ತುಮಕೂರು: ಜಿಲ್ಲಾ ಮೇದ(ಎಸ್.ಟಿ.) ಗಿರಿ ಜನಾಂಗ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಜನವರಿ 19ರಂದು ಬೆಳಿಗ್ಗೆ 11 ಗಂಟೆಗೆ ನಗರದ ಅಮಾನಿಕೆರೆ ಮುಖ್ಯರಸ್ತೆಯಲ್ಲಿರುವ ಕನ್ನಡ ಭವನದಲ್ಲಿ “ಮೇದ ಜನಾಂಗದ ತುಮಕೂರು ಜಿಲ್ಲಾ ಸಮಾವೇಶ, ಪ್ರತಿಭಾ ಪುರಸ್ಕಾರ, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರಿಗೆ ಸನ್ಮಾನ ಸಮಾರಂಭ ಹಾಗೂ ವಧು–ವರರ ಸಮಾವೇಶ” ವನ್ನು ಏರ್ಪಡಿಸಲಾಗಿದೆ.
ಚಿತ್ರದುರ್ಗ ಸೀಬಾರ ಮೇದರ ಗುರುಪೀಠ ಶ್ರೀ ಕೇತೇಶ್ವರ ಮಹಾಮಠದ ಶ್ರೀ ಇಮ್ಮಡಿ ಬಸವ ಮೇದರ ಕೇತೇಶ್ವರ ಮಹಾಸ್ವಾಮೀಜಿ ಅವರು ದಿವ್ಯ ಸಾನಿಧ್ಯ ವಹಿಸುವರು. ಮಠದ ಅಧ್ಯಕ್ಷರು ಹಾಗೂ ಲೋಕೋಪಯೋಗಿ ಇಲಾಖೆ ನಿವೃತ್ತ ಅಧೀಕ್ಷಕ ಅಭಿಯಂತರ ಸಿ.ಪಿ.ಪಾಟೀಲ್ ಘನ ಉಪಸ್ಥಿತಿಯಲ್ಲಿ ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ತುಮಕೂರು ಜಿಲ್ಲಾ ಮೇದ(ಎಸ್.ಟಿ.) ಗಿರಿ ಜನಾಂಗ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ ಚನ್ನಬಸವಯ್ಯ ಜಿ. ಅಧ್ಯಕ್ಷತೆ ವಹಿಸುವರು. ಸಚಿವರಾದ ಕೆ.ಎನ್.ರಾಜಣ್ಣ, ವಿ.ಸೋಮಣ್ಣ, ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಎಸ್.ಆರ್. ಶ್ರೀನಿವಾಸ್, ಡಾ.ರಂಗನಾಥ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೇರಿದಂತೆ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಕಾರ್ಯಕ್ರಮದಲ್ಲಿ ಮೇದ ಜನಾಂಗದವರಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಕೇಂದ್ರ ಸರ್ಕಾರದ ಕಾಫಿ ಬೋರ್ಡ್ ಆಯುಕ್ತ ಜಗದೀಶ್, ಬಿಜಾಪುರ ಮಹಾನಗರಪಾಲಿಕೆ ಉಪ ಮಹಾಪೌರರಾದ ಎಸ್. ದಿನೇಶ್ ಹಳ್ಳಿ, ವಿಶೇಷ ಭೂ ಸ್ವಾಧೀನ ಅಧಿಕಾರಿ ಧರ್ಮಪಾಲ್, ಹೊಸದುರ್ಗ ಪುರಸಭೆ ಅಧ್ಯಕ್ಷೆ ರಾಜೇಶ್ವರಿ ಆನಂದ್, ಕರ್ನಾಟಕ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಅಲೆಮಾರಿ ಅಭಿವೃದ್ಧಿ ನಿಗಮದ ಕೋ-ಆರ್ಡಿನೇಟರ್ ಸುನಿಲ್ ಕುಮಾರ್ ಸಿ., ಬೆಂಗಳೂರು ವಿಶ್ವವಿದ್ಯಾನಿಲಯದ ಅಸಿಸ್ಟೆಂಟ್ ಪ್ರೊಪೆಸರ್ ಡಾ.ಎಸ್. ಕುಂಬಿನರಸಯ್ಯ, ಹೊಸದುರ್ಗ ಪುರಸಭೆ ಸದಸ್ಯ ಶಂಕರಪ್ಪ, ಭದ್ರಾವತಿ ತಾಲ್ಲೂಕು ಕೂಡ್ಲಿಗೆರೆ ಗ್ರಾಮಪಂಚಾಯತಿ ಅಧ್ಯಕ್ಷೆ ಗೌರಮ್ಮ ಮಹಾದೇವ್, ಕುಣಿಗಲ್ ತಾಲ್ಲೂಕು ತಾವರೇಕೆರೆ ಗ್ರಾಮ ಪಂಚಾಯತಿ ಸದಸ್ಯೆ ಗೌರಮ್ಮ ಪುಟ್ಟಯ್ಯ, ಕಾಳೇನಹಳ್ಳಿ ಸೀತಕಲ್ಲು ಗ್ರಾಮ ಪಂಚಾಯತಿಯ ಸದಸ್ಯೆ ರಾಜಲಕ್ಷ್ಮೀ ಹಾಗೂ ಶಿರಾ ತಾಲ್ಲೂಕಿನ ಡಾ: ಕೀರ್ತನ ಇ. ಅವರನ್ನು ಸನ್ಮಾನಿಸಲಾಗುವುದು ಎಂದು ಜಿಲ್ಲಾ ಮೇದ(ಎಸ್.ಟಿ.) ಗಿರಿ ಜನಾಂಗ ಕ್ಷೇಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷ ದೊರೆರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx