ಡಿವೈಡರ್ ಗೆ ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಮೃತಪಟ್ಟ ಘಟನೆ ತುಮಕೂರು ಜಿಲ್ಲೆಯ ಹನುಮಂತಪುರ ಬ್ರಿಡ್ಜ್ ಬಳಿ ನಡೆದಿದೆ.
ಅಪಘಾತದಲ್ಲಿ ಮೃತ ಪಟ್ಟವರನ್ನು ಹಾವೇರಿ ಜಿಲ್ಲೆಯ ಸಚಿನ್ (21) ಮಲ್ಲಿಕಾರ್ಜುನ್ (24)ಎಂದು ಗುರುತಿಸಲಾಗಿದೆ.
ಇವರು ಬೆಂಗಳೂರಿನಿಂದ ಶಿರಾ ಕಡೆಗೆ ತೆರಳುತ್ತಿದ್ದ ವೇಳೆ ಹನುಮಂತಪುರದ ಬ್ರಿಡ್ಜ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಬೈಕ್ ಸವಾರರಿಬ್ಬರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ತುಮಕೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy