ಕೊರಟಗೆರೆ: ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಕೊರಟಗೆರೆ ಪಟ್ಟಣದ ಭೋವಿ ಕಾಲೋನಿ ವಾರ್ಡ್ ಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಡಿಸಿ ಶುಭ ಕಲ್ಯಾಣ್ ತಾಲ್ಲೂಕಿನ ಬುಕ್ಕಪಟ್ಟಣ ಹಾಗೂ ಕ್ಯಾಮೇನಹಳ್ಳಿ ಮೇವು ಬ್ಯಾಂಕಿಗೆ ಭೇಟಿ ನೀಡಿ ಮೇವು ತೆಗೆದುಕೊಳ್ಳುತ್ತಿರುವ ರೈತರ ಬಳಿ ಮಾಹಿತಿ ಪಡೆದರು.
ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಗತ್ಯವಿದ್ದರೆ ಕೆಲವು ಹೋಬಳಿಗಳಲ್ಲಿ ಮೇವು ಬ್ಯಾಂಕ್ ತೆರೆಯುವ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳು ಸಾಲ ಪಡೆದವರ ಮನೆ ಬಾಗಿಲಿಗೆ ತೆರಳಿ ಚಿತ್ರಹಿಂಸೆ ನೀಡುವಂತಿಲ್ಲ ಎಂದರು.
ಶುಭ ಕಲ್ಯಾಣ್ ತಾಲ್ಲೂಕಿನಲ್ಲಿ ಅನಧಿಕೃತ ಕೋಳಿ ಫಾರಂ ಇದ್ದಲ್ಲಿ ತೆರವಿಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ತಾಲೂಕಿಗೆ ಯಾವುದೇ ಅಧಿಕಾರಿಗಳಾಗಲಿ ರಾಜ್ಯ ಮಟ್ಟದ ರಾಜಕೀಯ ವ್ಯಕ್ತಿಗಳಾಗಲಿ ಭೇಟಿ ನೀಡಿದಾಗ, ಕೊರಟಗೆರೆ ತಾಲೂಕು ಪತ್ರಕರ್ತರಿಗೆ ಮಾಹಿತಿ ನೀಡುವುದಿಲ್ಲ ಎಂದು ವಾರ್ತಾ ಇಲಾಖೆ ಅಧಿಕಾರಿ ವಿರುದ್ಧ ತಾಲೂಕು ಪತ್ರಕರ್ತರಿಂದ ಜಿಲ್ಲಾಧಿಕಾರಿಗೆ ದೂರು ನೀಡಲಾಯಿತು. ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಇನ್ನು ಮುಂದೆ ತಾಲೂಕು ಪತ್ರಕರ್ತರಿಗೂ ಮಾಹಿತಿ ತಿಳಿಸಿ ಎಂದು ವಾರ್ತಾ ಇಲಾಖೆ ಅಧಿಕಾರಿಗಳಿಗೆ ಸ್ಥಳದಲ್ಲಿಯೇ ಸೂಚನೆ ನೀಡಿದರು.
ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ಮಧುಗಿರಿ ಉಪ ವಿಭಾಗಾಧಿಕಾರಿ ಗೊಟ್ಟೂರು ಶಿವಪ್ಪ, ತಾಲೂಕು ದಂಡಾಧಿಕಾರಿಗಳ ಮಂಜುನಾಥ್ ಕೆ, ಕಂದಾಯ ಇಲಾಖೆಯ ಬಸವರಾಜು, ಜಯ ಪ್ರಕಾಶ್, ಪಟ್ಟಣ ಪಂಚಾಯತಿ ಅಧಿಕಾರಿಗಳು ಹಾಜರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth


