕರ್ತರಿಗೆ ಜಿಲ್ಲಾ ಬಸ್ ಪಾಸ್: ಆನ್‌ ಲೈನ್ ಅರ್ಜಿ ಆಹ್ವಾನ
    ತುಮಕೂರು January 29, 2025

    ಗ್ರಾಮೀಣ ಪತ್ರಕರ್ತರಿಗೆ ಜಿಲ್ಲಾ ಬಸ್ ಪಾಸ್: ಆನ್‌ ಲೈನ್ ಅರ್ಜಿ ಆಹ್ವಾನ

    By adminJanuary 29, 2025No Comments2 Mins Read
    bus pass

    ತುಮಕೂರು:  ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿತ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ಯೋಜನೆಗೆ ಅರ್ಹ ಪತ್ರಕರ್ತರಿಂದ ಆನ್‌ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

    ಮುಖ್ಯಮಂತ್ರಿಗಳು 2024–25ನೇ ಸಾಲಿನ ಆಯವ್ಯಯದಲ್ಲಿ ಈ ಯೋಜನೆ ಘೋಷಿಸಿದ್ದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ವಿದ್ಯುನ್ಮಾನ ಅಥವಾ ಮುದ್ರಣ ಮಾಧ್ಯಮಗಳಲ್ಲಿ ಪೂರ್ಣಾವಧಿಗೆ ನೇಮಕಗೊಂಡು 4 ವರ್ಷಗಳ ಸೇವಾನುಭವ ಹೊಂದಿರುವ ಪತ್ರಕರ್ತರು ಅರ್ಜಿ ಸಲ್ಲಿಸಬಹುದು. ನೇಮಕಾತಿ ಆದೇಶ/ವೇತನ ಪತ್ರ/ಬ್ಯಾಂಕ್ ಸ್ಟೇಟ್‌ಮೆಂಟ್‌ ಗಳಲ್ಲಿ ಯಾವುದಾದರೂ ದಾಖಲೆಗಳನ್ನು ಸೇವಾನುಭವಕ್ಕಾಗಿ ಒದಗಿಸಬೇಕು.

    ತಹಶೀಲ್ದಾರರಿಂದ ಪಡೆದ ವಾಸಸ್ಥಳ ಪ್ರಮಾಣ ಪತ್ರ ಒದಗಿಸಬೇಕು. ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸುವ ವರದಿಗಾರರಿಗೆ ಪ್ರತಿ ತಾಲ್ಲೂಕಿಗೆ ಸಂಪಾದಕರು ಸೂಚಿಸುವ ಒಬ್ಬರು, ಜಿಲ್ಲಾ ಮಟ್ಟದ ಪತ್ರಿಕೆಗಳು ತಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ ಒಬ್ಬರು, ಆರು ಪುಟಗಳಲ್ಲಿ ಪ್ರಕಟವಾಗುವ ಪ್ರಾದೇಶಿಕ ಪತ್ರಿಕೆಗಳು ಓರ್ವ ವರದಿಗಾರರು ಹಾಗೂ ಓರ್ವ ಫೋಟೋಗ್ರಾಫರ್, ಎಂಟು ಅಥವಾ ಹೆಚ್ಚು ಪುಟಗಳಲ್ಲಿ ಪ್ರಕಟವಾಗುವ ಪ್ರಾದೇಶಿಕ ಪತ್ರಿಕೆಗಳು ಇಬ್ಬರು ವರದಿಗಾರರು ಹಾಗೂ ಓರ್ವ ಫೋಟೋಗ್ರಾಫರ್‌ಗೆ ಬಸ್ ಪಾಸ್ ಪಡೆಯಲು ಅವಕಾಶವಿದೆ.

    ಉಪಗ್ರಹ ಆಧಾರಿತ ವಿದ್ಯುನ್ಮಾನ ವಾಹಿನಿಗಳ ವರದಿಗಾರರು ತಾಲೂಕು ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದರೆ ಪ್ರತಿ ತಾಲ್ಲೂಕಿಗೆ ಓರ್ವ ಕ್ಯಾಮರಾಮ್ಯಾನ್ ಹಾಗೂ ಓರ್ವ ವರದಿಗಾರರು ಬಸ್ ಪಾಸ್ ಪಡೆಯಬಹುದಾಗಿದೆ.

    ದಿನಪತ್ರಿಕೆಗಳು ಹಾಗೂ ಉಪಗ್ರಹ ಸುದ್ದಿ ವಾಹಿನಿಗಳ ಸಂಪಾದಕರು ನೀಡುವ ನೇಮಕಾತಿ ಪತ್ರ ಹಾಗೂ ಶಿಫಾರಸ್ಸು ಆಧರಿಸಿ ಅರ್ಹ ಪತ್ರಕರಿಗೆ ಬಸ್ ಪಾಸ್‌ಗಳನ್ನು ನೀಡಲಾಗುವುದು. ಬಸ್ ಪಾಸ್ ಪಡೆದವರು ಜಿಲ್ಲಾ ವ್ಯಾಪ್ತಿಯಲ್ಲಿ ಸಂಚರಿಸುವ ಕರ್ನಾಟಕ ಸಾರಿಗೆ ಸಂಸ್ಥೆ ಬಸ್ಸುಗಳಲ್ಲಿ ಜಿಲ್ಲಾ ವ್ಯಾಪ್ತಿಗೆ ಉಚಿತವಾಗಿ ಸಂಚರಿಸಬಹುದು.

    ಆಸಕ್ತ ಹಾಗೂ ಅರ್ಹ ಪತ್ರಕರ್ತರು ತಮ್ಮ ಸಮೀಪದ ಗ್ರಾಮ ಒನ್, ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ಕೇಂದ್ರಗಳಿಗೆ ತೆರಳಿ ಸೇವಾಸಿಂಧು ಪೋರ್ಟಲ್‌ ನಲ್ಲಿ ಆನ್‌ಲೈನ್ ಮೂಲಕ ಅಗತ್ಯ ದಾಖಲೆಗಳನ್ನು ಅಪ್‌ ಲೋಡ್ ಮಾಡಿ ಅರ್ಜಿ ಸಲ್ಲಿಸಬಹುದು. ಅಪ್‌ ಲೋಡ್ ಮಾಡಿದ ದಾಖಲೆಗಳು ಹಾಗೂ ಆನ್‌ ಲೈನ್ ಅರ್ಜಿಯ ಮುದ್ರಿತ ಪ್ರತಿಯನ್ನು ಸ್ವಯಂ ದೃಢೀಕರಿಸಿ ಆಯಾ ಜಿಲ್ಲೆಯ ಜಿಲ್ಲಾ ವಾರ್ತಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಧಾರ್ಮಿಕ ಪರಂಪರೆಗೆ ಆಧುನಿಕ ಸ್ಪರ್ಶ: ತುಮಕೂರು ದಸರಾ ಉತ್ಸವದಲ್ಲಿ ಹೊಸ ಆಕರ್ಷಣೆಗಳು ಇವು 

    October 15, 2026

    ತುಮಕೂರು ದಸರಾ ಉತ್ಸವ–2026ರ ಅಂಗವಾಗಿ ಮಹಿಳಾ ಕೌಶಲ್ಯ ಮೇಳ ಉದ್ಘಾಟನೆ

    October 13, 2026

    ತುಮಕೂರು ದಸರಾ ಹೆಲಿರೈಡ್ ಗೆ ವಿಶ್ವವಿದ್ಯಾಲಯ ಕ್ಯಾಂಪಸ್ ನ ಜಾಗ ನೀಡಲು ಆಡಳಿತ ಮಂಡಳಿ ನಕಾರ: ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿ ನಿರ್ಧಾರ

    October 12, 2026

    Comments are closed.

    Our Picks

    ಜಗನ್ನಾಥನ ರಥದ ಚಕ್ರ ಮನೆಗೆ ತರಬೇಕಾ? ಖರೀದಿಸಲು ಎಷ್ಟು ಹಣ ಕೊಡಬೇಕು?

    October 14, 2026

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್

    October 13, 2026

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಧಾರ್ಮಿಕ ಪರಂಪರೆಗೆ ಆಧುನಿಕ ಸ್ಪರ್ಶ: ತುಮಕೂರು ದಸರಾ ಉತ್ಸವದಲ್ಲಿ ಹೊಸ ಆಕರ್ಷಣೆಗಳು ಇವು 

    October 15, 2026

    ತುಮಕೂರು: ಜಿಲ್ಲೆಯಲ್ಲಿ ದಸರಾ ಸಂಭ್ರಮ ಕಳೆಗಟ್ಟಿದ್ದು, ಧಾರ್ಮಿಕ ಆಚರಣೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ವಿವಿಧ ಪ್ರದರ್ಶನಗಳ ಮೂಲಕ ಜನರನ್ನು ಆಕರ್ಷಿಸುತ್ತಿದೆ.…

    ಸೊಳ್ಳೆಗಳ ಕಾಟಕ್ಕೆ ಮನೆಮದ್ದು ಪರಿಹಾರ!

    October 15, 2026

    WhatsApp ಬಳಕೆದಾರರೇ ಎಚ್ಚರ! ಈ 2 ಸೆಟ್ಟಿಂಗ್‌ ಆನ್ ಮಾಡಿ, ಸೈಬರ್ ವಂಚನೆಯ ಅಪಾಯ ತಗ್ಗಿಸಿ

    October 14, 2026

    ರೈತರ ಬೇಡಿಕೆ ಈಡೇರುವವರೆಗೆ ಸಕ್ಕರೆ ಮುಟ್ಟಲ್ಲ! ಫಕೀರ ದಿಂಗಾಲೇಶ್ವರ ಸ್ವಾಮೀಜಿ ಪ್ರತಿಜ್ಞೆ

    October 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.