ಬೆಂಗಳೂರು: ವರನಟ ದಿ.ಡಾ.ರಾಜ್ಕುಮಾರ್ ಅವರ ಕುಟುಂಬ ಶನಿವಾರ ಡಿಸಿಎಂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದೆ.
ನಟ ರಾಘವೇಂದ್ರ ರಾಜ್ಕುಮಾರ್ ಹಾಗೂ ಅಶ್ವಿನಿ ಪುನೀತ್ ರಾಜ್ಕುಮಾರ್ ಡಿಕೆಶಿ ದಂಪತಿಯನ್ನು ಭೇಟಿ ಮಾಡಿದ್ದು, ಪರಸ್ಪರ ಕುಶಲೋಪರಿ ವಿಚಾರಿಸಿದ್ದಾರೆ.
2023ರ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿರುವಾಗ ಗೀತಾ ಶಿವರಾಜ್ಕುಮಾರ್ ಅವರು, ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು. ಅಲ್ಲದೇ ಕಾಂಗ್ರೆಸ್ ಅಭ್ಯರ್ಥಿಗಳ ಪರ ಶಿವರಾಜ್ಕುಮಾರ್ ದಂಪತಿ ಪ್ರಚಾರ ಸಹ ನಡೆಸಿದ್ದರು. ಚುನಾವಣೆ ಮುಕ್ತಾಯಗೊಂಡ ನಂತರ ಇದೇ ಮೊದಲ ಬಾರಿಗೆ ಡಾ.ರಾಜ್ ಕುಟುಂಬ ಡಿ.ಕೆ ಶಿವಕುಮಾರ್ ಅವರನ್ನ ಭೇಟಿಮಾಡಿದ್ದು ವಿಶೇಷ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


