ತುಮಕೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ನಗರದ ರೈಲ್ವೆ ಸ್ಟೇಷನ್ ರಸ್ತೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನವೆಂಬರ್ 30ರಂದು ಶನಿವಾರ ಬೆಳಿಗ್ಗೆ 10 ಗಂಟೆಗೆ 2024–25ನೇ ಸಾಲಿನ ತುಮಕೂರು ಜಿಲ್ಲಾ ಮಟ್ಟದ ಯುವಜನೋತ್ಸವ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.
ಈ ಯುವಜನೋತ್ಸವ ಕಾರ್ಯಕ್ರಮದಲ್ಲಿ 15 ರಿಂದ 29 ವರ್ಷದೊಳಗಿರುವ ವಿವಿಧ ಸಂಘ ಸಂಸ್ಥೆಗಳ ಯುವಕ/ಯುವತಿಯರು ಹಾಗೂ ವಿದ್ಯಾರ್ಥಿ/ ವಿದ್ಯಾರ್ಥಿನಿಯರು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಬಹುದಾಗಿದೆ.
ವಿಷಯಾಧಾರಿತ ಸ್ಪರ್ಧೆ: ಸಾಂಸ್ಕೃತಿಕ ಸ್ಪರ್ಧೆಯಡಿ ಕನ್ನಡ/ಆಂಗ್ಲ/ಹಿಂದಿ ಭಾಷೆಯಲ್ಲಿ ಜನಪದ ನೃತ್ಯ(ತಂಡ/ವೈಯಕ್ತಿಕ) ಹಾಗೂ ಜನಪದ ಗೀತೆ(ತಂಡ/ವೈಯಕ್ತಿಕ); ಜೀವನ ಕೌಶಲ್ಯ ಸ್ಪರ್ಧೆಯಡಿ ಕನ್ನಡ/ಆಂಗ್ಲ/ಹಿಂದಿ ಭಾಷೆಯಲ್ಲಿ ಕವಿತೆ ಬರೆಯುವುದು(ವೈಯಕ್ತಿಕ-1000 ಪದಗಳಿಗೆ ಮೀರದಂತೆ), ಕಥೆ ಬರೆಯುವುದು(1000 ಪದಗಳಿಗೆ ಮೀರದಂತೆ), ಚಿತ್ರಕಲೆ(ಂ3 ಅಳತೆ-11.7”x16.5”), ಭಾಷಣ ಸ್ಪರ್ಧೆ(ಹಿಂದಿ ಮತ್ತು ಆಂಗ್ಲ ಭಾಷೆಯಲ್ಲಿರಬೇಕು) ನಡೆಯಲಿದೆ.
ಸ್ಪರ್ಧೆಯೊಂದಿಗೆ ಗುಡಿ ಕೈಗಾರಿಕೆಯ ಕಲಾ ಪ್ರಕಾರ, ನೇಕಾರಿಕೆ/ಜವಳಿ, ಕೃಷಿ ಉತ್ಪನ್ನಗಳ ಪ್ರದರ್ಶನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ನಾವಿನ್ಯತೆ ವಿಷಯದಡಿ ಪೂರಕ ಪರಿಕರ/ ಉಪಕರಣಗಳ ಪ್ರದರ್ಶನವನ್ನು ಏರ್ಪಡಿಸಲಾಗಿದೆ.
ಸ್ಪರ್ಧಾಳುಗಳು ತಮ್ಮ ವಯಸ್ಸಿನ ದೃಡೀಕರಣ ಪತ್ರ, ಆಧಾರ್ ಕಾರ್ಡ್, 1 ಭಾವಚಿತ್ರ, ಐ.ಎಫ್.ಎಸ್. ಕೋಡ್ ಹೊಂದಿರುವ ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿಯೊಂದಿಗೆ ಸ್ಪರ್ಧೆಗಳಲ್ಲಿ ಭಾಗವಹಿಸಬಹುದಾಗಿದೆ. ಆಸಕ್ತಿಯುಳ್ಳ ಸಂಘ–ಸಂಸ್ಥೆಗಳ ಯುವಕ/ಯುವತಿಯರು ವಿದ್ಯಾರ್ಥಿ/ವಿದ್ಯಾರ್ಥಿನಿಯರು ನವೆಂಬರ್ 30ರಂದು ಬೆಳಿಗ್ಗೆ 9 ಗಂಟೆಗೆ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತುಮಕೂರು(ಮಂಜುನಾಥ್–ಮೊ.ಸಂ. 9741691379) ಅವರಲ್ಲಿ ನೋಂದಣಿ ಮಾಡಿಕೊಳ್ಳಬಹುದಾಗಿದೆ ಎಂದು ಇಲಾಖೆಯ ಸಹಾಯಕ ನಿರ್ದೇಶಕ ರೋಹಿತ್ ಗಂಗಾಧರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296