ಪಾವಗಡ: ಪಾವಗಡ ತಾಲೂಕಿನ ನಾಗಲಮಡಿಕೆ ಹೋಬಳಿಯ ಶ್ರೀರಂಗಪುರ ತಾಂಡಾದಲ್ಲಿರುವ ಅಂಗನವಾಡಿ ಕೇಂದ್ರ ಎಲ್ಲಾ ಅಂಗನವಾಡಿ ಕೇಂದ್ರಗಳಿಗೂ ಮಾದರಿಯಾಗಿದ್ದು, ಇಲ್ಲಿನ ಅಂಗನವಾಡಿ ಕಾರ್ಯಕರ್ತೆ ಸುಶೀಲಮ್ಮ ಎನ್ನುವವರು ಅನುಪಯುಕ್ತ ಪ್ಲಾಸ್ಟಿಕ್ ಅನ್ನು ಬಳಸಿಕೊಂಡು ಆಕರ್ಷಕ ವಸ್ತುಗಳನ್ನು ತಯಾರಿಸಿದ್ದು ಮತ್ತು ಮಕ್ಕಳಿಗೆ ಉತ್ತಮ ವಾತಾವರಣವನ್ನು ಅಂಗನವಾಡಿಯಲ್ಲಿ ಕಲ್ಪಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಶುಭಕಲ್ಯಾಣ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ
ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ಅಂಗನವಾಡಿಗೆ ಭೇಟಿ ನೀಡಿದ್ದ ಜಿಲ್ಲಾಧಿಕಾರಿಗಳು, ಮಕ್ಕಳಿಂದ ಕಲಿಕೆಯ ಪ್ರಗತಿ ವೀಕ್ಷಿಸಿ, ಸಾರ್ವಜನಿಕರಿಂದ ಗೃಹಲಕ್ಷ್ಮಿ ಹಣ ಪಾವತಿ ಬಗ್ಗೆ ಮಾಹಿತಿ ಪಡೆದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ಚೇತನ್ ಕುಮಾರ್ ಎಂ.ಎನ್., ಸಿಡಿಪಿಒ ಡಿ.ಜಿ ಸುನೀತಾ, ಕಾರ್ಯ ಕರ್ತ ಸುಶೀಲಮ್ಮ, ಮೇಲ್ವಿಚಾರಣೆ ಭಾಗ್ಯಲಕ್ಷ್ಮಿ ಹಾಜರಿದ್ದರು.
ಇದಕ್ಕೂ ಮೊದಲು ಅವರು ಪಟ್ಟಣದ ಬೀದಿ ಬದಿಯ ವ್ಯಾಪಾರಿಗಳಿಗೆ ಪಿಎಂ ಸ್ವನಿಧಿಯಿಂದ ಸಾಲ ಸೌಲಭ್ಯ ವಿತರಣೆ ಮಾಡಿದ್ದು ಸೌಲಭ್ಯ ಪಡೆದಾ ಫಲಾನುಭವಿಗಳಿಂದ ಮಾಹಿತಿ ಪಡೆದರು, ನಂತರ ತಿರುಮಣಿಯ ಸೋಲಾರ್ ಪಾರ್ಕ್ ಗೆ ಭೇಟಿ ನೀಡಿ ಪರಿಶೀಲಿಸಿದ್ದು, ನಂತರ ನಾಗಲಮಡಿಕೆ ಗ್ರಾಮದಲ್ಲಿ ಜೆಜೆಎಂ ಕಾಮಗಾರಿ ತುಂಗಭದ್ರಾ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಪ್ರಗತಿ ಹಾಗೂ ಮನೆಮನೆಗೂ ನೀರು ಸರಬರಾಜಿನ ಬಗ್ಗೆ ಗ್ರಾಮಸ್ಥರಿಂದ ಮಾಹಿತಿ ಸಂಗ್ರಹಿಸಿ ಸಮರ್ಪಕವಾಗಿ ನೀರಿನ ಸೌಲಭ್ಯ ನೀಡುವಂತೆ ಸೂಚಿಸಿದರು.
ನಾಗಲಮಡಿಕೆ, ಶ್ರೀರಂಗಪುರ ತಾಂಡದಲ್ಲಿ ಪಿಎಂ ಆವಾಸ್ ಯೋಜನೆಯಡಿ ನಿರ್ಮಿಸಲಾಗುತ್ತಿರುವ ಮನೆಗಳ ಪ್ರಗತಿ ಪರಿಶೀಲನೆ ಮಾಡಿದ ಮಾಡಿ ಕೆ.ರಾಮಪುರ ಗ್ರಾಮದ ಬಳಿ ನಿರ್ಮಾಣಗೊಳ್ಳುತ್ತಿರುವ ತುಮಕೂರು ರಾಯದುರ್ಗ ರೈಲ್ವೆ ಕಾಮಗಾರಿಯ ನಿಲ್ದಾಣವನ್ನು ಪರಿಶೀಲಿಸಿದರು ನಿಲ್ದಾಣಕ್ಕೆ ಕೆ.ರಾಮಪುರ ಎಂದು ನಾಮಕರಣ ಮಾಡುವಂತೆ ಮನವಿ ಮಾಡಿದಾಗ ಹಿಂದೆಯೇ ನನ್ನ ಗಮನಕ್ಕೆ ಬಂದಿತ್ತು, ರೈಲ್ವೆ ಸಚಿವರಿಗೆ ಹಾಗೂ ಇಲಾಖೆಯ ಅಧಿಕಾರಿಗಳಿಗೆ ಈ ಬಗ್ಗೆ ಚರ್ಚಿಸಲಾಗುವುದು ಎಂದರು.
ಜಿಲ್ಲಾಧಿಕಾರಿಗಳ ಜೊತೆ ಮಧುಗಿರಿ ಎಸಿ ಗೋಟುರು ಶಿವಪ್ಪ, ತಹಶೀಲ್ದಾರ್ ಡಿ.ಎನ್.ವರದರಾಜು, ವೈದ್ಯಾಧಿಕಾರಿ ಡಾ.ಜಿ.ಕಿರಣ್, ಎಡಿ ಮಾರುತಿ ಪ್ರಸಾದ್, ಆರ್ ಐ ಕಿರಣ್ ಕುಮಾರ್, ನಾರಾಯಣ ಗೌಡ, ಕುಡಿಯುವ ನೀರು ವಿಭಾಗದ ಇಂಜಿನಿಯರ್ ಕಾವ್ಯ, ಅಶೋಕ್, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರವಿಕುಮಾರ್, ಕೆಎಸ್ಪಿಡಿಸಿಎಲ್ ಎಇಇ ಮಹೇಶ್, ಚಿಕ್ಕಹಳ್ಳೀ ಪಿಡಿಒ ಅಕಲಪ್ಪ ಸೇರಿದಂತೆ ಹಲವರು ಹಾಜರಿದ್ದರು.
ವರದಿ: ನಂದೀಶ್ ನಾಯ್ಕ ಪಿ. ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4