ತುಮಕೂರು: ತೋಟಗಾರಿಕೆ ಇಲಾಖೆಯು 2024-25ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಜನವರಿ 27ರಂದು ಬೆಳಿಗ್ಗೆ 10 ಗಂಟೆಗೆ ನಗರದ ತೋಟಗಾರಿಕೆ ಉಪನಿರ್ದೇಶಕರ ಕಚೇರಿ ಆವರಣದಲ್ಲಿ ‘ಜಿಲ್ಲಾ ಮಟ್ಟದ ಮಾವು, ಬಾಳೆ ಬೆಳೆಗಳ ವಿಚಾರ ಸಂಕಿರಣ ಹಾಗೂ ತರಬೇತಿ’ ಕಾರ್ಯಕ್ರಮವನ್ನು ಏರ್ಪಡಿಸಿದೆ.
ವಿಚಾರ ಸಂಕಿರಣದಲ್ಲಿ ಮಾವು ಬೆಳೆಯ ಸಮಗ್ರ ಬೇಸಾಯ ತಾಂತ್ರಿಕ ಪದ್ಧತಿ, ಮಾವು ಬೆಳೆಯ ಸಮಗ್ರ ಕೀಟ ಮತ್ತು ರೋಗಗಳ ನಿರ್ವಹಣೆ, ಬಾಳೆ ಬೆಳೆಯ ಸಮಗ್ರ ಬೇಸಾಯ ತಾಂತ್ರಿಕ ಪದ್ಧತಿ, ಬಾಳೆ ಬೆಳೆಯ ಸಮಗ್ರ ಕೀಟ ಮತ್ತು ರೋಗಗಳ ನಿರ್ವಹಣೆ, ಹಣ್ಣುಗಳ ತಾಂತ್ರಿಕ ಬೇಸಾಯ ಪದ್ಧತಿ, ತೋಟಗಾರಿಕೆ ಬೆಳೆಗಳ ಸಂಸ್ಕರಣೆ ಮತ್ತು ಮಾರುಕಟ್ಟೆ ಕುರಿತು ಮಾಹಿತಿ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಮೊ.ಸಂ. 8970870918, 9538287992, 7022679182, 8197516149ನ್ನು ಸಂಪರ್ಕಿಸಬಹುದಾಗಿದೆ. ರೈತ ಬಾಂಧವರು ಈ ವಿಚಾರ ಸಂಕಿರಣದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx