ತುಮಕೂರು: ತುಮಕೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಇಂದು ದಿಡೀರ್ ಭೇಟಿ ನೀಡಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ ಆಸ್ಪತ್ರೆಯಲ್ಲಿ ಸ್ವಚ್ಛತೆ ಇಲ್ಲದೆ ಇರೋದನ್ನು ಕಂಡು ಅಧಿಕಾರಿಗಳು ಹಾಗೂ ವೈದ್ಯರನ್ನು ತರಾಟೆಗೆ ತೆಗೆದುಕೊಂಡರು.
ಈ ಸಂದರ್ಭದಲ್ಲಿ ರೋಗಿಗಳ ಪರಿಸ್ಥಿತಿಯನ್ನು ಅವಲೋಕಿಸಿದವರು ಸೂಕ್ತ ಚಿಕಿತ್ಸೆ ನೀಡದೆ ಬೇಜವಾಬ್ದಾರಿತನದಿಂದ ವರ್ತಿಸುತ್ತಿರುವ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಹಾಗೂ ಸ್ವಚ್ಛತೆ ಕಾಪಾಡಿಕೊಳ್ಳದೆ ಇರುವ ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.
ಇನ್ನೊಂದೆಡೆ ತುಮಕೂರು ನಗರದ ಆದ್ಯಂತ ಡೆಂಗ್ಯೂ ಉಲ್ಬಣಗೊಳ್ಳುತ್ತಿದ್ದು ಆಸ್ಪತ್ರೆಯಲ್ಲಿಯೇ ಸ್ವಚ್ಛತೆ ಇಲ್ಲದಿರುವುದನ್ನು ಕಂಡು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ ವಿಶೇಷ ಗಮನಹರಿಸಬೇಕೆಂದು ಆದೇಶ ನೀಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA