nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅರಕಲಗೂಡು ಬಳಿ ಆಕಸ್ಮಿಕ ಬೆಂಕಿ: ಸುಟ್ಟು ಕರಕಲಾದ ತಂಬಾಕು ಬ್ಯಾರಲ್ ಮನೆ

    September 4, 2026

    ಹೊಳೆನರಸೀಪುರ :  ಶಾಲಾ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಸನ್ಮಾನ

    September 3, 2026

    ಶ್ರವಣೂರು: ರೈಲಿಗೆ ಸಿಲುಕಿ ವ್ಯಕ್ತಿ ದಾರುಣ ಸಾವು

    September 3, 2026
    Facebook Twitter Instagram
    ಟ್ರೆಂಡಿಂಗ್
    • ಅರಕಲಗೂಡು ಬಳಿ ಆಕಸ್ಮಿಕ ಬೆಂಕಿ: ಸುಟ್ಟು ಕರಕಲಾದ ತಂಬಾಕು ಬ್ಯಾರಲ್ ಮನೆ
    • ಹೊಳೆನರಸೀಪುರ :  ಶಾಲಾ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಸನ್ಮಾನ
    • ಶ್ರವಣೂರು: ರೈಲಿಗೆ ಸಿಲುಕಿ ವ್ಯಕ್ತಿ ದಾರುಣ ಸಾವು
    • ಸರಗೂರು: ಶ್ರೀ ವಿನಾಯಕ ಗೂಡ್ಸ್ ವಾಹನ ಚಾಲಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ
    • ಗ್ರಾಮೀಣ ಭಾಗದ ಜನರಿಗೆ ಸ್ವಾವಲಂಬಿ ಬದುಕು ಕಟ್ಟುಕೊಳ್ಳಿ: ಜಿಪಂ ಸಿಇಒ ಗಿತ್ತೆ ಮಾಧವ್ ವಿಠ್ಠಲರಾವ್ ಕರೆ
    • ಜಾನಸನ್ ಘೋಡೆ ಅವರಿಗೆ ಶ್ರೀಶೈಲಂ ಅಕ್ಕಮಹಾದೇವಿ ಚೈತನ್ಯ ಪೀಠದಲ್ಲಿ ಸನ್ಮಾನ
    • ಕರ್ನಾಟಕ ಹೈಕೋರ್ಟ್ ಕಲಾಪದಲ್ಲಿ ಹೊಸ ಮೈಲಿಗಲ್ಲು: ಒಂದೇ ದಿನ ಬರೋಬ್ಬರಿ 555 ಪ್ರಕರಣಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ
    • ಬಿ.ಸಿ.ನಾಗೇಶ್ ಕುಟುಂಬಕ್ಕೆ ಬಿಜೆಪಿ ಮಾನ್ಯತೆ ನೀಡಲಿ: ನುಡಿನಮನದಲ್ಲಿ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಸಲಹೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೊರಾರ್ಜಿ ವಸತಿ ಶಾಲೆಯಲ್ಲಿ ಸೌಲಭ್ಯಗಳ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಶುಭಕಲ್ಯಾಣ್
    ಗುಬ್ಬಿ July 20, 2026

    ಮೊರಾರ್ಜಿ ವಸತಿ ಶಾಲೆಯಲ್ಲಿ ಸೌಲಭ್ಯಗಳ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಶುಭಕಲ್ಯಾಣ್

    By adminJuly 20, 2026No Comments2 Mins Read
    shubha kalyan.jpg

    ಗುಬ್ಬಿ: ತಾಲೂಕಿನ ಹಾಗಲವಾಡಿ ಹೋಬಳಿ ವ್ಯಾಪ್ತಿಯ ಅಂಕಸಂದ್ರ ಗ್ರಾಮ ಪಂಚಾಯಿತಿಯ ಹೂವಿನಕಟ್ಟೆ ಗ್ರಾಮದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಜಿಲ್ಲಾಧಿಕಾರಿ ಶುಭಕಲ್ಯಾಣ್ ಅವರು ಭೇಟಿ ನೀಡಿ ಶಾಲೆ ಹಾಗೂ ವಸತಿ ನಿಲಯದ ವಿವಿಧ ಸೌಲಭ್ಯಗಳನ್ನು ಪರಿಶೀಲಿಸಿದರು. ವಿದ್ಯಾರ್ಥಿಗಳಿಗೆ ಒದಗಿಸಲಾಗುತ್ತಿರುವ ಮೂಲಭೂತ ಸೌಲಭ್ಯಗಳು, ವಸತಿ ನಿಲಯದ ನಿರ್ವಹಣೆ ಹಾಗೂ ಶೈಕ್ಷಣಿಕ ವಾತಾವರಣದ ಕುರಿತು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.

    ಭೇಟಿಯ ವೇಳೆ ವಸತಿ ನಿಲಯದ ಅಡುಗೆಮನೆ, ಊಟದ ವ್ಯವಸ್ಥೆ, ಆಹಾರದ ಗುಣಮಟ್ಟ, ಸ್ವಚ್ಛತೆ ಹಾಗೂ ಆರೋಗ್ಯಕರ ವಾತಾವರಣವನ್ನು ಜಿಲ್ಲಾಧಿಕಾರಿಯವರು ಪರಿಶೀಲಿಸಿದರು. ವಿದ್ಯಾರ್ಥಿಗಳ ಹಾಜರಾತಿ ವಿದ್ಯಾರ್ಥಿಗಳಿಗೆ ಪೌಷ್ಟಿಕ ಮತ್ತು ಗುಣಮುಟ್ಟದ ಆಹಾರ ಒದಗಿಸುವುದರೊಂದಿಗೆ ವಸತಿ ನಿಲಯದ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

    ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕುಡಿಯುವ ನೀರಿನ ತೀವ್ರ ಸಮಸ್ಯೆ ಇರುವ ಕುರಿತು ಅಧಿಕಾರಿಗಳು ಗಮನ ಸೆಳೆದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಯವರು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಹಾಗೂ ಶಾಲಾ ಆಡಳಿತದೊಂದಿಗೆ ಸ್ಥಳದಲ್ಲಿಯೇ ಚರ್ಚಿಸಿದರು. ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಹೊಸ ಕೊಳವೆಬಾವಿ ಕೊರೆಯುವ ಕಾಮಗಾರಿ ಕೈಗೊಳ್ಳಲಾಗುತ್ತಿದ್ದು, ಸುಮಾರು 1,600 ಅಡಿ ಆಳದವರೆಗೆ ಕೊರೆಸಿದರೂ ನೀರು ಲಭ್ಯವಾಗಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

    ಈ ಹಿನ್ನೆಲೆಯಲ್ಲಿ ಪರ್ಯಾಯ ವ್ಯವಸ್ಥೆಗಳ ಕುರಿತು ಸಮಗ್ರ ಪರಿಶೀಲನೆ ನಡೆಸಿ ವಿದ್ಯಾರ್ಥಿಗಳಿಗೆ ನಿರಂತರ ಕುಡಿಯುವ ನೀರಿನ ಪೂರೈಕೆ ಖಚಿತಪಡಿಸಬೇಕೆಂದು ಜಿಲ್ಲಾಧಿಕಾರಿಯವರು ಸೂಚಿಸಿದರು. ಇದೇ ಸಂದರ್ಭದಲ್ಲಿ ಶಾಲೆಯ ಆವರಣದಲ್ಲಿರುವ ವಾಲಿಬಾಲ್ ಕ್ರೀಡಾಂಗಣ ಸೇರಿದಂತೆ ಕ್ರೀಡಾ ಸೌಲಭ್ಯಗಳನ್ನು ವೀಕ್ಷಿಸಿ ವಿದ್ಯಾರ್ಥಿಗಳ ದೈಹಿಕ ಹಾಗೂ ಕ್ರೀಡಾ ಚಟುವಟಿಕೆಗಳಿಗೆ ಅಗತ್ಯ ಸೌಲಭ್ಯಗಳನ್ನು ಸಮರ್ಪಕವಾಗಿ ನಿರ್ವಹಿಸುವಂತೆ ತಿಳಿಸಿದರು. ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಕ್ರೀಡೆಗಳ ಮಹತ್ವವನ್ನು ಒತ್ತಿ ಹೇಳಿದ ಅವರು, ಕ್ರೀಡಾ ಸೌಲಭ್ಯಗಳ ನಿರ್ವಹಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ, ತಹಶೀಲ್ದಾರ್, ಸಮಾಜ ಕಲ್ಯಾಣ ಇಲಾಖೆ ಹಾಗೂ ವಸತಿ ಶಾಲೆಯ ಅಧಿಕಾರಿಗಳು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ‘ಗಾಡ್ ಫಾದರ್ ಇಲ್ಲದ್ದಕ್ಕೆ ಸಚಿವ ಸ್ಥಾನ ತಪ್ಪಿದೆ’: ಕೆಎಸ್‌ ಆರ್‌ ಟಿಸಿ ಅಧ್ಯಕ್ಷ ಸ್ಥಾನಕ್ಕೆ ಗುಬ್ಬಿ ಶಾಸಕ ಎಸ್‌.ಆರ್. ಶ್ರೀನಿವಾಸ್ ರಾಜೀನಾಮೆ ಘೋಷಣೆ

    August 4, 2026

    ಮಾದಕ ವ್ಯಸನಗಳಿಗೆ ಒಳಗಾದರೆ ನಿಮ್ಮ ಇಡೀ ಜೀವನವೇ ನಾಶವಾಗುತ್ತದೆ: ಜನಜಾಗೃತಿ ವೇದಿಕೆ ಸದಸ್ಯ ಶಿವಕುಮಾರ್

    July 14, 2026

    ಗುಬ್ಬಿ: ಜು.13ರಂದು ಎಸ್ ಸಿ–ಎಸ್ ಟಿ ಕುಂದುಕೊರತೆ ಸಭೆ

    July 10, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಅರಕಲಗೂಡು ಬಳಿ ಆಕಸ್ಮಿಕ ಬೆಂಕಿ: ಸುಟ್ಟು ಕರಕಲಾದ ತಂಬಾಕು ಬ್ಯಾರಲ್ ಮನೆ

    September 4, 2026

    ಅರಕಲಗೂಡು: ತಾಲ್ಲೂಕಿನ ಕೊಣನೂರು ಹೋಬಳಿಯ ಕಡುವಿನಹೊಸಹಳ್ಳಿ ಗ್ರಾಮದಲ್ಲಿ ಆಕಸ್ಮಿಕ ಅಗ್ನಿ ದುರಂತವೊಂದರಲ್ಲಿ ರೈತರಿಗೆ ಸೇರಿದ ತಂಬಾಕು ಬ್ಯಾರಲ್ ಮನೆ ಸಂಪೂರ್ಣವಾಗಿ…

    ಹೊಳೆನರಸೀಪುರ :  ಶಾಲಾ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಸನ್ಮಾನ

    September 3, 2026

    ಶ್ರವಣೂರು: ರೈಲಿಗೆ ಸಿಲುಕಿ ವ್ಯಕ್ತಿ ದಾರುಣ ಸಾವು

    September 3, 2026

    ಸರಗೂರು: ಶ್ರೀ ವಿನಾಯಕ ಗೂಡ್ಸ್ ವಾಹನ ಚಾಲಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

    September 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.