ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಡಿಸೆಂಬರ್ 23ರ ಬೆಳಿಗ್ಗೆ 10 ಗಂಟೆಗೆ ನಗರದ ಬಿ.ಹೆಚ್.ರಸ್ತೆಯ ಶ್ರೀ ಸಿದ್ಧಗಂಗಾ ಪ್ರೌಢ ಶಾಲೆಯಲ್ಲಿ “ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸ್ಪರ್ಧೆ”ಯನ್ನು ಏರ್ಪಡಿಸಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಹೆಚ್.ಕೆ.ಮನಮೋಹನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ 5 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ವೈಯಕ್ತಿಕ ಮತ್ತು ಸಾಮೂಹಿಕ ವಿಭಾಗದಲ್ಲಿ ಸ್ಪರ್ಧೆಗಳು ನಡೆಯಲಿದ್ದು, ಜಿಲ್ಲೆಯ ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx