ಗದಗ: ಗದಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿಗಳಾದ ರಮಣದೀಪ್ ಚೌಧರಿ ಅವರು ಬುಧವಾರ ಜಿಲ್ಲೆಯ ಲಕ್ಕುಂಡಿ ಗ್ರಾಮಕ್ಕೆ ಭೇಟಿ ನೀಡಿದರು.
ಅಲ್ಲಿ ಲಕ್ಕುಂಡಿಯ ಪಾರಂಪರಿಕ, ಗತಕಾಲದ,ಐತಿಹಾಸಿಕ ವೈಭವನ್ನು ಪುನರಸ್ಥಾಪಿಸುವ ಉದ್ದೇಶದಿಂದ ಲಕ್ಕುಂಡಿ ಗ್ರಾಮದಲ್ಲಿ ಸ್ಮಾರಕಗಳ ಸುಂದರ ಶಿಲ್ಪ ಕಾಲಕೃತಿಗಳ ಪ್ರಾಚ್ಯಾವಶೇಷಗಳ ಅನ್ವೇಷಣೆ ಕಾರ್ಯದಲ್ಲಿ ಸಂಗ್ರಹಣೆ ಮಾಡಲಾದ ಪ್ರಾಚ್ಯಾವಶೇಷಗಳನ್ನು ವೀಕ್ಷಣೆ ಮಾಡಿದರು.
ಪ್ರಾಚ್ಯಾವಶೇಷಗಳನ್ನು ಒಂದೆಡೆ ಕ್ರೂಢೀಕರಿಸಿ ಆ ಪ್ರದೇಶದ ಸ್ವಚ್ಛತೆಯನ್ನು ಕಾಪಾಡಿಕೊಳ್ಳಲು ಕ್ರಮ ವಹಿಸಬೇಕು.. ಲಕ್ಕುಂಡಿಯ ಪೂರ್ಣ ವೈಭವವನ್ನು ಮರಳಿ ತಂದು ಜಾಗತಿಕ ಮನ್ನಣೆ ತರುವ ಪ್ರಯತ್ನವಾಗಬೇಕೆಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಗಂಗಪ್ಪ, ಜಿ.ಪಂ. ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ತಹಶೀಲ್ದಾರರಾದ ಶ್ರೀನಿವಾಸಮೂರ್ತಿ ಕುಲಕರ್ಣಿ, ಲಕ್ಕುಂಡಿ ಪಾರಂಪರಿಕ ಅಭಿವೃದ್ಧಿ ಪ್ರಾಧಿಕಾರದ ಅಯುಕ್ತರಾದ ಡಾ. ಶರಣು ಗೋಗೇರಿ, ಲಕ್ಕುಂಡಿ ಪಾರಂಪರಿಕ ಪ್ರದೇಶದ ಅಭಿವೃದ್ಧಿ ಪ್ರಾಧಿಕಾರದ ರಾಜ್ಯ ಮಟ್ಟದ ಸಲಹಾ ಸಮಿತಿ ಸದಸ್ಯರಾದ ಸಿದ್ಧಲಿಂಗೇಶ್ವರ ಪಾಟೀಲ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರಾದ ಕೊಟ್ರೇಶ್ವರ ವಿಭೂತಿ, ಅ.ದ.ಕಟ್ಟಿಮನಿ ಮತ್ತಿತರರು ಇದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q