ಬೆಂಗಳೂರು: ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಫೋಟೋ ವೈರಲ್ ಆಗಿದ್ದು, ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ.
ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಡಿ.ಕೆ.ಶಿವಕುಮಾರ್, ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಅವರ ಜತೆಗಿರುವ ಫೋಟೋ ಕುರಿತು ಬಿಜೆಪಿ ನಾಯಕರು ಮಾತನಾಡುತ್ತಿದ್ದು, ತನಿಖಾಧಿಕಾರಿಗಳು ನನಗೆ ನೊಟೀಸ್ ನೀಡಿ ಕರೆದು, ತನಿಖೆ ಮಾಡಲಿ ಸವಾಲು ಹಾಕಿದರು.
ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್ ಅವರು, ‘ನನ್ನನ್ನು ಬಹಳ ಮಂದಿ ಭೇಟಿ ಮಾಡುತ್ತಾರೆ. ಈ ಫೋಟೋ ಯಾವುದು ಎಂದು ನನಗೆ ಗೊತ್ತಿಲ್ಲ. ಈಗ ನಮ್ಮ ಸ್ನೇಹಿತರು ಈ ವಿಚಾರದ ಬಗ್ಗೆ ಹೇಳಿದ್ದಾರೆ ಎಂದು ಹೇಳಿದರು.
ಪೊಲೀಸ್ ಅಧಿಕಾರಿಗಳು ಮೊದಲು ನನಗೆ ನೋಟೀಸ್ ಕೊಟ್ಟು ವಿಚಾರಣೆಗೆ ಕರೆಯಲಿ. ನಾನು ಮಂತ್ರಿಯಾಗಿ ಕೆಲಸ ಮಾಡಿದವನು. ಅವರು ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ನಿಯೋಗದೊಂದಿಗೆ ಬಂದಿದ್ದರು, ತಮ್ಮ ಸಮಸ್ಯೆ ಹೇಳಿಕೊಂಡು ಹೋದರು, ಅಷ್ಟೇ‘ ಎಂದರು.
ಬಿಜೆಪಿ ಇದೇ ವಿಚಾರವನ್ನು ಮುಂದಿಟ್ಟುಕೊಂಡು ನಿಮ್ಮ ವಿರುದ್ಧ ಮಾತನಾಡುತ್ತಿದ್ದಾರೆ ಎಂಬ ಪ್ರಶ್ನೆಗೆ, ಅವರು ನಮ್ಮ ಹೆಸರನ್ನು ಆಗಾಗ್ಗೆ ನೆನಪಿಸಿಕೊಳ್ಳುತ್ತಿರಬೇಕು, ನಮ್ಮ ಫೋಟೋ ಹಾಕಿಕೊಂಡು ಪ್ರಚಾರ ಮಾಡುತ್ತಿರಬೇಕು ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5


