ಬೀದರ್: ನಾರಂಜಾ ಸಕ್ಕರೆ ಕಾರ್ಖಾನೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು, ಸಕ್ಕರೆ ಕಾರ್ಖಾನೆಯಲ್ಲಿ ಈವರೆಗೆ ಕಬ್ಬು ನುರಿಸಿರುವ , ಸಕ್ಕರೆ ದಾಸ್ತಾನಿನ ಬಗ್ಗೆ ಪರಿಶೀಲನೆ ನಡೆಸಿದರು.
ಕಬ್ಬಿನ ಇತರೆ ಉತ್ಪನ್ನಗಳ ಮೂಲಕ ಆದಾಯ ವೃದ್ಧಿ ಮಾಡಿಕೊಳ್ಳಲು ಸಕ್ಕರೆ ಕಾರ್ಖಾನೆಯವರಿಗೆ ಸಲಹೆ ನೀಡಿದರು. ಕಬ್ಬಿನ ಬಾಕಿ ಉಳಿದಿರುವ ಹಣ ಪಾವತಿಸಲು ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಸಕ್ಕರೆ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕರ, ಆಹಾರ ಇಲಾಖೆ ಉಪನಿರ್ದೇಶಕ ಹಾಗೂ ಬೀದರ ತಹಶೀಲ್ದಾರರು ಸೇರಿದಂತೆ ಇತರರು ಉಪಸ್ಥಿತರಿದ್ದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4