ಪಾವಗಡ: ಜಿಲ್ಲಾ ಪಂಚಾಯತ್, ತುಮಕೂರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಮಧುಗಿರಿ ಮತ್ತು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಇಲಾಖೆ, ಮಧುಗಿರಿ ರವರ ಸಂಯುಕ್ತ ಆಶ್ರಯದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಹಮ್ಮಿಕೊಳ್ಳಲಾಗಿತ್ತು.
ಇದರಲ್ಲಿ ಸರ್ಕಾರಿ ಪ್ರೌಢಶಾಲೆ ಅರಸೀಕೆರೆಯ ವಿಧ್ಯಾರ್ಥಿಗಳಾದ ಭರತ್ M ಮತ್ತು ಯೋಗೇಶ್ ನಾಯಕ ಗುಂಪು ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಹಾಗೆಯೇ ಶಿಕ್ಷಕರ ವಿಭಾಗದಲ್ಲಿ ಸರ್ಕಾರಿ ಪ್ರೌಢಶಾಲೆ, ಅರಸೀಕೆರೆಯ ವಿಜ್ಞಾನ ಶಿಕ್ಷಕರು ಮತ್ತು ಪ್ರಭಾರಿ ಮುಖ್ಯಶಿಕ್ಷಕರಾದ ರೇಣುಕರಾಜ್ ಜಿ.ಹೆಚ್.ರವರು ವಿಜ್ಞಾನ ಮಾದರಿ ವಸ್ತು ಪ್ರದರ್ಶನದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ವಿಜೇತರನ್ನು ಸರ್ಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕರು, ಸಿಬ್ಬಂದಿ ವರ್ಗ ಮತ್ತು ಎಸ್.ಡಿ.ಎಂ.ಸಿ. ಅಧ್ಯಕ್ಷರು, ಸರ್ವಸದಸ್ಯರು ಅಭಿನಂದಿಸಿದ್ದಾರೆ.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q