nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಾಡಪ್ರಭು ಕೆಂಪೇಗೌಡರದು ಜಾತ್ಯತೀತ ಆಡಳಿತ: ಶಾಸಕ ಎಂ.ಟಿ.ಕೃಷ್ಣಪ್ಪ

    June 29, 2026

    ಸಾರ್ವಜನಿಕ ದೂರು ಅರ್ಜಿಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡದೆ ಕರ್ತವ್ಯಲೋಪ | ಹೆಗ್ಗರೆ ಗ್ರಾ.ಪಂ. ಪಿಡಿಒ ಅಮಾನತು

    June 29, 2026

    ತುಮಕೂರು: ಜಿಲ್ಲಾ ಪತ್ರಕರ್ತರ ಸಂಘದಿಂದ ಶ್ರವಣ ತಪಾಸಣಾ ಶಿಬಿರ

    June 29, 2026
    Facebook Twitter Instagram
    ಟ್ರೆಂಡಿಂಗ್
    • ನಾಡಪ್ರಭು ಕೆಂಪೇಗೌಡರದು ಜಾತ್ಯತೀತ ಆಡಳಿತ: ಶಾಸಕ ಎಂ.ಟಿ.ಕೃಷ್ಣಪ್ಪ
    • ಸಾರ್ವಜನಿಕ ದೂರು ಅರ್ಜಿಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡದೆ ಕರ್ತವ್ಯಲೋಪ | ಹೆಗ್ಗರೆ ಗ್ರಾ.ಪಂ. ಪಿಡಿಒ ಅಮಾನತು
    • ತುಮಕೂರು: ಜಿಲ್ಲಾ ಪತ್ರಕರ್ತರ ಸಂಘದಿಂದ ಶ್ರವಣ ತಪಾಸಣಾ ಶಿಬಿರ
    • ಕೊರಟಗೆರೆ: 10,016 ಮಕ್ಕಳಿಗೆ ಪೋಲಿಯೋ ಲಸಿಕಾ ಗುರಿ: ಡಾ.ಜ್ಯೋತ್ಸ್ನಾ ರೆಡ್ಡಿ ಕರೆ
    • ಜುಲೈ 3ರಂದು ‘ದಲಿತ ಜನಾಗ್ರಹ ಸಮಾವೇಶ’: ಸರಗೂರು ಪ್ರವಾಸಿ ಮಂದಿರದಲ್ಲಿ ಪೋಸ್ಟರ್ ಬಿಡುಗಡೆ
    • ಮಧುಗಿರಿ: ಸಿದ್ಧಾರ್ಥ ವಸತಿ ಪ್ರೌಢಶಾಲೆಯಲ್ಲಿ 2006ರ ಬ್ಯಾಚ್ ಹಳೆಯ ವಿದ್ಯಾರ್ಥಿಗಳಿಂದ ಉಚಿತ ಸಮವಸ್ತ್ರ ವಿತರಣೆ
    • SIR: ಅರ್ಹ ನಾಗರಿಕರ ಮತದಾನದ ಹಕ್ಕು ಕಸಿದುಕೊಳ್ಳುವ ಅಪಾಯ: ಹೆಚ್.ವಿ. ವಾಸು ಆತಂಕ
    • ರೈತರು ಭೂಮಿ ಹೊಂದುವುದಷ್ಟೇ ಅಲ್ಲ, ಕಾನೂನು ಅರಿವು ಬೆಳೆಸಿಕೊಳ್ಳುವುದು ಮುಖ್ಯ: ನಿವೃತ್ತ ಕೆಎಎಸ್‌ ಅಧಿಕಾರಿ ಕೆ.ಎನ್.ಲಿಂಗಪ್ಪ ಪ್ರತಿಪಾದನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಿರಿಧಾನ್ಯ ನಡಿಗೆಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಚಾಲನೆ
    ತುಮಕೂರು January 5, 2025

    ಸಿರಿಧಾನ್ಯ ನಡಿಗೆಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಚಾಲನೆ

    By adminJanuary 5, 2025No Comments2 Mins Read
    siri dhanya

    Provided by
    Provided by

    ತುಮಕೂರು:  ನಗರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕೃಷಿ ಇಲಾಖೆ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಸಿರಿಧಾನ್ಯ ಹಬ್ಬ ಹಾಗೂ ಸಾವಯವ ಮೇಳ–2025ರ ಅಂಗವಾಗಿ ಶನಿವಾರ ಹಮ್ಮಿಕೊಂಡಿದ್ದ ‘ಸಿರಿಧಾನ್ಯ ನಡಿಗೆ’ಗೆ ಜಿಲ್ಲಾಧಿಕಾರಿ ಶುಭಕಲ್ಯಾಣ್ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.

    ತುಮಕೂರು ವಿಶ್ವವಿದ್ಯಾನಿಲಯದ ಮುಂಭಾಗದಲ್ಲಿ ಸಿರಿಧಾನ್ಯ ನಡಿಗೆಗೆ ಚಾಲನೆ ನೀಡಿದ ನಂತರ ಮಾತನಾಡಿದ ಜಿಲ್ಲಾಧಿಕಾರಿಗಳು, ದೇಶದಲ್ಲಿ ಹಸಿರು ಕ್ರಾಂತಿ ನಂತರ ಸಿರಿಧಾನ್ಯ ಬಳಕೆ ಮತ್ತು ಬೆಳೆಯುವುದು ಕಡಿಮೆಯಾಗಿದೆ. ನಮ್ಮ ಹಿರಿಯರು ಹೆಚ್ಚು ಸಿರಿಧಾನ್ಯವನ್ನು ಬಳಕೆ ಮಾಡುತ್ತಿದ್ದುದರಿಂದ ಉತ್ತಮ ಆರೋಗ್ಯವನ್ನು ಹೊಂದಿದ್ದರು. ಸಿರಿಧಾನ್ಯದಲ್ಲಿ ಅಧಿಕ ನಾರಿನಂಶ ಇರುವುದರಿಂದ ಆರೋಗ್ಯದಾಯಕ. ಆರೋಗ್ಯದ ಹಿತದೃಷ್ಟಿಯಿಂದ ಸಿರಿಧಾನ್ಯವನ್ನು ಹೆಚ್ಚು ಹೆಚ್ಚು ಬಳಸಿ ಆರೋಗ್ಯವಂತರಾಗಬೇಕು ಎಂದು ಅವರು ಹೇಳಿದರು.

    ನೀರಿನ ಸಮಸ್ಯೆ ಇರುವ ಪ್ರದೇಶದಲ್ಲಿಯೂ ಸಿರಿಧಾನ್ಯವನ್ನು ಬೆಳೆಯಬಹುದು. ಹಾಗಾಗಿ ರೈತರು ಮಳೆಯಾಶ್ರಿತ ಪ್ರದೇಶದಲ್ಲಿ ಸಿರಿಧಾನ್ಯವನ್ನು ಬೆಳೆಯಲು ಮುಂದಾಗಬೇಕು ಎಂದು ಅವರು ಕರೆ ನೀಡಿದರು.

    ವಿಶ್ವದಾದ್ಯಂತ ಸಿರಿಧಾನ್ಯ ಬಳಕೆ ಬಗ್ಗೆ ಅರಿವು ಮೂಡಿಸುವ ಕಾರ್ಯ ನಡೆಯುತ್ತಿದೆ. ಸಿರಿಧಾನ್ಯ ಬೆಳೆಯಲು ಪ್ರೋತ್ಸಾಹಿಸುವ ಸಲುವಾಗಿ ರಾಜ್ಯದಲ್ಲಿ ಒಂದು ಹೆಕ್ಟೇರ್ ಪ್ರದೇಶದಲ್ಲಿ ಸಿರಿಧಾನ್ಯ ಬೆಳೆಯುವ ರೈತರಿಗೆ 10,000 ರೂ.ಗಳ ಪ್ರೋತ್ಸಾಹ ಧನ ನೀಡಲಾಗುವುದು ಎಂದರು.


    Provided by
    Provided by

    ಸಿರಿಧಾನ್ಯ ಬೆಳೆಯುವ ಬಗ್ಗೆ ರೈತರಲ್ಲಿ ಹೆಚ್ಚು ಅರಿವು ಮೂಡಿಸುವ ಕೆಲಸವಾಗಬೇಕು. ಜಿಲ್ಲೆಯಲ್ಲಿ 2,500 ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯುತ್ತಿರುವ ಸಿರಿಧಾನ್ಯ ಪ್ರದೇಶವನ್ನು 10,000 ಹೆಕ್ಟೇರ್‌ಗೆ ಹೆಚ್ಚಿಸಬೇಕು. ಈ ನಿಟ್ಟಿನಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ಹೋಬಳಿ, ತಾಲ್ಲೂಕು ಮಟ್ಟದಲ್ಲಿ ಕೆಲಸ ಮಾಡುವ ಅಗತ್ಯವಿದೆ ಎಂದು ಸೂಚನೆ ನೀಡಿದರು.

    ಸಿರಿಧಾನ್ಯ ಬಳಕೆ ಹೆಚ್ಚಾದಾಗ ಮಾತ್ರ ಬೇಡಿಕೆ ಹೆಚ್ಚಾಗುತ್ತದೆ. ವಿದೇಶ ಸೇರಿದಂತೆ ನಗರ ಪ್ರದೇಶಗಳಲ್ಲಿ ಸಿರಿಧಾನ್ಯ ಬಳಕೆಗೆ ಬೇಡಿಕೆ ಹೆಚ್ಚಾಗುತ್ತಿದೆ ಎಂದು ಅವರು ಹೇಳಿದರು.

    ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ: ರಮೇಶ್ ಮಾತನಾಡಿ, 2024–25ನೇ ಸಾಲಿನಲ್ಲಿ ಸಿರಿಧಾನ್ಯ ಬೆಳೆಯುವ ರೈತರು ಮತ್ತು ಗ್ರಾಹಕರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ವಾಕ್‌ಥಾನ್ ಹಮ್ಮಿಕೊಳ್ಳಲಾಗಿದೆ. ಸಿರಿಧಾನ್ಯಗಳ ಬಗ್ಗೆ ಅರಿವು ಮೂಡಿಸಲು ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಜನವರಿ 13 ಮತ್ತು 14ರಂದು ಜಿಲ್ಲಾ ಮಟ್ಟದ ಸಿರಿಧಾನ್ಯ ಮೇಳವನ್ನು ಏರ್ಪಡಿಸಲಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಮೇಳದ ಪ್ರಯೋಜನ ಪಡೆಯಬೇಕೆಂದು ಮನವಿ ಮಾಡಿದರು.

    ರೈತರಿಗೆ ಉತ್ತಮ ಬೆಲೆ ದೊರಕಿಸಿ ಕೊಡುವ ಸಲುವಾಗಿ ಜನವರಿ 23, 24, 25ರಂದು ಬೆಂಗಳೂರಿಲ್ಲಿ ಅಂತಾರಾಷ್ಟ್ರೀಯ ಸಿರಿಧಾನ್ಯ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಅಂತಾರಾಷ್ಟ್ರೀಯ ಸಿರಿಧಾನ್ಯ ಮೇಳದ ಪೂರ್ವಭಾವಿಯಾಗಿ ಜಿಲ್ಲಾ ಕೇಂದ್ರದಲ್ಲಿ ಸಿರಿಧಾನ್ಯ ನಡಿಗೆ, ಸಿರಿಧಾನ್ಯ ಮೇಳವನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು.

    ತುಮಕೂರು ವಿವಿ ಮುಂಭಾಗದಿಂದ ಆರಂಭವಾದ ಸಿರಿಧಾನ್ಯ ನಡಿಗೆಯು ಬಿ.ಹೆಚ್.ರಸ್ತೆ ಮೂಲಕ ಎಸ್.ಐ.ಟಿ., ಗಂಗೋತ್ರಿ ನಗರ, ಎಸ್.ಎಸ್.ಪುರಂ ಮಾರ್ಗವಾಗಿ ಸರ್ಕಾರಿ ಜೂನಿಯರ್ ಕಾಲೇಜು ಮೈದಾನ ತಲುಪಿತು.

    ಇದೇ ವೇಳೆ ಸಿರಿಧಾನ್ಯದಿಂದ ಸಿದ್ದಪಡಿಸಿದ್ದ ಆಹಾರವನ್ನು ಸಿರಿಧಾನ್ಯ ನಡಿಗೆಯಲ್ಲಿ ಪಾಲ್ಗೊಂಡಿದ್ದವರಿಗೆ ಉಣಬಡಿಸಲಾಯಿತು.

    ಈ ಸಂದರ್ಭದಲ್ಲಿ ಗೃಹ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಡಾ. ಕೆ. ನಾಗಣ್ಣ, ಆಹಾರ ಇಲಾಖೆ ಜಂಟಿ ನಿರ್ದೇಶಕ ಮಂಟೆಸ್ವಾಮಿ, ನಿರ್ಮಿತಿ ಕೇಂದ್ರದ ರಾಜಶೇಖರ್, ಉಪ ಕೃಷಿ ನಿರ್ದೇಶಕರಾದ ಡಾ. ಹೆಚ್.ಎಲ್. ಚಂದ್ರಕುಮಾರ್ ಹಾಗೂ ಹುಲಿರಾಜ್, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಚೈತನ್ಯ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತ್ಯಾಗರಾಜು, ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ.ಗಿರೀಶ್‌ರೆಡ್ಡಿ, ಮೀನುಗಾರಿಕೆ ಇಲಾಖೆ ಉಪನಿರ್ದೇಶಕ ಶಿವಶಂಕರ್, ಬಿಸಿಎಂ ಇಲಾಖೆಯ ರಂಗಸ್ವಾಮಿ, ರವಿಕುಮಾರ್, ಪ್ರದೀಪ್ ಸೇರಿದಂತೆ ಎಲ್ಲಾ ತಾಲ್ಲೂಕುಗಳ ಸಹಾಯಕ ಕೃಷಿ ನಿರ್ದೇಶಕರು ಹಾಗೂ ಶಾಲಾ–ಕಾಲೇಜಿನ ಮಕ್ಕಳು ಭಾಗಿಯಾಗಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಸಾರ್ವಜನಿಕ ದೂರು ಅರ್ಜಿಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡದೆ ಕರ್ತವ್ಯಲೋಪ | ಹೆಗ್ಗರೆ ಗ್ರಾ.ಪಂ. ಪಿಡಿಒ ಅಮಾನತು

    June 29, 2026

    ತುಮಕೂರು: ಜಿಲ್ಲಾ ಪತ್ರಕರ್ತರ ಸಂಘದಿಂದ ಶ್ರವಣ ತಪಾಸಣಾ ಶಿಬಿರ

    June 29, 2026

    ರೈತರು ಭೂಮಿ ಹೊಂದುವುದಷ್ಟೇ ಅಲ್ಲ, ಕಾನೂನು ಅರಿವು ಬೆಳೆಸಿಕೊಳ್ಳುವುದು ಮುಖ್ಯ: ನಿವೃತ್ತ ಕೆಎಎಸ್‌ ಅಧಿಕಾರಿ ಕೆ.ಎನ್.ಲಿಂಗಪ್ಪ ಪ್ರತಿಪಾದನೆ

    June 29, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುರುವೇಕೆರೆ

    ನಾಡಪ್ರಭು ಕೆಂಪೇಗೌಡರದು ಜಾತ್ಯತೀತ ಆಡಳಿತ: ಶಾಸಕ ಎಂ.ಟಿ.ಕೃಷ್ಣಪ್ಪ

    June 29, 2026

    ತುರುವೇಕೆರೆ: ನಾಡಪ್ರಭು ಕೆಂಪೇಗೌಡರು ಒಂದೇ ಜಾತಿಗೆ ಅಥವಾ ಸಮುದಾಯದ ಒಂದೇ ಸಮಾಜಕ್ಕೆ ಸೀಮಿತರಾಗದೆ ಜಾತ್ಯತೀತವಾಗಿ ಆಡಳಿತ ನಡೆಸಿದ್ದರು ಎಂದು ಶಾಸಕ…

    ಸಾರ್ವಜನಿಕ ದೂರು ಅರ್ಜಿಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡದೆ ಕರ್ತವ್ಯಲೋಪ | ಹೆಗ್ಗರೆ ಗ್ರಾ.ಪಂ. ಪಿಡಿಒ ಅಮಾನತು

    June 29, 2026

    ತುಮಕೂರು: ಜಿಲ್ಲಾ ಪತ್ರಕರ್ತರ ಸಂಘದಿಂದ ಶ್ರವಣ ತಪಾಸಣಾ ಶಿಬಿರ

    June 29, 2026

    ಕೊರಟಗೆರೆ: 10,016 ಮಕ್ಕಳಿಗೆ ಪೋಲಿಯೋ ಲಸಿಕಾ ಗುರಿ: ಡಾ.ಜ್ಯೋತ್ಸ್ನಾ ರೆಡ್ಡಿ ಕರೆ

    June 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.