ಕೋಲಾರ : ನಾಡಪ್ರಭು ಕೆಂಪೇಗೌಡರ 515ನೇ ಜಯಂತಿ ಪ್ರಯುಕ್ತ ಕೋಲಾರದಲ್ಲಿ ಅದ್ದೂರಿಯಾಗಿ ಆಚರಣೆ ಮಾಡಿದ ವೇಳೆ ಮಸೀದಿ ಎದುರು ಡಿಜೆ ಸೌಂಡ್ ಹಾಕಿರುವ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿದೆ.
ವಿವಿಧ ವಾದ್ಯಗಳೊಂದಿಗೆ ಕೆಂಪೇಗೌಡರ ಪಲ್ಲಕ್ಕಿಯನ್ನು ಕೋಲಾರ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮಾಡಲಾಗಿದೆ. ಈ ವೇಳೆ ಕೋಲಾರ ನಗರದ ಅರಹಳ್ಳಿ ಗೇಟಿ ಬಳಿ ಎರಡು ಗುಂಪುಗಳ ನಡುವೆ ಗಲಾಟೆಯಾಗಿದೆ. ಕೂಡಲೇ ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ ಎನ್ನಲಾಗಿದೆ.
ಇನ್ನು ಇದೇ ಕೋಲಾರದಲ್ಲಿ ನಡೆದ ಕೆಂಪೇಗೌಡ ಜಯಂತಿ ಮೆರವಣಿಗೆಯಲ್ಲಿ ಮಂಗಳಮುಖಿಯರು ಅಸಭ್ಯ ನೃತ್ಯ ಮಾಡಿದ್ದಾರೆ. ಸಾರ್ವಜನಿಕವಾಗಿ ಅರ್ಧಂಬರ್ಧ, ತುಂಡು ಬಟ್ಟೆ ತೊಟ್ಟು ಯುವಕರೊಂದಿಗೆ ಅಶ್ಲೀಲ ನೃತ್ಯ ಮಾಡಿದ್ದಾರೆ ಎಂದು ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


