ತುಮಕೂರು: ತಿಪಟೂರು ತಾಲೂಕಿನಲ್ಲಿರುವ ನೊಣವಿನಕೆರೆ ಕಾಡಸಿದ್ದೇಶ್ವರ ಮಠಕ್ಕೆ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ ಶಿವಕುಮಾರ್ ಭೇಟಿ ನೀಡಿದ್ದಾರೆ. ಚುನಾವಣೆಯಲ್ಲಿ ಗೆದ್ದ ಬಳಿಕ ಮೊದಲ ಬಾರಿಗೆ ಅವರು ಭೇಟಿ ನೀಡಿದ್ದಾರೆ.
ಇದೇ ವೇಳೆ ಕರಿಬಸವ ಶ್ರೀಗಳ ಆಶೀರ್ವಾದವನ್ನು ಡಿಕೆಶಿ ಪಡೆಯಲಿದ್ದಾರೆ. ಬಳಿಕೆ ಕರಿಬಸವ ಶ್ರೀಗಳ ಗದ್ದುಗೆಯಲ್ಲಿ ವಿಶೇಷ ಪೂಜೆಯಲ್ಲಿ ಭಾಗಿಯಾಗಲಿದ್ದಾರೆ.
ಪತ್ನಿ ಉಷಾ, ಪುತ್ರ ಆಕಾಶ್, ಪುತ್ರಿ ಐಶ್ವರ್ಯ, ಅಳಿಯ ಅಮಾರ್ಥ್ಯ ಸಿದ್ದಾರ್ಥ್, ಪುತ್ರಿ ಆಭರಣ ಸೇರಿದಂತೆ ಕುಟುಂಬ ಸಮೇತ ಆಗಮಿಸಿದ್ದಾರೆ. ಸಂಸಾರ ಸಮೇತ ಮಠಕ್ಕೆ ಆಗಮಿಸಿದ ಡಿ.ಕೆ. ಶಿವಕುಮಾರ್ ಅವರನ್ನು ತಿಪಟೂರಿನ ನೂತನ ಶಾಸಕ ಷಡಕ್ಷರಿ ಹಾರ ಹಾಕಿ ಬರಮಾಡಿಕೊಂಡರು.
-
ಮಠದ ಹಿಂಬದಿಯಿಂದಿರುವ ಗವಿಗೆ ತೆರಳಿದ ಡಿಕೆಶಿ ಕುಟುಂಬ..
-
ಅಲ್ಲಿ ವಿಶೇಷ ಪೂಜೆ ನೆರವೇರಿಸಲಿರುವ ಡಿಕೆಶಿ..
-
ಕಳೆದ 15ದಿನಗಳ ಹಿಂದೆ ಇದೇ ಗವಿಯಲ್ಲಿ ಪೂಜೆ ಸಲ್ಲಿಸಿದ್ದ ಡಿಕೆಶಿ ಫ್ಯಾಮಿಲಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


