ಪಾವಗಡ: ಪಟ್ಟಣದ ತಾಲ್ಲೂಕು ಕ್ರೀಡಾಂಗಣದಲ್ಲಿ 2024–25 ನೇ ಸಾಲಿನ ತಾಲ್ಲೂಕು ಮಟ್ಟದ ಪ್ರೌಢಶಾಲೆಗಳ ಬಾಲಕರ ಫುಟ್ಬಾಲ್ ಪಂದ್ಯಾವಳಿಯಲ್ಲಿ ತಾಲ್ಲೂಕಿನ ವೈ.ಎನ್. ಹೊಸಕೋಟೆ ಗ್ರಾಮದ ಹೆಸರಾಂತ ವಾಸವಿ ವಿದ್ಯಾನಿಕೇತನ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ತಾಲ್ಲೂಕು ಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ.
ಈ ಸಾಧನೆಗೆ ವಾಸವಿ ವಿದ್ಯಾ ಸಂಸ್ಥೆಯ ಅಧ್ಯಕ್ಷ ಡಾ.ಪ್ರೇಮಯೋಗಿ, ಆಡಳಿತ ಮಂಡಳಿಯ ನಿರ್ದೇಶಕರು ಹಾಗೂ ಆಡಳಿತಾಧಿಕಾರಿಗಳಾದ ಶ್ರೀನಿವಾಸ್, ಪ್ರಾಂಶುಪಾಲ ಸತ್ಯನಾರಾಯಣ ರೆಡ್ಡಿ, ಶಾಲೆಯ ಮುಖ್ಯ ಶಿಕ್ಷಕರು ಹಾಗೂ ದೈಹಿಕ ಶಿಕ್ಷಕರಾದ ಶ್ರೀನಿವಾಸ್, ಸಹ ಶಿಕ್ಷಕರು, ಪೋಷಕರು ಸೇರಿ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q