nammatumakuru

    Subscribe to Updates

    Get the latest creative news from FooBar about art, design and business.

    What's Hot

    ಡಿಸೆಂಬರ್ 12: ಕೆ.ಜೆ.ಕೆ. (KJK) ವಿದ್ಯಾರ್ಥಿಗಳಿಗಾಗಿ ಉದ್ಯೋಗ ಮೇಳ

    December 4, 2025

    ಕೆಟ್ಟು ನಿಂತ ಬಸ್: ವಿದ್ಯಾರ್ಥಿಗಳಿಂದ ಪರದಾಟ!

    December 4, 2025

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಬಿಲ್ವಾರ್ಚನೆ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ

    December 4, 2025
    Facebook Twitter Instagram
    ಟ್ರೆಂಡಿಂಗ್
    • ಡಿಸೆಂಬರ್ 12: ಕೆ.ಜೆ.ಕೆ. (KJK) ವಿದ್ಯಾರ್ಥಿಗಳಿಗಾಗಿ ಉದ್ಯೋಗ ಮೇಳ
    • ಕೆಟ್ಟು ನಿಂತ ಬಸ್: ವಿದ್ಯಾರ್ಥಿಗಳಿಂದ ಪರದಾಟ!
    • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಬಿಲ್ವಾರ್ಚನೆ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ
    • ಪತ್ರಕರ್ತರ ರಕ್ಷಣೆ ಕಾಯ್ದೆ ಜಾರಿಗಾಗಿ ಧರಣಿ: ಜಾನಸನ್ ಘೋಡೆ
    • ಆಸ್ತಿ ಸಿಕ್ಕಿದ ಮೇಲೆ ತಂದೆಯನ್ನು ಮರೆತ ಮಗನಿಗೆ ತಕ್ಕಪಾಠ ಕಲಿಸಿದ ತಂದೆ!
    • ತುಮಕೂರು: ಡಿಸೆಂಬರ್ 5ರಂದು ವಿದ್ಯುತ್ ವ್ಯತ್ಯಯ
    • ನೇತ್ರ ಸಹಾಯಕರ ಹುದ್ದೆ: ಡಿ.9ರಂದು ನೇರ ಸಂದರ್ಶನ
    • ನಾವೀನ್ಯತೆ, ಆವಿಷ್ಠಾರ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜಿಲ್ಲಾಧಿಕಾರಿಗಳಿಂದ ಕುಡಿಯುವ ನೀರಿನ ಕಾಮಗಾರಿ ಪರಿಶೀಲನೆ
    ತುಮಕೂರು May 27, 2025

    ಜಿಲ್ಲಾಧಿಕಾರಿಗಳಿಂದ ಕುಡಿಯುವ ನೀರಿನ ಕಾಮಗಾರಿ ಪರಿಶೀಲನೆ

    By adminMay 27, 2025No Comments2 Mins Read
    shubha kalyan

    ತುಮಕೂರು:  ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಶುಕ್ರವಾರ ಮಧುಗಿರಿ ಪುರಸಭೆ ವ್ಯಾಪ್ತಿಯ ವಿವಿಧ ವಾರ್ಡುಗಳಿಗೆ ಭೇಟಿ ನೀಡಿ ಕುಡಿಯುವ ನೀರಿನ ಕಾಮಗಾರಿಗಳನ್ನು ಪರಿಶೀಲಿಸಿದರು.

    ಪುರಸಭೆ ವ್ಯಾಪ್ತಿ ವಾರ್ಡ್ ನಂಬರ್ 11 ಹಾಗೂ 15ನೇ ವಾರ್ಡಿನಲ್ಲಿ ಕೈಗೊಂಡಿರುವ ಕುಡಿಯುವ ನೀರಿನ ಕಾಮಗಾರಿಗಳನ್ನು ವೀಕ್ಷಿಸಿದ ಅವರು, 11ನೇ ವಾರ್ಡಿನಲ್ಲಿ ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿ ಕುಡಿಯುವ ನೀರು ಪೋಲಾಗುತ್ತಿದ್ದು, ಯಾವೊಬ್ಬ ಗುತ್ತಿಗೆದಾರರು, ಅಧಿಕಾರಿಗಳೂ ಗಮನಿಸದೇ ಇರುವುದು ಅಧಿಕಾರಿಗಳ ಕರ್ತವ್ಯ ನಿರ್ಲಕ್ಷ್ಯತೆ ಎದ್ದು ಕಾಣಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.


    Provided by
    Provided by

    ಅಭಿವೃದ್ಧಿ ಕಾಮಗಾರಿ ನಡೆಯುವ ಸ್ಥಳದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಹಾಜರಿದ್ದು, ಕಾಮಗಾರಿ ಗುಣಮಟ್ಟವನ್ನು ಪರಿಶೀಲಿಸಬೇಕು. ಕಾಮಗಾರಿ ಸ್ಥಳಕ್ಕೆ ಕೂಡಲೇ ಇಂಜಿನಿಯರ್‍ಗಳನ್ನು ನಿಯೋಜಿಸಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ಸುರೇಶ್ ಅವರಿಗೆ ನಿರ್ದೇಶನ ನೀಡಿದರು.

    ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅಮೃತ್ ಯೋಜನೆಯಡಿ ಕುಡಿಯುವ ನೀರಿನ ಕಾಮಗಾರಿಗಳು ನಡೆಯುತ್ತಿದ್ದು, ಕುಡಿಯುವ ನೀರಿನ ಕಾಮಗಾರಿ ಕೈಗೊಳ್ಳುವಾಗ ನೀರಿನ ಪೈಪ್‍ಲೈನ್‍ಗೆ ಚರಂಡಿ ನೀರು ಮಿಶ್ರಣವಾಗದಂತೆ ಎಚ್ಚರಿಕೆ ವಹಿಸಬೇಕು. ಮಳೆಗಾಲವಾಗಿರುವುದರಿಂದ ಮಳೆ ನೀರು ತೆರೆದ ಚರಂಡಿಗೆ ಸೇರಿ ನೀರಿನ ಅರಿವು ಹೆಚ್ಚಾಗಿ   ಕಲುಷಿತ ನೀರು ಕುಡಿಯುವ ನೀರಿನ ಪೈಪ್‍ಲೈನ್‍ಗೆ ಸೇರುವ ಸಾಧ್ಯತೆಯಿರುತ್ತದೆ. ಕಲುಷಿತ ನೀರಿನಿಂದ ನಾಗರಿಕರಿಗೆ ಆರೋಗ್ಯ ಸಮಸ್ಯೆಗಳು ಎದುರಾಗಲಿರುವ  ಕಾರಣ  ತಕ್ಷಣವೇ ತೆರೆದ ಚರಂಡಿಗಳನ್ನು ಮುಚ್ಚಲು ಕ್ರಮ ಕೈಗೊಳ್ಳಬೇಕು. ಪೈಪ್ ಲೈನ್ ಕಾಮಗಾರಿ ಪ್ರಗತಿಗೆ ಅಸಡ್ಡೆ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು   ಸೂಚಿಸಿದರು.

    ಮಧುಗಿರಿ ಪುರಸಭೆಯಿಂದ ಸರಬರಾಜು ಮಾಡುತ್ತಿರುವ ಕುಡಿಯುವ ನೀರು ಕೆಟ್ಟ ವಾಸನೆಯಿಂದ ಕೂಡಿದೆ ಎಂದು ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಇಂದು ಭೇಟಿ ನೀಡಿ ಪರಿಶೀಲಿಸಲಾಗುತ್ತಿದೆ.  ಕುಡಿಯುವ ನೀರಿನ ಯಾವುದೇ ಮೂಲಗಳನ್ನು ಕಡ್ಡಾಯವಾಗಿ ಪ್ರಯೋಗಾಲಯದಲ್ಲಿ ಪರೀಕ್ಷೆಗೊಳಪಡಿಸಬೇಕು. ಕುಡಿಯಲು ಯೋಗ್ಯವಾದ ನೀರನ್ನು ಮಾತ್ರ ಜನರಿಗೆ ಒದಗಿಸಬೇಕು ಎಂದರಲ್ಲದೆ, ಕಳೆದ ವರ್ಷವಷ್ಟೇ ಮಧುಗಿರಿ ತಾಲ್ಲೂಕಿನ ಚಿನ್ನೇನಹಳ್ಳಿಯಲ್ಲಿ ಕಲುಷಿತ ನೀರು ಸೇವಿಸಿ ಸಾವಿನ ಪ್ರಕರಣ ವರದಿಯಾಗಿತ್ತು.  ಮತ್ತೊಮ್ಮೆ ಇಂತಹ ಪ್ರಕರಣಗಳು ಮರುಕಳಿಸದಂತೆ ಅಧಿಕಾರಿಗಳು ಜಾಗ್ರತೆವಹಿಸಬೇಕು ಎಂದು ಸೂಚಿಸಿದರು.

    ನಂತರ ಪಟ್ಟಣದ ರಾಜೀವ್‍ಗಾಂಧಿ ಕ್ರೀಡಾಂಗಣದ ಬಳಿಯಿರುವ ಜೆ.ಎಸ್.ಆಸ್ಪತ್ರೆಗೆ ಭೇಟಿ ನೀಡಿ ಆಸ್ಪತ್ರೆ ಸ್ವಚ್ಛತೆ, ಸಿಬ್ಬಂದಿ ಸಂಖ್ಯಾಬಲವನ್ನು ಪರಿಶೀಲಿಸಿದರು.

    ಬಳಿಕ ಕೊರಟಗೆರೆ ಪಟ್ಟಣದ ಹೊರವಲಯದಲ್ಲಿರುವ ಕಾಮೇನಹಳ್ಳಿಗೆ ಭೇಟಿ ನೀಡಿ ಅಮೃತ್ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳನ್ನು ಸಮರ್ಪಕವಾಗಿ ಪೂರ್ಣಗೊಳಿಸಬೇಕು. ಕಲುಷಿತ ನೀರಿನಿಂದ ಜನರ ಆರೋಗ್ಯದಲ್ಲಿ ಏರು-ಪೇರು, ವಾಂತಿ-ಬೇಧಿ, ಸಾವಿನ ಪ್ರಕರಣಗಳು ವರದಿಯಾದರೆ ಸಂಬಂಧಿಸಿದ ಅಧಿಕಾರಿಗಳೇ ಹೊಣೆ ಎಂದು ತಾಕೀತು ಮಾಡಿದರು.

    ನಂತರ ಡಾ: ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆಬಾವಿ ಸೌಲಭ್ಯ ಪಡೆದಿರುವ ಕೊರಟಗೆರೆ ತಾಲ್ಲೂಕು ಪಾತಗಾನಹಳ್ಳಿಯ ರೈತ ಶ್ರೀನಿವಾಸ್ ಅವರ ಜಮೀನಿಗೆ ಭೇಟಿ ನೀಡಿ ಕೊಳವೆಬಾವಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿರುವ ಬಗ್ಗೆ ಪರಿಶೀಲಿಸಿದರು. ಇದೇ ವೇಳೆ ಮಾತನಾಡಿದ  ಅವರು ಗಂಗಾ ಕಲ್ಯಾಣ ಯೋಜನೆಯಡಿ ಬಾಕಿಯಿರುವ ಕೊಳವೆಬಾವಿ ಕೊರೆಯುವ, ಈಗಾಗಲೇ ಕೊರೆದಿರುವ ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.

    ಈ ಸಂದರ್ಭದಲ್ಲಿ ಮಧುಗಿರಿ ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ, ತಹಶೀಲ್ದಾರ್  ಶಿರಿನ್‍ತಾಜ್, ಕೊರಟಗೆರೆ ತಹಶೀಲ್ದಾರ್  ಮಂಜುನಾಥ್ ಹಾಗೂ ಮತ್ತಿತರ ಅಧಿಕಾರಿ/ಸಿಬ್ಬಂದಿ ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಆಸ್ತಿ ಸಿಕ್ಕಿದ ಮೇಲೆ ತಂದೆಯನ್ನು ಮರೆತ ಮಗನಿಗೆ ತಕ್ಕಪಾಠ ಕಲಿಸಿದ ತಂದೆ!

    December 4, 2025

    ತುಮಕೂರು: ಡಿಸೆಂಬರ್ 5ರಂದು ವಿದ್ಯುತ್ ವ್ಯತ್ಯಯ

    December 4, 2025

    ನೇತ್ರ ಸಹಾಯಕರ ಹುದ್ದೆ: ಡಿ.9ರಂದು ನೇರ ಸಂದರ್ಶನ

    December 4, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಉದ್ಯೋಗ

    ಡಿಸೆಂಬರ್ 12: ಕೆ.ಜೆ.ಕೆ. (KJK) ವಿದ್ಯಾರ್ಥಿಗಳಿಗಾಗಿ ಉದ್ಯೋಗ ಮೇಳ

    December 4, 2025

    ಉನ್ನತ ಶಿಕ್ಷಣ ಇಲಾಖೆಯ ಆದೇಶ ಹಾಗೂ ಮಾರ್ಗಸೂಚಿಗಳ ಪ್ರಕಾರ GFGC ತುಮಕೂರು (ಲೀಡ್ ಕಾಲೇಜು) ಉದ್ಯೋಗ ಮೇಳವನ್ನು ಆಯೋಜಿಸಿದೆ.ತುಮಕೂರು ಜಿಲ್ಲೆಯ…

    ಕೆಟ್ಟು ನಿಂತ ಬಸ್: ವಿದ್ಯಾರ್ಥಿಗಳಿಂದ ಪರದಾಟ!

    December 4, 2025

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಬಿಲ್ವಾರ್ಚನೆ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ

    December 4, 2025

    ಪತ್ರಕರ್ತರ ರಕ್ಷಣೆ ಕಾಯ್ದೆ ಜಾರಿಗಾಗಿ ಧರಣಿ: ಜಾನಸನ್ ಘೋಡೆ

    December 4, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.