ಬೆಂಗಳೂರು: ಮೇ 15ರಂದು ಡಿ.ಕೆ. ಶಿವಕುಮಾರ್ ರವರ 60ನೇ ವರ್ಷದ ಹುಟ್ಟುಹಬ್ಬವಾಗಿತ್ತು.ಹುಟ್ಟು ಹಬ್ಬ ಪ್ರಯುಕ್ತ ಅದೇ ದಿನ ಸಂಜೆ ಸಣ್ಣ ಮಟ್ಟದ ಕಾರ್ಯಕ್ರಮವನ್ನು ಆಯೋಜಿಸಿದ್ದರು ಅದರಲ್ಲಿ ಪ್ರಿಯಾಂಕಾ ಗಾಂಧಿ ಸಹ ಭಾಗಿಯಾಗಿದ್ದರು. ಅಲ್ಲಿ ನಡೆದ ಪ್ರಿಯಾಂಕಾ ಗಾಂಧಿ ಕೇಕ್ ತಿನ್ನಿಸದ ಪ್ರಸಂಗವನ್ನು ರಾಜ್ಯ ಬಿಜೆಪಿ ಟೀಕಿಸಿದೆ.
ಡಿಕೆಶಿ ಹುಟ್ಟುಹಬ್ಬದ ಸಂದರ್ಭದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಕೇಕ್ ತಿನ್ನಿಸದ ವಿಚಾರವಾಗಿ ಸರಣಿ ಟ್ವೀಟ್ ಮಾಡಿ ವ್ಯಂಗ್ಯ ಮಾಡಿದ್ದಾರೆ.ಬಿಜೆಪಿಯುವರು ಡಿಕೆ ಶಿವಕುಮಾರ್ ಅವರನ್ನು ಹರಕೆಯ ಕುರಿಗೆ ಹೋಲಿಸಿದ್ದಾರೆ ನೀವೆಷ್ಟೇ ಗುಲಾಮಗಿರಿ, ಚಮಚಾಗಿರಿ ಮಾಡಿದರೂ ನಕಲಿ ಗಾಂಧಿಗಳು ನಿಮ್ಮನ್ನು ಇಡುವಲ್ಲಿ ಸ್ಧಾನದಲ್ಲಿ ಇಡುತ್ತಾರೆ ಎಂದಿದ್ದಾರೆ.
ಹೈಕಮಾಂಡ್ ಮಟ್ಟದಲ್ಲಿ ಟ್ರಬಲ್ ಶೂಟರ್ ಎನಿಸಿಕೊಂಡಿರುವ ಡಿಕೆಶಿ ಅವರ ಹುಟ್ಟುಹಬ್ಬದ ಕೇಕ್ ತಿನ್ನಿಸುವಷ್ಟೂ ಪ್ರಿಯಾಂಕಾ ಗಾಂಧಿಗೆ ಸೌಜನ್ಯವಿಲ್ಲ, ಬೆರೊಬ್ಬ ವ್ಯಕ್ಕಿಯ ಕೈಯಲ್ಲಿ ಕೇಕ್ ತಿನ್ನಿಸುವ ಪ್ರಮೇಯವೇನಿತ್ತು? ಎಂದು ಪ್ರಶ್ನಿಸಿದ್ದಾರೆ.
ದೇಶ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಿಸುತ್ತಿರುವ ಈ ಸಮುಯದಲ್ಲಿ ನಕಲಿ ಗಾಂಧಿ ವಂಶದವರು ಡಿಕೆ ಶಿವಕುಮಾರ್ ಅವರನ್ನು ಮೂರನೇ ದರ್ಜೆಯವರಂತೆ ನಡೆಸಿಕೊಳ್ಳುತ್ತಿದ್ದಾರೆ ಎಂದು ಟೀಕಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB