ತುಮಕೂರು: ತಾಲ್ಲೂಕು ಪಂಚಾಯತಿ ವ್ಯಾಪ್ತಿಯಲ್ಲಿ 2024–25ನೇ ಸಾಲಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಿರುವ 8 ಗ್ರಾಮ ಪಂಚಾಯಿತಿಗಳಿಗೆ ಜಿಲ್ಲಾ ಮಟ್ಟದ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.
ನಗರದ ಹೊರವಲಯದ ಸಿದ್ಧಾರ್ಥ ನಗರದಲ್ಲಿ ಜಿಲ್ಲಾ ಪಂಚಾಯತ್ ವತಿಯಿಂದ ಹಮ್ಮಿಕೊಂಡಿದ್ದ ಗ್ರಾಮ ಪಂಚಾಯಿತಿ, ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ, ಅಭಿನಂದನಾ ಸಮಾರಂಭದಲ್ಲಿ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ.ಪರಮೇಶ್ವರ ಅವರು ಪ್ರಶಸ್ತಿಯನ್ನು ನೀಡಿ ಗೌರವಿಸಿದರು.
ನರೇಗಾ ಯೋಜನೆಯಡಿ ಶಾಲಾ ಅಭಿವೃದ್ಧಿ ಕಾಮಗಾರಿಗಳ ಅನುಷ್ಟಾನಕ್ಕಾಗಿ ಮಲ್ಲಸಂದ್ರ ಗ್ರಾಮಪಂಚಾಯತಿ, ಅತ್ಯುತ್ತಮ ಆಡಳಿತ ನಿರ್ವಹಣೆಗಾಗಿ ಕೆಸರಮಡು, ಹಸಿರು ಗ್ರಾಮ ಅಭಿಯಾನಕ್ಕಾಗಿ ಸ್ವಾಂದೇನಹಳ್ಳಿ, ಪಾರಂಪರಿಕ ವೀರಗಲ್ಲು ಹಾಗೂ ಶಾಸನಗಳ ಸಂರಕ್ಷಣಾ ಕಾಮಗಾರಿಗಾಗಿ ಚಿಕ್ಕತೊಟ್ಲುಕೆರೆ, ಅತಿ ಹೆಚ್ಚು ತೆರಿಗೆ ಸಂಗ್ರಹಿಸಿ ಗಣನೀಯ ಸಾಧನೆಗಾಗಿ ಕೆಸ್ತೂರು, ಅತೀ ಹೆಚ್ಚು ಇ-ಸ್ವತ್ತು ಸೃಜನೆಗಾಗಿ ಹೊಳಕಲ್ಲು, ಅತ್ಯುತ್ತಮ ಸ್ವಚ್ಛ ಗ್ರಾ.ಪಂ ಅಭಿಯಾನಕ್ಕಾಗಿ ದೇವಲಾಪುರ ಹಾಗೂ ಸಂಜೀವಿನಿ ಎನ್ಆರ್ಎಲ್ಎಂ ಅತ್ಯುತ್ತಮ ಒಕ್ಕೂಟಕ್ಕಾಗಿ ಗೂಳೂರು ಶ್ರೀ ಮಹಾಗಣಪ ಸಂಜೀವಿನಿ ಗ್ರಾ.ಪಂ ಒಕ್ಕೂಟಕ್ಕೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ತಾಲ್ಲೂಕು ಪಂಚಾಯತಿ ವ್ಯಾಪ್ತಿ ಗ್ರಾಮ ಪಂಚಾಯತಿಗಳು ವಿವಿಧ ಕ್ಷೇತ್ರಗಳಲ್ಲಿ ಒಟ್ಟು 8 ಅತ್ಯುತ್ತಮ ಜಿಲ್ಲಾ ಮಟ್ಟದ ಪ್ರಶಸ್ತಿಗಳನ್ನು ಪಡೆದುಕೊಂಡಿರುವುದು ಸಂತಸವಾಗಿದೆ. ಪಂಚಾಯತಿಯಿAದ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸರ್ಕಾರಿ ಸೌಲಭ್ಯಗಳನ್ನು ತಲುಪಿಸುವ ಕಾರ್ಯವನ್ನು ಕೈಗೊಳ್ಳಲಾಗುತ್ತಿದೆ. ಅಭಿವೃದ್ಧಿ ಕಾರ್ಯಗಳಿಗೆ ಕೈ ಜೋಡಿಸಿದ ಎಲ್ಲ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗಕ್ಕೆ ತಾಲ್ಲೂಕು ಪಂಚಾಯತಿ ಕಾರ್ಯ ನಿರ್ವಾಹಕ ಅಧಿಕಾರಿ ಕೆ. ಹರ್ಷಕುಮಾರ್ ಅಭಿನಂದನೆ ತಿಳಿಸಿದ್ದಾರೆ.
ಛಾಯಾಚಿತ್ರ ವಿವರ:
ತುಮಕೂರಿನಲ್ಲಿ ಶನಿವಾರ ಜಿಲ್ಲಾ ಪಂಚಾಯಿತಿ ವತಿಯಿಂದ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಅವರು ಅತ್ಯುತ್ತಮ ಜಿಲ್ಲಾ ಮಟ್ಟದ ಪ್ರಶಸ್ತಿಯನ್ನು ವಿತರಿಸಿ ಗೌರವಿಸಿದರು. ಚಿತ್ರದಲ್ಲಿ ಶಾಸಕರಾದ ಬಿ.ಸುರೇಶ್ಗೌಡ, ವೆಂಕಟೇಶ್, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಕೆ.ಹರ್ಷಕುಮಾರ್, ಸಹಾಯಕ ನಿರ್ದೇಶಕರಾದ ಎಸ್.ಎಸ್.ಮಂಜುನಾಥ್ ಅವರನ್ನು ಕಾಣಬಹುದು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
————————————