ಬೆಂಗಳೂರು: ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ಚೈನ್ ಲಿಂಕ್ ಮುರಿದು ಹೋದ ಪರಿಣಾಮ ಅಪಾರ ನೀರು ಡ್ಯಾಂನಿಂದ ನದಿಗೆ ಹರಿದು ಹೋಗುತ್ತಿದೆ.
ಈ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ, ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಭಾನುವಾರ ಮಧ್ಯಾಹ್ನ ಹೊಸಪೇಟೆಗೆ ಆಗಮಿಸಲಿದ್ದಾರೆ.
ಕೊಪ್ಪಳ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಜನಪ್ರತಿನಿಧಿಗಳ ಸಭೆ ಕರೆದಿರುವ ಡಿಕೆಶಿ, ಇದಕ್ಕೂ ಮೊದಲು ಚೈನ್ ಲಿಂಕ್ ಮುರಿದಿರುವ ಕುರಿತು ಅಧಿಕಾರಿಗಳಿಂದ ವರದಿ ಕೇಳಿದ್ದಾರೆ.
ಕೊಪ್ಪಳ–ಹೊಸಪೇಟೆ ಗಡಿಯ ಮುನಿರಾಬಾದ್‌ನಲ್ಲಿ ತುಂಗಭದ್ರಾ ಡ್ಯಾಂ ಇದೆ. ಶನಿವಾರ ಮಧ್ಯರಾತ್ರಿ ಡ್ಯಾಂನ ಕ್ರೆಸ್ಟ್ ಗೇಟ್ ನಂಬರ್ 19ರ ಚೈನ್ ಲಿಂಕ್ ಮುರಿದು ಹೋಗಿದೆ. ಆದ್ದರಿಂದ ಜಲಾಶಯದ ನೀರು ವ್ಯರ್ಥವಾಗಿ ನದಿಗೆ ಹರಿದು ಹೋಗುತ್ತಿದೆ.
ಸದ್ಯ ಜಲಾಶಯದಿಂದ ತುಂಗಭದ್ರಾ ನದಿಗೆ 1.35 ಲಕ್ಷ ಕ್ಯೂಸೆಕ್ ನೀರು ಹರಿದು ಹೋಗುತ್ತಿದೆ. ಗೇಟ್ ನಂಬರ್ 19ರ ಮೇಲೆ ಒತ್ತಡ ಹೆಚ್ಚಾಗಿದ್ದು, ಈ ಒಂದು ಗೇಟ್‌ನಿಂದಲೇ 35 ಸಾವಿರ ಕ್ಯುಸೆಕ್‌ಗೂ ಅಧಿಕ ನೀರು ನದಿಗೆ ಹೋಗುತ್ತಿದೆ. ಗೇಟ್ ಮುರಿದಿರುವ ಪರಿಣಾಮ ಭಾನುವಾರ ಡ್ಯಾಂಗೆ ಜನರ ಭೇಟಿಯನ್ನು ನಿಷೇಧಿಸಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


