nammatumakuru

    Subscribe to Updates

    Get the latest creative news from FooBar about art, design and business.

    What's Hot

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 20, 2026

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026

    ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

    February 20, 2026
    Facebook Twitter Instagram
    ಟ್ರೆಂಡಿಂಗ್
    • ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ
    • ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ
    • ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ
    • ಬಾಗಲಕೋಟೆ ಕಲ್ಲು ತೂರಾಟ ಘಟನೆ: ತಪ್ಪಿತಸ್ಥರು ಯಾರೇ ಆಗಿದ್ದರೂ  ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ
    • ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ: ಮುಖ್ಯ ಆರೋಪಿ ಸೇರಿ ಎಂಟು ಮಂದಿ ಅರೆಸ್ಟ್; ಫೆ.24ರವರೆಗೆ ನಿಷೇಧಾಜ್ಞೆ ಜಾರಿ
    • ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಎಂಬ್ರಾಯಿಡರಿ, ಫ್ಯಾಬ್ರಿಕ್ ಪೇಂಟಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ
    • ಕಾರವಾರ: ಛತ್ರಪತಿ ಶಿವಾಜಿ ಜಯಂತಿ ಆಚರಣೆ
    • ಕಾರವಾರ: ಜನನ, ಮರಣವನ್ನು 21 ದಿನಗಳ ಒಳಗೆ ನೋಂದಣಿ ಮಾಡಿ: ಅಪರ ಜಿಲ್ಲಾಧಿಕಾರಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆಯ್ಕೆಯಾದ ಫಲಾನುಭವಿಗಳಿಗೆ ನಿಗಧಿತ ಕಾಲಾವಧಿಯೊಳಗೆ ಸಾಲ ಸೌಲಭ್ಯ ಒದಗಿಸಲು ಜಿಲ್ಲಾಧಿಕಾರಿ ಸೂಚನೆ
    ಜಿಲ್ಲಾ ಸುದ್ದಿ December 6, 2024

    ಆಯ್ಕೆಯಾದ ಫಲಾನುಭವಿಗಳಿಗೆ ನಿಗಧಿತ ಕಾಲಾವಧಿಯೊಳಗೆ ಸಾಲ ಸೌಲಭ್ಯ ಒದಗಿಸಲು ಜಿಲ್ಲಾಧಿಕಾರಿ ಸೂಚನೆ

    By adminDecember 6, 2024No Comments2 Mins Read
    shubha kalyan

    ತುಮಕೂರು:  ಸಮಾಜ ಕಲ್ಯಾಣ ಇಲಾಖೆ ಅನುಷ್ಟಾನ ಮಾಡುವ ನೇರ ಸಾಲ, ಸ್ವಾವಲಂಬಿ ಸಾರಥಿ ಸೇರಿದಂತೆ ಹಲವಾರು ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಆಯ್ಕೆಯಾದ ಫಲಾನುಭವಿಗಳಿಗೆ ನಿಗದಿತ ಕಾಲಾವಧಿಯೊಳಗೆ ಸಾಲ ಸೌಲಭ್ಯ ಒದಗಿಸಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯದ ಫಲಾನುಭವಿಗಳಿಗೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಕಲ್ಪಿಸಲು ಗುರುವಾರ ಜರುಗಿದ ಆಯ್ಕೆ ಸಮಿತಿ ಸಭೆಯಲ್ಲಿ ಫಲಾನುಭವಿಗಳನ್ನು ಆಯ್ಕೆ ಮಾಡಿದ ನಂತರ ಮಾತನಾಡಿದ ಅವರು, 2023–24ನೇ ಆರ್ಥಿಕ ಸಾಲಿನಿಂದ ಬಾಕಿಯಿದ್ದ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ಇಂದು ನಡೆಸಲಾಗಿದ್ದು, ಸರ್ಕಾರ ನಿಗಧಿಪಡಿಸಿರುವ ಭೌತಿಕ ಗುರಿಯ ಆಧಾರದ ಮೇಲೆ ಪಾರದರ್ಶಕವಾಗಿ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.


    Provided by
    Provided by

    ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಕಡಿಮೆ ಜನಸಂಖ್ಯೆ ಇರುವ ಸಮುದಾಯದವರಿಗೆ ಆದ್ಯತೆ ನೀಡಲಾಗಿದೆ. ಸರ್ಕಾರ ನಿಗಧಿಪಡಿಸಿರುವ ಭೌತಿಕ ಗುರಿಯಲ್ಲಿ ಕನಿಷ್ಠ ಶೇ.33ರಷ್ಟು ಮಹಿಳಾ ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದ್ದು, ಮಹಿಳಾ ಫಲಾನುಭವಿಗಳು ಲಭ್ಯವಿಲ್ಲದಿದ್ದಾಗ ಪುರುಷ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ವಿಕಲಚೇತನ ಫಲಾಪೇಕ್ಷಿಗಳಿಗೆ ಶೇ. 5ರಷ್ಟು ಆದ್ಯತೆ ನೀಡಲಾಗಿದೆ. ಸಾಲ–ಸೌಲಭ್ಯಗಳಿಗೆ ಹೆಚ್ಚಿನ ವಯೋಮಾನದವರನ್ನು, ಈ ಹಿಂದೆ ಸುಮಾರು ಬಾರಿ ಅರ್ಜಿ ಸಲ್ಲಿಸಿ ಆಯ್ಕೆಯಾಗದಿರುವವರನ್ನು ಈ ಬಾರಿ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.

    ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ ಮಾತನಾಡಿ, ಕೇಂದ್ರ ಕಚೇರಿ ನೀಡಿರುವ ಮಾನದಂಡಗಳನ್ವಯ ವಿವಿಧ ಯೋಜನೆಗಳಡಿ 112 ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ. ಈ ಆಯ್ಕೆ ಸಮಿತಿಯಲ್ಲಿ ನೇರ ಸಾಲ, ಸ್ವಾವಲಂಬಿ ಸಾರಥಿ, ಉದ್ಯಮಶೀಲತೆ, ಭೂ ಒಡೆತನ, ಪ್ರೇರಣಾ, ಗಂಗಾಕಲ್ಯಾಣ ಯೋಜನೆಗಳಡಿ 2023-24 ರಿಂದ 2024-25ನೇ ಸಾಲಿಗಾಗಿ ಫಲಾನುಭವಿಗಳು ಆಯ್ಕೆಯಾಗಿದ್ದು, ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಆಯ್ಕೆಯಾದವರಿಗೆ ನಿಗಧಿತ ಸಮಯದೊಳಗೆ ಸಾಲ ಸೌಲಭ್ಯ ಒದಗಿಸಲು ಕ್ರಮವಹಿಸಲಾಗುವುದು ಎಂದು ಸಭೆಗೆ ತಿಳಿಸಿದರು.

    ಪರಿಶಿಷ್ಟ ಜಾತಿ ಅಲೆಮಾರಿ ಸಮುದಾಯದಲ್ಲಿ ನೇರಸಾಲ ಯೋಜನೆಯಡಿ–52, ಸ್ವಾವಲಂಭಿ ಸಾರಥಿ ಯೋಜನೆಯಡಿ–9, ಉದ್ಯಮಶೀಲತಾ ಯೋಜನೆಯಡಿ-7, ಭೂ–ಒಡೆತನ ಯೋಜನೆಯಡಿ–3; ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯದಲ್ಲಿ ನೇರಸಾಲ ಯೋಜನೆಯಡಿ–7, ಸ್ವಾವಲಂಭಿ ಸಾರಥಿ ಯೋಜನೆಯಡಿ –6, ಉದ್ಯಮಶೀಲತಾ ಯೋಜನೆಯಡಿ–3, ಭೂ-ಒಡೆತನ ಯೋಜನೆಯಡಿ–2, ಪ್ರೇರಣಾ ಯೋಜನೆಯಡಿ–4, ಗಂಗಾ ಕಲ್ಯಾಣ ಯೋಜನೆಯಡಿ–1; ಮೇದಾರ ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯದಲ್ಲಿ ನೇರಸಾಲ ಯೋಜನೆಯಡಿ–15, ಸ್ವಾವಲಂಬಿ ಸಾರಥಿ ಯೋಜನೆಯಡಿ–2, ಪ್ರೇರಣಾ ಯೋಜನೆಯಡಿ–1 ಫಲಾನುಭವಿಯನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.

    ಸಭೆಯಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತ್ಯಾಗರಾಜ್, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಸಣ್ಣ ಮಸಿಯಪ್ಪ, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಮಂಜುನಾಥ್ ಸೇರಿದಂತೆ ಆಯ್ಕೆ ಸಮಿತಿ ಸದಸ್ಯರು ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 20, 2026

    ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

    February 20, 2026

    ಕಾರವಾರ: ಛತ್ರಪತಿ ಶಿವಾಜಿ ಜಯಂತಿ ಆಚರಣೆ

    February 20, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 20, 2026

    ಬೀದರ್: ಜಿಲ್ಲೆಯ ಔರಾದ ತಾಲೂಕಿನ ಸಂತಪುರ ಅನುಭವ ಮಂಟಪ ಗುರುಕುಲ್ ಪಬ್ಲಿಕ್ ಸ್ಕೂಲ್‌ನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026

    ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

    February 20, 2026

    ಬಾಗಲಕೋಟೆ ಕಲ್ಲು ತೂರಾಟ ಘಟನೆ: ತಪ್ಪಿತಸ್ಥರು ಯಾರೇ ಆಗಿದ್ದರೂ  ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

    February 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.