ತುರುವೇಕೆರೆ: ಮಾ. 24 ರಂದು ಮಂಗಳವಾರ ಜಿಲ್ಲಾಧಿಕಾರಿಗಳು ತಾಲೂಕಿಗೆ ಆಗಮಿಸಲಿದ್ದಾರೆ ಎಂದು ತಹಶೀಲ್ದಾರ್ ಎಸ್.ಎ.ಕುಂಞಿ ಅಹಮದ್ ತಿಳಿಸಿದ್ದಾರೆ.
ಮಾ. 24 ರಂದು ಮಂಗಳವಾರ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ತಾಲೂಕಿನ ದಬ್ಬೇಘಟ್ಟ ಹೋಬಳಿಯ ಮಾವಿನಕೆರೆಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಆಗಮಿಸಿ, ಸಾರ್ವಜನಿಕರ ಕುಂದು ಕೊರತೆ ಆಲಿಸಲಿದ್ದಾರೆ ಅಂತಾ ಅವರು ತಿಳಿಸಿದರು.
ಅದೇ ದಿನ ಮಧ್ಯಾಹ್ನ 2.30 ರಿಂದ 5.30 ರವರೆಗೆ ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಜನ ಸಂಪರ್ಕ ಸಭೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಪಾಲ್ಗೊಳ್ಳಲಿದ್ದಾರೆ ಎಂದರು.
ಸದರಿ ಜನ ಸಂಪರ್ಕ ಸಭೆಯಲ್ಲಿ ಸಾರ್ವಜನಿಕರು ಯಾವುದೇ ಸಮಸ್ಯೆ ಅಥವಾ ಕುಂದು ಕೊರತೆಗಳಿದ್ದಲ್ಲಿ ಆಗಮಿಸಿ ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಲು ತಿಳಿಸಲಾಗಿದೆ. ಈ ಸದಾವಕಾಶವನ್ನು ತಾಲೂಕಿನ ಜನತೆ ಸದುಪಯೋಗಪಡಿಸಿಕೊಳ್ಳಬೇಕೆಂದು ಅವರು ವಿನಂತಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


