ತುಮಕೂರು: ಕೇಂದ್ರದ ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ, ಸಂಸದ ಹಾಗೂ ಜಿಲ್ಲಾ ದಿಶಾ ಸಮಿತಿ ಅಧ್ಯಕ್ಷ ವಿ.ಸೋಮಣ್ಣ ಅವರ ಅಧ್ಯಕ್ಷತೆಯಲ್ಲಿ ಏಪ್ರಿಲ್ 8ರ ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ದಿಶಾ ಸಮಿತಿ ಸಭೆ ನಡೆಯಲಿದೆ.
ಸಂಸದರು ಸಭೆಯಲ್ಲಿ 2024-25ನೇ ಸಾಲಿನ ಮಾರ್ಚ್-2025ರ ಅಂತ್ಯದವರೆಗೆ ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ. ಜಿಲ್ಲಾ ಮಟ್ಟದ ಎಲ್ಲಾ ಇಲಾಖಾ ಮುಖ್ಯಸ್ಥರು ತಪ್ಪದೆ ಖುದ್ದಾಗಿ ಸಭೆಗೆ ಹಾಜರಾಗಬೇಕೆಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ದಿಶಾ ಸಮಿತಿ ಸದಸ್ಯ ಕಾರ್ಯದರ್ಶಿ ಜಿ.ಪ್ರಭು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4