ಕಾಂಗ್ರೆಸ್ ಕರ್ನಾಟಕ ಕುರುಕ್ಷೇತ್ರ ಗೆದ್ದಾಗಿದೆ. ಪ್ರಚಂಡ ಬಹುಮತ ಪಡೆದಿರೋ ಕಾಂಗ್ರೆಸ್ನಲ್ಲಿ ಇದೀಗ ಸಿಎಂ ಕುರ್ಚಿ ಫೈಟ್ ತೀವ್ರಗೊಂಡಿದೆ. ಕೆಪಿಸಿಸಿ ಸಾರಥಿ ಡಿಕೆ ಶಿವಕುಮಾರ್ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ಸಿಎಂ ಕುರ್ಚಿಗಾಗಿ ಪಟ್ಟು ಹಿಡಿದಿದ್ದಾರೆ.
ಚುನಾವಣೆಗೂ ಮುನ್ನ ಒಗ್ಗಟ್ಟಿನ ಮಂತ್ರ ಜಪಿಸಿದ ಉಭಯ ನಾಯಕರು ಈಗ ಸಿಎಂ ಕುರ್ಚಿಗೆ ಪಟ್ಟು ಬಿಗಿಗೊಳಿಸಿದ್ದಾರೆ. ಸಿಎಂ ಹುದ್ದೆಯ ಪೈಪೋಟಿ ನಡುವೆಯೂ ಕಾಂಗ್ರೆಸ್ ನಾಯಕರು ಡಿ.ಕೆ.ಶಿವಕುಮಾರ್ ಅವರಿಗೆ ಕೇಕ್ ತಿನ್ನಿಸಿ ಹುಟ್ಟುಹಬ್ಬದ ಶಭಾಶಯ ಕೋರಿದರು.
ಸಿಎಂ ಹುದ್ದೆಗೆ ಪೈಪೋಟಿ ಇದ್ದರೂ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೇಕ್ ತಿನ್ನಿಸಿ, ಶುಭಾಶಯ ತಿಳಿಸಿದರು. ರಾಜ್ಯದ ಮೂಲೆಮೂಲೆಗಳಿಂದ ಕಾರ್ಯಕರ್ತರು, ಮುಖಂಡರು ಹುಟ್ಟುಹಬ್ಬದ ಶುಭಾಶಯ ಹೇಳುತ್ತಿರುವ ಹಿನ್ನೆಲೆ ಟ್ವಿಟ್ ಮೂಲಕ ಧನ್ಯವಾದ ತಿಳಿಸಿದ ಡಿ.ಕೆ.ಶಿವಕುಮಾರ ಅವರು, ನನ್ನ ಜೀವನ ಕರ್ನಾಟಕದ ಜನರ ಸೇವೆಗೆ ಮುಡಿಪಾಗಿದೆ. ನನ್ನ ಹುಟ್ಟುಹಬ್ಬದ ಮುನ್ನಾದಿನದಂದು, ಕರ್ನಾಟಕದ ಜನರು ನನಗೆ ಅತ್ಯುತ್ತಮ ಹುಟ್ಟುಹಬ್ಬದ ಉಡುಗೊರೆಯನ್ನು ನೀಡಿದ್ದಾರೆ ನನ್ನ ಕಾಂಗ್ರೆಸ್ ಕುಟುಂಬಕ್ಕೆ ಧನ್ಯವಾದಗಳು ಎಂದು ಟ್ವೀಟ್ ಮಾಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


