nammatumakuru

    Subscribe to Updates

    Get the latest creative news from FooBar about art, design and business.

    What's Hot

    ರೂ.1.50 ಲಕ್ಷಗಳಂತೆ ಫೆಲೋಶಿಪ್: ಕಿರು ಅಧ್ಯಯನ ಯೋಜನೆಗೆ ಅರ್ಜಿ ಆಹ್ವಾನ

    July 23, 2026

    ಜು.28 ರಂದು ಅರಳಿಮರದಡಿಯಲ್ಲಿ ‘ಮೊಳಗಲಿ ಜಾನಪದ’: ಸಂಗೀತ–ಸಾಂಸ್ಕೃತಿಕ ಕಾರ್ಯಕ್ರಮ

    July 23, 2026

    ಪರ್ಯಾಯ ವ್ಯವಸ್ಥೆ ಮಾಡದೆ ತೆರವು ಮಾಡಬೇಡಿ: ಬೀದಿಬದಿ ವ್ಯಾಪಾರಿಗಳ ಸಂಘ ಮನವಿ

    July 23, 2026
    Facebook Twitter Instagram
    ಟ್ರೆಂಡಿಂಗ್
    • ರೂ.1.50 ಲಕ್ಷಗಳಂತೆ ಫೆಲೋಶಿಪ್: ಕಿರು ಅಧ್ಯಯನ ಯೋಜನೆಗೆ ಅರ್ಜಿ ಆಹ್ವಾನ
    • ಜು.28 ರಂದು ಅರಳಿಮರದಡಿಯಲ್ಲಿ ‘ಮೊಳಗಲಿ ಜಾನಪದ’: ಸಂಗೀತ–ಸಾಂಸ್ಕೃತಿಕ ಕಾರ್ಯಕ್ರಮ
    • ಪರ್ಯಾಯ ವ್ಯವಸ್ಥೆ ಮಾಡದೆ ತೆರವು ಮಾಡಬೇಡಿ: ಬೀದಿಬದಿ ವ್ಯಾಪಾರಿಗಳ ಸಂಘ ಮನವಿ
    • ಚಿಕ್ಕನಾಯಕನಹಳ್ಳಿ: ಕುಡಿಯುವ ನೀರಿನ ವ್ಯವಸ್ಥೆ: ಮೂಲ ಸೌಕರ್ಯಕ್ಕೆ ಸೂಚನೆ
    • ರಾಹುಲ್ ಗಾಂಧಿಯವರ ಧ್ವನಿ ಅಡಗಿಸುವುದಕ್ಕೆ ಕೇಂದ್ರದ ಪ್ರಯತ್ನ: ಡಾ.ಜಿ.ಪರಮೇಶ್ವರ
    • ಕುಣಿಗಲ್: ಪಾವಸಂದ್ರ ಕಲ್ಲುಕ್ವಾರಿಯಲ್ಲಿ 12 ಜೀತದಾಳುಗಳ ರಕ್ಷಣೆ: ಉಪವಿಭಾಗಾಧಿಕಾರಿಗಳಿಂದ ವಿಮುಕ್ತಿ ಆದೇಶ
    • ನೀಟ್ ಅಕ್ರಮ ಖಂಡಿಸಿ ಜುಲೈ 25ಕ್ಕೆ ತಿಪಟೂರಿನಲ್ಲಿ ಧರಣಿ ಸತ್ಯಾಗ್ರಹ: ಸಿ.ಬಿ. ಶಶಿಧರ್
    • ಹಿರಿಯ ಪತ್ರಕರ್ತೆ, ಜಿ.ಪಂ. ಮಾಜಿ ಅಧ್ಯಕ್ಷೆ ಕಮಲಾ ಗಂಗಹನುಮಯ್ಯ ವಿಧಿವಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಎಡೆಯೂರು ಜಾತ್ರೆ: ಕಾಲ್ತುಳಿತವಾಗದಂತೆ ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸೂಚನೆ
    ತುಮಕೂರು February 27, 2025

    ಎಡೆಯೂರು ಜಾತ್ರೆ: ಕಾಲ್ತುಳಿತವಾಗದಂತೆ ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸೂಚನೆ

    By adminFebruary 27, 2025No Comments2 Mins Read
    shubha kalyan

    ತುಮಕೂರು: ಜಿಲ್ಲೆಯ ಕುಣಿಗಲ್ ತಾಲೂಕು ಎಡೆಯೂರು ಶ್ರೀ ಸಿದ್ದಲಿಂಗೇಶ್ವರಸ್ವಾಮಿ ಕ್ಷೇತ್ರದಲ್ಲಿ ಏಪ್ರಿಲ್ 5ರಂದು ಜರುಗುವ ಮಹಾರಥೋತ್ಸವಕ್ಕೆ ಸಹಸ್ರಾರು ಭಕ್ತಾದಿಗಳು ಆಗಮಿಸುವುದರಿಂದ ಯಾವುದೇ ರೀತಿ ಬೆಂಕಿ ಅವಘಡ–ಕಾಲ್ತುಳಿತವಾಗದಂತೆ ಮುನ್ನೆಚ್ಚರಿಕೆ ವಹಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ತಮ್ಮ ಕಚೇರಿಯಲ್ಲಿ ಗುರುವಾರ ಜರುಗಿದ ಪೂರ್ವಭಾವಿ ಸಭೆ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಬೆಂಕಿ ಅವಘಡಗಳುಂಟಾದಲ್ಲಿ ಪಾರಾಗುವ ಹಾಗೂ ಕಾಲ್ತುಳಿತ, ನೂಕು–ನುಗ್ಗಲುಗಳಾಗದಂತೆ ಸಂಯಮದಿಂದ ನಡೆದುಕೊಳ್ಳುವ ಬಗ್ಗೆ ಎಲ್ಇಡಿ ಪರದೆ ಅಳವಡಿಸಿ ಕಿರು ಚಿತ್ರಗಳನ್ನು ಪ್ರದರ್ಶಿಸುವ ಮೂಲಕ ಜನ ಜಾಗೃತಿ ಮೂಡಿಸಬೇಕು ಎಂದು ಸೂಚಿಸಿದರು.

    ಭಕ್ತಾದಿಗಳಿಗೆ ವಿತರಿಸುವ ಪ್ರಸಾದ ತಯಾರಿಸಲು ಶುದ್ಧ ಕುಡಿಯುವ ನೀರನ್ನೇ ಬಳಸಬೇಕು. ಸ್ವಾಮಿಯ ದರ್ಶನಕ್ಕೆ ಕುಟುಂಬ ಸಮೇತ ಆಗಮಿಸುವ ಸಾರ್ವಜನಿಕರಿಗೆ ತೊಂದರೆಯಾಗಂತೆ ಮೂಲಭೂತ ಸೌರ‍್ಯಗಳನ್ನು ಒದಗಿಸಬೇಕು. ಜಾತ್ರಾ ಸಂದರ್ಭದಲ್ಲಿ ಸ್ವಚ್ಛತೆ ಕಾಪಾಡಲು ಸಿಬ್ಬಂದಿಗಳನ್ನು ನಿಯೋಜಿಸಬೇಕು. ಜಾತ್ರಾ ಕೆಲಸ–ಕಾರ್ಯಗಳಿಗೆ ನಿಯೋಜಿಸುವ ಸಿಬ್ಬಂದಿಗೆ ಧರಿಸಲು ದೇವಸ್ಥಾನದ ಚಿಹ್ನೆಯಿರುವ ಒಂದೇ ಬಣ್ಣದ ಮೇಲು ಅಂಗಿಯನ್ನು ನೀಡಬೇಕು. ಇದರಿಂದ ಸಮಸ್ಯೆಗಳುಂಟಾದಾಗ ನೆರವು ಕೋರಲು ಭಕ್ತಾದಿಗಳಿಗೆ ಅನುವಾಗುತ್ತದೆ ಎಂದು ತಿಳಿಸಿದರು.

    ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ ಮಾತನಾಡಿ, ಮಾರ್ಚ್ 29 ರಿಂದ ಏಪ್ರಿಲ್ 12ರವರೆಗೆ ನಡೆಯುವ ಜಾತ್ರೆ ವೇಳೆಯಲ್ಲಿ ಮುಂಜಾಗ್ರತಾ ದೃಷ್ಟಿಯಿಂದ ಅಗ್ನಿಶಾಮಕ ವಾಹನ ಮತ್ತು ಸಿಬ್ಬಂದಿಯನ್ನು ನಿಯೋಜಿಸಬೇಕು. ತಾತ್ಕಾಲಿಕ ಆಸ್ಪತ್ರೆ ಪ್ರಾರಂಭಿಸಿ ತುರ್ತು ಚಿಕಿತ್ಸಾ ವಾಹನ ಹಾಗೂ ಔಷಧಿಯೊಂದಿಗೆ ಅಗತ್ಯ ಸಿಬ್ಬಂದಿಯನ್ನು ನಿಯೋಜಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶಿಸಿದರು.
    ಸ್ವಾಮಿಯ ರಥದ ರಿಪೇರಿ ಕೆಲಸಗಳಿದ್ದಲ್ಲಿ ಒಂದು ವಾರ ಮುಂಚಿತವಾಗಿ ತಿಳಿಸಬೇಕು ಹಾಗೂ ರಥದ ದೃಢತೆ ಬಗ್ಗೆ ದೃಢೀಕರಣ ಪತ್ರ ನೀಡಬೇಕೆಂದು ಲೋಕೋಪಯೋಗಿ ಇಲಾಖೆಗೆ ಸೂಚನೆ ನೀಡಿದರು.

    ಜಾತ್ರೆಗೆ ಬರುವ ವಾಹನಗಳಿಗೆ ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಮಾಡಬೇಕು ಎಂದರಲ್ಲದೆ ಜಾತ್ರೆಯಲ್ಲಿ ಭಾಗವಹಿಸುವ ಉತ್ತಮ ರಾಸುಗಳಿಗೆ ಪ್ರಥಮ, ದ್ವಿತೀಯ, ತೃತೀಯ ಬಹುಮಾನವನ್ನು ವಿತರಿಸುವ ಬಗ್ಗೆ ಚರ್ಚಿಸಿದರು.
    ಮುನ್ನೆಚ್ಚರಿಕಾ ಕ್ರಮವಾಗಿ ಗ್ಯಾಸ್ ಸಿಲಿಂಡರ್ ಹಾಗೂ ಗ್ಯಾಸ್ ಸ್ಟೋವ್ಗಳನ್ನು ಇಟ್ಟಿರುವ ಅಂಗಡಿಗಳಲ್ಲಿ 6 ಕೆ.ಜಿ. ಸಾಮರ್ಥ್ಯದ ಎಬಿಸಿ ಪುಡಿ(ಅಗ್ನಿ ನಂದಕ)ಯನ್ನು ಇಟ್ಟುಕೊಂಡಿದ್ದಲ್ಲಿ ಸಂಭವಿಸಬಹುದಾದ ಅಪಾಯಗಳನ್ನು ತಪ್ಪಿಸಬಹುದೆಂದು ಸಲಹೆ ನೀಡಿದರು.

    ಸಭೆಯಲ್ಲಿ ಎಡೆಯೂರು ಶ್ರೀ ಸಿದ್ದಲಿಂಗೇಶ್ವರ ಸ್ವಾಮಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಸುನಿಲ್ ಕುಮಾರ್ ಹಾಗೂ ಆರೋಗ್ಯ, ಅಗ್ನಿಶಾಮಕ, ಪಶುಪಾಲನಾ, ಕನ್ನಡ ಮತ್ತು ಸಂಸ್ಕೃತಿ, ವಾರ್ತಾ ಇಲಾಖೆ, ಕೆಎಸ್ಆರ್ಟಿಸಿ ಅಧಿಕಾರಿ ಸೇರಿದಂತೆ ಮತ್ತಿತರ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4


    Provided by
    Provided by
    admin
    • Website

    Related Posts

    ರೂ.1.50 ಲಕ್ಷಗಳಂತೆ ಫೆಲೋಶಿಪ್: ಕಿರು ಅಧ್ಯಯನ ಯೋಜನೆಗೆ ಅರ್ಜಿ ಆಹ್ವಾನ

    July 23, 2026

    ಜು.28 ರಂದು ಅರಳಿಮರದಡಿಯಲ್ಲಿ ‘ಮೊಳಗಲಿ ಜಾನಪದ’: ಸಂಗೀತ–ಸಾಂಸ್ಕೃತಿಕ ಕಾರ್ಯಕ್ರಮ

    July 23, 2026

    ಪರ್ಯಾಯ ವ್ಯವಸ್ಥೆ ಮಾಡದೆ ತೆರವು ಮಾಡಬೇಡಿ: ಬೀದಿಬದಿ ವ್ಯಾಪಾರಿಗಳ ಸಂಘ ಮನವಿ

    July 23, 2026

    Comments are closed.

    Our Picks

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ರೂ.1.50 ಲಕ್ಷಗಳಂತೆ ಫೆಲೋಶಿಪ್: ಕಿರು ಅಧ್ಯಯನ ಯೋಜನೆಗೆ ಅರ್ಜಿ ಆಹ್ವಾನ

    July 23, 2026

    ತುಮಕೂರು: ಸಂತಕವಿ ಕನಕದಾಸ ಮತ್ತು ತತ್ತ್ವಪದಕಾರರ ಅಧ್ಯಯನ ಕೇಂದ್ರವು 2026-27ನೇ ಸಾಲಿನಲ್ಲಿ ಕಿರು ಅಧ್ಯಯನ ನಡೆಸಲು ತಲಾ ರೂ.1.50 ಲಕ್ಷಗಳಂತೆ…

    ಜು.28 ರಂದು ಅರಳಿಮರದಡಿಯಲ್ಲಿ ‘ಮೊಳಗಲಿ ಜಾನಪದ’: ಸಂಗೀತ–ಸಾಂಸ್ಕೃತಿಕ ಕಾರ್ಯಕ್ರಮ

    July 23, 2026

    ಪರ್ಯಾಯ ವ್ಯವಸ್ಥೆ ಮಾಡದೆ ತೆರವು ಮಾಡಬೇಡಿ: ಬೀದಿಬದಿ ವ್ಯಾಪಾರಿಗಳ ಸಂಘ ಮನವಿ

    July 23, 2026

    ಚಿಕ್ಕನಾಯಕನಹಳ್ಳಿ: ಕುಡಿಯುವ ನೀರಿನ ವ್ಯವಸ್ಥೆ: ಮೂಲ ಸೌಕರ್ಯಕ್ಕೆ ಸೂಚನೆ

    July 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.