nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಕ್ಕಳು ದುಶ್ಚಟಗಳಿಂದ ದೂರವಿರಿ: ಅಬಕಾರಿ ಉಪ ಅಧೀಕ್ಷಕ ದೀಪಕ್ ಎಸ್. ಕರೆ

    July 28, 2026

    ಸರಗೂರು: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅರ್ಥಪೂರ್ಣ ವಿಶ್ವ ಜನಸಂಖ್ಯಾ ದಿನಾಚರಣೆ

    July 28, 2026

    ಸರಗೂರು: ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ; ಸಂಘಟನೆ ಬಲವರ್ಧನೆಗೆ ಕರೆ

    July 28, 2026
    Facebook Twitter Instagram
    ಟ್ರೆಂಡಿಂಗ್
    • ಮಕ್ಕಳು ದುಶ್ಚಟಗಳಿಂದ ದೂರವಿರಿ: ಅಬಕಾರಿ ಉಪ ಅಧೀಕ್ಷಕ ದೀಪಕ್ ಎಸ್. ಕರೆ
    • ಸರಗೂರು: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅರ್ಥಪೂರ್ಣ ವಿಶ್ವ ಜನಸಂಖ್ಯಾ ದಿನಾಚರಣೆ
    • ಸರಗೂರು: ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ; ಸಂಘಟನೆ ಬಲವರ್ಧನೆಗೆ ಕರೆ
    • ಹಾದನೂರು ಸರ್ಕಾರಿ ಶಾಲೆಗೆ ‘ಗಿಫ್ಟ್ ಎ ಡ್ರೀಮ್ಸ್ ಫೌಂಡೇಷನ್’ ಆಸರೆ: ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ, ಸಮವಸ್ತ್ರ ವಿತರಣೆ
    • ಶಾಸಕ ಪ್ರಭು ಚೌವ್ಹಾಣ್ ಅವರಿಗೆ ಪತ್ರಿಕಾ ದಿನಾಚರಣೆಗೆ ಅಧಿಕೃತ ಆಹ್ವಾನ
    • ಸರಗೂರು: ರಸ್ತೆ ಅಭಿವೃದ್ಧಿಯಿಂದ ಗ್ರಾಮೀಣ ಭಾಗಕ್ಕೆ ಹೊಸ ಚೈತನ್ಯ — ಶಾಸಕರ ಕಾರ್ಯಕ್ಕೆ ಸಾರ್ವಜನಿಕ ಮೆಚ್ಚುಗೆ
    • ಬೀದರ್: ಮಳೆ ಅಭಾವ; ವಲಸೆ ತಡೆಗೆ ‘ವಿಬಿ-ಜಿ ರಾಮ್ ಜಿ’ ಅಡಿ ಕೆಲಸ ನೀಡಲು ಸಚಿವ ಈಶ್ವರ ಖಂಡ್ರೆ ಸೂಚನೆ
    • ಸರಗೂರು: ಧಾರ್ಮಿಕ ಕ್ಷೇತ್ರದ ಸಮೀಪ ಬಾರ್ ತೆರವಿಗೆ ಆಗ್ರಹಿಸಿ ತಾಲೂಕು ಆಡಳಿತದ ವಿರುದ್ಧ ಬೃಹತ್ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಾಯಿ ಮತ್ತು ಶಿಶು ಮರಣದ ಪ್ರಮಾಣವನ್ನು ಶೂನ್ಯಕ್ಕಿಳಿಸಲು ಜಿಲ್ಲಾಧಿಕಾರಿ ಸೂಚನೆ
    ತುಮಕೂರು December 17, 2024

    ತಾಯಿ ಮತ್ತು ಶಿಶು ಮರಣದ ಪ್ರಮಾಣವನ್ನು ಶೂನ್ಯಕ್ಕಿಳಿಸಲು ಜಿಲ್ಲಾಧಿಕಾರಿ ಸೂಚನೆ

    By adminDecember 17, 2024No Comments2 Mins Read
    tumakuru dc

    ತುಮಕೂರು: ಜಿಲ್ಲೆಯಲ್ಲಿ 2024ರ ಏಪ್ರಿಲ್‌ ನಿಂದ ನವೆಂಬರ್‌ ವರೆಗೆ 16 ತಾಯಿ ಮರಣ ಹಾಗೂ 196 ಶಿಶು ಮರಣ ಸಂಭವಿಸಿದ್ದು, ತಾಯಿ ಮತ್ತು ಶಿಶು ಮರಣದ ಪ್ರಮಾಣವನ್ನು ಶೂನ್ಯಕ್ಕಿಳಿಸಲು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಬೆಳಿಗ್ಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಅಂಕಿ ಅಂಶಗಳ ಪ್ರಕಾರ ಜಿಲ್ಲೆಯಲ್ಲಿ 2024ರ ಏಪ್ರಿಲ್‌ನಿಂದ ನವೆಂಬರ್‌ ವರೆಗೆ 19,583 ಹೆರಿಗೆ ಪ್ರಕರಣಗಳು ವರದಿಯಾಗಿದ್ದು, ಈ ಪೈಕಿ 16 ತಾಯಿ ಮರಣ ಹಾಗೂ 196 ಶಿಶು ಮರಣ ಸಂಭವಿಸಿವೆ. ತಾಯಿ ಮತ್ತು ಶಿಶು ಮರಣಗಳ ಪ್ರಮಾಣವನ್ನು ಶೂನ್ಯಕ್ಕೆ ತರುವಲ್ಲಿ ಅಧಿಕಾರಿಗಳು ಶ್ರಮಿಸಬೇಕು ಎಂದರಲ್ಲದೆ, ಖಾಸಗಿ/ ಸರ್ಕಾರಿ ಆಸ್ಪತ್ರೆಗಳಲ್ಲಿ ಉದಾಸೀನ ಮಾಡದೆ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಬೇಕು. ತಾಯಿ ಮತ್ತು ಶಿಶು ಮರಣ ಸಂಭವಿಸಿದ ನಂತರ ಮರಣ ಪ್ರಮಾಣದ ಬಗ್ಗೆ ಚರ್ಚಿಸುವ ಬದಲು ಮರಣ ಪ್ರಮಾಣವನ್ನು ಶೂನ್ಯಕ್ಕೆ ತರುವಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಲಹೆಗಳನ್ನು ನೀಡಬೇಕೆಂದು ಅಧಿಕಾರಿಗಳಿಗೆ ನಿರ್ದೇಶಿಸಿದರು.

    ಜಿಲ್ಲೆಯಲ್ಲಿ ಸಹಜ ಹೆರಿಗೆಗೆ ಆದ್ಯತೆ ನೀಡಬೇಕು. ಸಹಜ ಹೆರಿಗೆ ಸಾಧ್ಯವಾಗದಿದ್ದ ಸಂದರ್ಭದಲ್ಲಿ ಮಾತ್ರ ಸಿ–ಸೆಕ್ಷನ್(ಸಿಜೇರಿಯನ್) ಹೆರಿಗೆ ಮಾಡಬೇಕು. ಹೆರಿಗೆ ಮಾಡುವ ವೈದ್ಯರು ಹಾಗೂ ಹೆರಿಗೆಗೆ ಸಹಕರಿಸುವ ಶುಶ್ರೂಷಕರಿಗೆ ನೈಪುಣ್ಯತಾ ತರಬೇತಿ ನೀಡಬೇಕು ಎಂದು ಸೂಚನೆ ನೀಡಿದರು.

    ವೈದ್ಯ ವೃತ್ತಿಯನ್ನೇ ಆಯ್ಕೆ ಮಾಡಿಕೊಂಡು ಸೇವೆ ಸಲ್ಲಿಸುತ್ತಿರುವ ವೈದ್ಯರು ಮಾನವೀಯತೆಯಿಂದ ರೋಗಿಗಳಿಗೆ ಚಿಕಿತ್ಸೆ ನೀಡಬೇಕು. ಇನ್ನಾವುದೇ ಕ್ಷೇತ್ರದಲ್ಲಿ ಇಂತಹ ಅಮೂಲ್ಯ ಸೇವೆಗೆ ಅವಕಾಶವಿರುವುದಿಲ್ಲ. ವೈದ್ಯರು ರೋಗಿಗಳ ಸೇವೆಗಾಗಿಯೇ ಸಮಯವನ್ನು ಮುಡುಪಾಗಿಡಬೇಕು ಎಂದು ಸಲಹೆ ನೀಡಿದರು.

    ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಚಂದ್ರಶೇಖರ್ ಮಾತನಾಡಿ, ಮರಣ ಹೊಂದಿದ 16 ತಾಯಂದಿರ ಪೈಕಿ ಮನೆಯಲ್ಲಿ 1, ಖಾಸಗಿ ಆಸ್ಪತ್ರೆಯಲ್ಲಿ 8, ಸರ್ಕಾರಿ ಆಸ್ಪತ್ರೆಯಲ್ಲಿ 3 ಹಾಗೂ ಮಾರ್ಗ ಮಧ್ಯೆ 4 ಪ್ರಕರಣಗಳು ವರದಿಯಾಗಿವೆ. ಅದೇ ರೀತಿ ಆಸ್ಪತ್ರೆಯಲ್ಲಿ 127 ಹಾಗೂ ಮನೆಯಲ್ಲಿ 69 ಸೇರಿ ಒಟ್ಟು 196 ಶಿಶುಗಳ ಮರಣ ಸಂಭವಿಸಿರುವ ಬಗ್ಗೆ ವರದಿಯಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

    ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಅಸ್ಗರ್ ಬೇಗ್ ಸಭೆಗೆ ಮಾಹಿತಿ ನೀಡುತ್ತಾ, ಕಳೆದ ಏಪ್ರಿಲ್ ಮಾಹೆಯಿಂದ ನವೆಂಬರ್‌ವರೆಗೆ ಹೃದಯ ಸಂಬಂಧಿತ, ಅಧಿಕ ರಕ್ತದೊತ್ತಡ, ಅಧಿಕ ರಕ್ತಸ್ರಾವ, ಉಸಿರಾಟದ ತೊಂದರೆ, ಅವಧಿ ಪೂರ್ವ ಹೆರಿಗೆ, ಡಯೇರಿಯಾ, ಆಸ್ಫಿಕ್ಸಿಯಾ, ಕಡಿಮೆ ತೂಕದ ಜನನ, ನಿಮೋನಿಯಾ, ಸೆಪ್ಸಿಸ್ ಸೇರಿದಂತೆ ಮತ್ತಿತರ ರೋಗಗಳಿಂದ ತಾಯಿ ಮತ್ತು ಶಿಶು ಮರಣಗಳು ಸಂಭವಿಸಿವೆ. ತಾಯಿ ಮತ್ತು ಶಿಶು ಮರಣ ಪ್ರಮಾಣವನ್ನು ತಗ್ಗಿಸುವಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

    ಸಭೆಯಲ್ಲಿ ವಿವಿಧ ವೈದ್ಯಕೀಯ ಮಹಾವಿದ್ಯಾಲಯದ ವೈದ್ಯಾಧಿಕಾರಿಗಳು ಹಾಗೂ ಸ್ತ್ರೀರೋಗ ತಜ್ಞರು, ಆರ್‌ ಸಿಹೆಚ್ ಅಧಿಕಾರಿ ಡಾ.ಸಿ.ಆರ್. ಮೋಹನ್, ಕುಟುಂಬ ಕಲ್ಯಾಣಾಧಿಕಾರಿ ಡಾ.ರೇಖಾ, ಡಾ.ಮೋಹನ್ ದಾಸ್, ಡಾ.ಕೇಶವ್ ರಾಜ್, ವಿವಿಧ ತಾಲ್ಲೂಕುಗಳ ತಾಲ್ಲೂಕು ಆರೋಗ್ಯಾಧಿಕಾರಿಗಳು ಸೇರಿದಂತೆ ಮತ್ತಿತರರು ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಕೇಂದ್ರ ಶಿಕ್ಷಣ ಸಚಿವರ ರಾಜಿನಾಮೆ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ ದ್ರೋಹ ಬಗೆದ ಸರ್ಕಾರ!

    July 27, 2026

    ತುಮಕೂರು: ನಡುರಸ್ತೆಯಲ್ಲೇ ರೌಡಿಶೀಟರ್‌ ಮಲ್ಲ ಬರ್ಬರ ಹತ್ಯೆ!

    July 27, 2026

    ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌

    July 26, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಮಕ್ಕಳು ದುಶ್ಚಟಗಳಿಂದ ದೂರವಿರಿ: ಅಬಕಾರಿ ಉಪ ಅಧೀಕ್ಷಕ ದೀಪಕ್ ಎಸ್. ಕರೆ

    July 28, 2026

    ಲಿಂಗದಹಳ್ಳಿಯಲ್ಲಿ ಮಾದಕ ದ್ರವ್ಯ ದುಷ್ಪರಿಣಾಮಗಳ ಜಾಗೃತಿ ಕಾರ್ಯಕ್ರಮ ಪಾವಗಡ: ಪಿಯುಸಿ ಹಂತವು ವಿದ್ಯಾರ್ಥಿಗಳ ಬದುಕಿನ ಅತ್ಯಂತ ಮಹತ್ವದ ಘಟ್ಟವಾಗಿದೆ. ಈ…

    ಸರಗೂರು: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅರ್ಥಪೂರ್ಣ ವಿಶ್ವ ಜನಸಂಖ್ಯಾ ದಿನಾಚರಣೆ

    July 28, 2026

    ಸರಗೂರು: ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ; ಸಂಘಟನೆ ಬಲವರ್ಧನೆಗೆ ಕರೆ

    July 28, 2026

    ಹಾದನೂರು ಸರ್ಕಾರಿ ಶಾಲೆಗೆ ‘ಗಿಫ್ಟ್ ಎ ಡ್ರೀಮ್ಸ್ ಫೌಂಡೇಷನ್’ ಆಸರೆ: ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ, ಸಮವಸ್ತ್ರ ವಿತರಣೆ

    July 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.