ಯಾದಗಿರಿ: ಡಿ.ಕೆ.ಶಿವಕುಮಾರ್ಗೆ ಮುಖ್ಯಮಂತ್ರಿ ಆಗುವ ಯೋಗವಿದೆ ಎಂದು ನೊಣವಿನಕೆರೆ ಅಜ್ಜಯ್ಯ ಸ್ವಾಮೀಜಿ ಹೇಳಿಕೆ ನೀಡಿದ್ದು, ಶ್ರೀಮಠದ ಆಶೀರ್ವಾದದಿಂದ ಡಿಕೆಶಿ ಸಿಎಂ ಆಗ್ತಾರೆ ಎಂದಿದ್ದಾರೆ.
ಅಬ್ಬೆತುಮಕೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಇದು ರೈತರ, ವರ್ತಕರ ಹಾಗೂ ಮಠದ ಭಕ್ತರ ಆಸೆ. ಎಲ್ಲಾ ಜನರ ಸಂಕಲ್ಪದಿಂದ ಒಂದು ದಿನ ಸಿಎಂ ಆಗೇ ಆಗ್ತಾರೆ. ಯಾವ ದಿನ ಮುಖ್ಯಮಂತ್ರಿ ಆಗುತ್ತಾರೆ ಎಂಬುವುದನ್ನು ಹೇಳೋಕೆ ಆಗಲ್ಲ ಎಂದರು.
ಅಬ್ಬೆತುಮಕೂರು ವಿಶ್ವಾರಾಧ್ಯರ ಗದ್ದುಗೆಗೂ ಬಂದಿದ್ದೇನೆ. ಅವರ ಆಶೀರ್ವಾದವೂ ಡಿಕೆಶಿಗೆ ಸಿಗಲಿ. ಆ ಪರಮಾತ್ಮನ ಆಶೀರ್ವಾದವೂ ಡಿಕೆಶಿಗೆ ಸಿಗಲಿ ಎಂದು ಸ್ವಾಮೀಜಿ ಪ್ರಾರ್ಥನೆ ಮಾಡಿದ್ದಾರೆ. ರಾಜ ಪ್ರತ್ಯಕ್ಷ್ಯ ದೇವರಾಗಲಿ ಎಂದು ಹಾರೈಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4